ಸರ್ಕಾರದಿಂದ ಹೊರ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್, ಏಕರೂಪ ವೇತನ ಜಾರಿಗೆ ಕ್ರಮ.
ಈಗಾಗಲೇ ಕೇಂದ್ರ ಸರ್ಕಾರಿ ನೌಕರಿಗೆ 7ನೇ ವೇತನ ಆಯೋಗದ (7th pay commission) ದೊರೆತಿದ್ದು, ಎಲ್ಲರೂ ಖುಷಿಯಲ್ಲಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರದ ಮಾದರಿಯ ಸೌಲಭ್ಯ ಸಿಗಬೇಕು. ಎಂಬ ನಿಟ್ಟಿನಲ್ಲಿ ಕೇಂದ್ರ (central) ಮತ್ತು ರಾಜ್ಯ ಸರ್ಕಾರಿ ನೌಕರರ (state government employees) ನಡುವಿನ ವೇತನ ತಾರತಮ್ಯ ಹೋಗ ಲಾಡಿಸಿ ಏಕರೂಪ ವೇತನ ಜಾರಿ ಕ್ರಮ ತರಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ವರ್ಗಾವಣೆ ಕೌನ್ಸೆಲಿಂಗ್ ಅನ್ನು ಸೆಪ್ಟೆಂಬರ್ ಮೊದಲ ವಾರದೊಳಗೆ ಪೂರ್ಣಗೊಳಿಸಬೇಕು :
ಆರೋಗ್ಯ ಇಲಾಖೆಯಲ್ಲಿ ಎಂಟು ವರ್ಷಗಳ ನಂತರ ನಡೆಯುತ್ತಿರುವ ವರ್ಗಾವಣೆ ಕೌನ್ಸೆಲಿಂಗ್ (counselling) ಅನ್ನು ಸೆಪ್ಟೆಂಬರ್ ಮೊದಲ ವಾರದೊಳಗೆ ಪೂರ್ಣಗೊಳಿಸುವಂತೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಏಕರೂಪ ವೇತನ ಜಾರಿ (Implementation of Uniform Wage) ಕುರಿತು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ :
ವೈದ್ಯಾಧಿಕಾರಿಗಳ ಜೇಷ್ಠತಾ ಪಟ್ಟಿ ಸೆಪ್ಟೆಂಬರ್ ಮೊದಲ ವಾರದಲ್ಲಿ ತಯಾರಾಗಬೇಕು. ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರಿಗೆ ಏಕರೂಪ ವೇತನ ಜಾರಿ ಕುರಿತು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆಸ್ಪತ್ರೆಗಳು ಸೇರಿದಂತೆ, ಹೋಟೆಲ್, ರೆಸ್ಟೋರೆಂಟ್ ಗಳ ತಪಾಸಣೆ :
ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆಯಾಗದಂತೆ ಕ್ರಮ ವಹಿಸಬೇಕು. ಆರೋಗ್ಯ ಸೇವೆಗಳ (Health facilities) ಕುರಿತು ಸಾರ್ವಜನಿಕ ದೂರುಗಳಿಗೆ 104 ಸಹಾಯವಾಣಿಗೆ ಪರ್ಯಾಯವಾಗಿ 112 ಸಹಾಯವಾಣಿ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಚಿವರು ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ