ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹ್ವಾನ, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಅವಕಾಶ, ಇದರ ಬಗ್ಗೆ ಮಾಹಿತಿ ಇಲ್ಲಿದೆ!
ರೇಷನ್ ಕಾರ್ಡ್ (Ration card) ಇಂದು ಮುಖ್ಯ ದಾಖಲೆಗಲ್ಲಿ ಒಂದಾಗಿದೆ. ಹಲವಾರು ರೀತಿಯ ಪ್ರಯೋಜನಗಳನ್ನು ರೇಷನ್ ಕಾರ್ಡ್ ಮೂಲಕ ಪಡೆಯುತೇವೆ. ರೇಷನ್ ಕಾರ್ಡ್ ನಲ್ಲಿ ಹಲವಾರು ರೀತಿಯ ಬದಲಾವಣೆಗಳನ್ನು (Updates) ಮಾಡಲಾಗಿದೆ. ಮತ್ತು ಸರ್ಕಾರ ಹೊಸ ಬದಲಾವಣೆಗಳನ್ನು ಮಾಡುತ್ತಲೇ ಇದೆ. ಹಾಗೆಯೇ ಇದೀಗ ಸರ್ಕಾರದಿಂದ ಗುಡ್ ನ್ಯೂಸ್ ತಿಳಿದು ಬಂದಿದೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೊಸ ರೇಷನ್ ಕಾರ್ಡ್(new ration card) ಗೆ ಅರ್ಜಿ ಸಲ್ಲಿಸಲು ಅಥವಾ ತಿದ್ದುಪಡಿಗೆ ಅರ್ಜಿ ಅಹ್ವಾನ :
ಇದೀಗ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಅರ್ಜಿಯನ್ನು (Application) ಸಲ್ಲಿಸಲು ಮತ್ತು ಹಲವು ತಿದ್ದುಪಡಿ ಗಳನ್ನು ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಹಾಕಲು ಮತ್ತು ರೇಷನ್ ಕಾರ್ಡ್ ನಲ್ಲಿ ಇರುವಂತಹ ಯಾವುದೇ ವಿವರಗಳನ್ನು ತಿದ್ದುಪಡಿ ಮಾಡಲು ಬಯಸುವವರಿಗೆ ಇದು ಬಹಳ ಸಹಾಯಕವಾಗಿದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ :
ಇಂದು ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಹಾಕಲು ಕಾಯುತ್ತಿದ್ದಾರೆ. ಅಸ್ಟೇ ಅಲ್ಲದೆ ಹಲವು ರೀತಿಯ ತಿದ್ದುಪಡಿಗಳನ್ನು ರೇಷನ್ ಕಾರ್ಡ್ ನಲ್ಲಿ ಮಾಡಲು ಅಂದರೆ ಹೆಸರು ಸೇರ್ಪಡೆ ವಿಳಾಸದ ಬದಲಾವಣೆ ಹೀಗೆ ಹಲವಾರು ಕೆಲಸಗಳನ್ನು ಮಾಡಲು ಕಾಯುತ್ತಿದ್ದಾರೆ. ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿಗೆ ಸುಧೀರ್ಘವಾದ ಅವಕಾಶವನ್ನು ಸರ್ಕಾರದ ಕಡೆಯಿಂದ ನೀಡಲಾಗಿತ್ತು. ಆದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಹಾಕಲು ಅವಕಾಶ ನೀಡಿರಲಿಲ್ಲ ಹಾಗಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಜನರು ಯಾವಾಗ ಅವಕಾಶ ಮಾಡಿಕೊಡಲಾಗುತ್ತಿದೆ.
ರೇಷನ್ ಕಾರ್ಡ್ ಹೊಂದುವುದರ ಪ್ರಯೋಜನಗಳು :
ರಾಜ್ಯ ಸರ್ಕಾರದ ಕಡೆಯಿಂದ ಒಂದು ರೇಷನ್ ಕಾರ್ಡ್ ನಿಮ್ಮ ಕುಟುಂಬದಲ್ಲಿ ಇದ್ದರೆ, ಆರರಿಂದ ಎಂಟು ಸಾವಿರ ರೂಪಾಯಿಗಳ ಹಣವನ್ನು ಕೂಡ ಪ್ರತಿ ತಿಂಗಳು ಪಡೆದುಕೊಳ್ಳಬಹುದಾಗಿದೆ. ಈ ಕಾರಣದಿಂದಾಗಿಯೇ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಹಾಕಲು ಕಾಯುತ್ತಿದ್ದಾರೆ. ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಆಹಾರ ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪ (KH Muniyappa) ರವರು ಮಾಹಿತಿ ನೀಡಿದ್ದು ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಹೊಸ ರೇಷನ್ ಕಾರ್ಡ್ ಗಳ ಅರ್ಜಿಯನ್ನು ನಮ್ಮ ರಾಜ್ಯದಲ್ಲಿ ಹಾಕಲಾಗಿದೆಯಂತೆ.
ಹೊಸ ರೇಷನ್ ಕಾರ್ಡ್ ಗಳ ವಿತರಣೆಗೆ ಕ್ಷಣ ಗಣನೆ :
ಈಗಾಗಲೇ ಈ ರೇಷನ್ ಕಾರ್ಡ್ ಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತಿದ್ದು ಹೊಸ ರೇಷನ್ ಕಾರ್ಡ್ ಗಳ ವಿತರಣೆಯನ್ನು ಸೆಪ್ಟೆಂಬರ್ (September) ಮೊದಲ ವಾರದಲ್ಲಿ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿದ್ದಾರೆ. ಹೊಸ ರೇಷನ್ ಕಾರ್ಡ್ ಗಳ ಅರ್ಜಿಯನ್ನು ವಿತರಣೆಯಾದ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 15ರಿಂದ 30ನೇ ತಾರೀಕಿನ ಒಳಗೆ ಯಾವುದಾದರೂ ಒಂದು ದಿನದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿಸಿದ್ದಾರೆ.
ಸೆಪ್ಟೆಂಬರ್ ನಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ :
ಸೆಪ್ಟೆಂಬರ್ ನಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬುದರ ಬಗ್ಗೆ ಆಹಾರ ಇಲಾಖೆಯ ಸಚಿವರಾದ ಕೆಎಚ್ ಮುನಿಯಪ್ಪ ರವರು ಅರ್ಜಿಯನ್ನು ಸಲ್ಲಿಸುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿ ತಿಳಿಸಿದ್ದಾರೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು (Documents) :
ಜಾತಿ ಪ್ರಮಾಣ ಪತ್ರ.
ಆದಾಯ ಪ್ರಮಾಣ ಪತ್ರ.
ಜನನ ಪ್ರಮಾಣ ಪತ್ರ.
ಆಧಾರ್ ಕಾರ್ಡ್.
ಪಾಸ್ಪೋರ್ಟ್ ಸೈಜ್ ಫೋಟೋ.
ಅರ್ಜಿ ಸಲ್ಲಿಸುವ ವಿಧಾನ (Steps of applying application) :
ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಸರ್ಕಾರದ ಕೇಂದ್ರಗಳಾದಂತಹ ಕರ್ನಾಟಕವನ್ ಗ್ರಾಮವನ್(Gram one) ಬೆಂಗಳೂರು ಒನ್ ಹಾಗೂ ಸೇವಾ ಸಿಂಧು ಪೋರ್ಟಲ್(seva sindhu portal) ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ