ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್, ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗೆ ದೊರೆಯಲಿದೆ ಸಾಲ, ಸಹಾಯಧನ!
ಕೇಂದ್ರ ಸರ್ಕಾರ(central government)ವು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ, ಕೂಲಿ ಕಾರ್ಮಿಕರಿಗೆ ಮಹಿಳೆಯರಿಗೆ, ಉತ್ತಮ ಜೀವನನ್ನು ರೂಪಿಸಲು ಸಹಾಯ ಮಾಡಿದೆ. ಇಂದು ಜನರಿಗೆ ಎಲ್ಲಾ ರೀತಿಯ ಸಾಲ ಸೌಲಭ್ಯ, ಸಹಾಯ ಧನ ಸರ್ಕಾರದಿಂದ ದೊರೆಯುತ್ತದೆ. ಅದರಲ್ಲೂ ಮಹಿಳೆಯರಿಗಾಗಿ ರಾಜ್ಯ (state) ಹಾಗೂ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಸಹಾಯಧನ, ಸಾಲ ಸೌಲಭ್ಯ(Loan facilities) ಜೊತೆಗೆ ಸಬ್ಸಿಡಿ(subsidy)ಯನ್ನು ನೀಡುತ್ತಿದೆ. ಇದೀಗ ವಿವಿಧ ಯೋಜನೆಯಡಿಯಲ್ಲಿ ಸಾಲ ಹಾಗೂ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ. ಇದರ ಕುರಿತ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ. ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನಾಂಗದವರಿಂದ ಅರ್ಜಿ ಆಹ್ವಾನಿಸಿದೆ.
ಯಾವ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ :
ಗಂಗಾ ಕಲ್ಯಾಣ ಯೋಜನೆ(Ganga kalyana scheme)
ಮೈಕ್ರೋ ಕ್ರೆಡಿಟ್ ಯೋಜನೆ
ಉದ್ಯಮಶೀಲತಾ ಯೋಜನೆಗಳಿಗೆ (ಬ್ಯಾಂಕುಗಳ ಸಹಯೋಗದೊಂದಿಗೆ)ಅರ್ಜಿ ಆಹ್ವಾನಿಸಲಾಗಿದೆ.
ಮೈಕ್ರೋ ಕ್ರೆಡಿಟ್ ಯೋಜನೆ (Micro credit scheme) :
ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ವಿವಿಧ ಎಸ್.ಸಿ/ ಎಸ್.ಟಿ ನಿಗಮಗಳಿಂದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಅಂದರೆ ಕನಿಷ್ಠ 10 ಜನ ಸದಸ್ಯರಿರುವ ಸಂಘಗಳಿಗೆ ಕಿರು ಉದ್ಯಮಿಯನ್ನು ಆರಂಭಿಸಲು ಮೈಕ್ರೋ ಕ್ರೆಡಿಟ್ ಸಾಲ(micro finance) ಮತ್ತು ಸಬ್ಸಿಡಿ ನೀಡಲು ಪ್ರಾರಂಭವಾಗಿದೆ.
ಮೈಕ್ರೋ ಕ್ರೆಡಿಟ್ ಯೋಜನೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂ., ಸಹಾಯಧನ 1.50 ಲಕ್ಷ ರೂ., ಸಾಲ 1 ಲಕ್ಷ ರೂ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Last date) :
ಮೈಕ್ರೋ ಕ್ರೆಡಿಟ್ ಯೋಜನೆಯಡಿ ಸಾಲ(finance loan) ಮತ್ತು ಸಾಲಕ್ಕೆ ಸಹಾಯಧನವನ್ನು ಪಡೆಯಲು ಆನ್ಸೆನ್ ಮೂಲಕ ಅರ್ಜಿ ಸಲ್ಲಿಸಲು 10 ಅಕ್ಟೋಬರ್ 2024 ಕೊನೆಯ ದಿನಾಂಕವಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು (Documents) :
ಸ್ವ-ಸಹಾಯ ಸಂಘ ನೋಂದಣಿಯಾಗಿರುವುದರ ಪ್ರಮಾಣ ಪತ್ರ ಮತ್ತು ಪೂರಕ ದಾಖಲೆಗಳು
ಆಧಾರ್ ಕಾರ್ಡ
ಸಂಘದ ಬ್ಯಾಂಕ್ ಪಾಸ್ ಬುಕ್
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು (Qualifications) :
ಅರ್ಜಿದಾರರು ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.
ಸಂಘವು ಅರ್ಥಿಕ ಆದಾಯ ತರಬಲ್ಲ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
ಎಸ್.ಸಿ/ಎಸ್.ಟಿ ವರ್ಗಕ್ಕೆ ಸೇರಿದ ಸ್ವ-ಸಹಾಯ ಸಂಘವಾಗಿರಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ (How to apply application) :
ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ನಿಮ್ಮ ಮೊಬೈಲ್ ನಲ್ಲಿ ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ sevasindhu ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಆನ್ನೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ವೆಬೈಟ್ ಗೆ ಭೇಟಿ ನೀಡಿ.
Step-2: ನಂತರ ಇಲ್ಲಿ ಮೊದಲ ಬಾರಿಗೆ ಈ
ಜಾಲತಾಣವನ್ನು ಪ್ರವೇಶ ಮಾಡುತ್ತಿದ್ದರೆ ನಿಮ್ಮ ಮೊಬೈಲ್ ನಂಬರ್ ಇತರೆ ವಿವರವನ್ನು ಹಾಕಿ ನೊಂದಣಿ ಮಾಡಿಕೊಂಡು ಲಾಗಿನ್ ವಿವರವನ್ನು ನಮೂದಿಸಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಲಾಗಿನ್ ಮಾಡಿಕೊಳ್ಳಿ.
Step-3: ಲಾಗಿನ್ ಅದ ನಂತರ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ “ಮೈಕ್ರೋ ಕ್ರೆಡಿಟ್ ಯೋಜನೆ ” ಎಂದು ಸರ್ಚ ಮಾಡಿ “Apply Now” ಬಟನ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.
ಗಮನಿಸಿ (Notice) :
ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಕೂಡ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ