ರಾಜ್ಯದ ಈ 9 ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ(Heavy rainfall)! ಇಂದಿನಿಂದ ಉತ್ತರ ಕರ್ನಾಟಕದಲ್ಲಿ ‘ಯೆಲ್ಲೋ ಅಲರ್ಟ್
ಸೆಪ್ಟೆಂಬರ್ ಅಂತ್ಯದವರೆಗೂ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆ ಕೆಲವರಿಗೆ ಸಂತೋಷ ಉಂಟುಮಾಡಿದರೆ, ಇನ್ನು ಕೆಲವರಿಗೆ ಕಷ್ಟಗಳನ್ನು ಹೆಚ್ಚುಮಾಡುತ್ತದೆ. ಆದ್ದರಿಂದ ಜನರು ಮಳೆಯ ವಿಚಾರದಲ್ಲಿ ಹೆಚ್ಚು ಎಚ್ಚರವಾಗಿರಲು ನಮ್ಮ ಸರ್ಕಾರ (government) ರಾಜ್ಯದ ಜನರಿಗೆ ಮಳೆಯ ಮುನ್ಸೂಚನೆಯನ್ನು ನೀಡುತ್ತಲೇ ಇರುತ್ತದೆ. ಇದರಿಂದ ರೈತರಿಗೆ ಹಾಗೂ ಮೀನುಗಾರರಿಗೆ, ಕೆಲಸಕ್ಕೆ ಹೋಗುವ ಜನರಿಗೆ ಹೀಗೆ ಎಲ್ಲರಿಗೂ ಕೂಡ ಉಪಕಾರವಾಗುತ್ತದೆ. ಇದೀಗ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ. ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೌದು, ಕರ್ನಾಟಕದಲ್ಲಿ ಮಳೆಗಾಲದಲ್ಲಿಯೇ ಮುಂಗಾರು ಮಳೆ ಆರ್ಭಟ ತಗ್ಗಿದೆ ಎಂದು ಅಂದುಕೊಳ್ಳುವಷ್ಟರಲ್ಲಿ ಉತ್ತರ ಕರ್ನಾಟಕದಾದ್ಯಂತ ಅಬ್ಬರಿಸಲು ವರುಣ ಸಜ್ಜಾಗಿದ್ದಾನೆ. ಹೌದು, ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ (some districts) ವರುಣ ಕೃಪೆ ತೋರಿದ್ದು ಮುಂದಿನ 48 ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಇಲಾಖೆ ತಜ್ಞ ಡಾ.ಸಿಎಸ್ ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ.
ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿರುವ ಪ್ರಕಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಮುಂಗಾರು ಮಳೆ ಚುರುಕಾಗಿರುವ ಕಾರಣ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದರು.
ಉತ್ತರ ಒಳನಾಡಿನ ಈ 9 ಜಿಲ್ಲೆಗಳಿಗೂ (9 districts) ಕೂಡ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸೆಪ್ಟೆಂಬರ್ 21 ರಿಂದಲೇ ಯೆಲ್ಲೋ ಅಲರ್ಟ್ (yellow alert) ಘೋಷಿಸಿದ್ದು, ಹಾಗೂ ಮುಂದಿನ ಕೆಲವು ದಿನಗಳು ಬೆಂಗಳೂರಿನ ಕೆಲವು ಕಡೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather department) ಮುನ್ಸೂಚನೆ ನೀಡಿದೆ. ಒಟ್ಟಾರೆ ಸೆಪ್ಟೆಂಬರ್ 20ರಿಂದ ಶುರುವಾಗಿರುವ ಮಳೆ ಇಂದು ಸಂಜೆಯವರೆಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬೀಳಲಿದೆ.
ಸೋಮವಾರ ಅಂದರೆ ಸೆಪ್ಟೆಂಬರ್ 23 ರಂದು ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಮತ್ತು ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸುಮಾರು 11 ಸೆಂಟಿ ಮೀಟರ್‌ಗಳಷ್ಟು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಆದ್ದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಉಳಿದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ತಜ್ಞರು ಏನು ಹೇಳುತ್ತಾರೆ :
ಜೂನ್ 1 ರಿಂದ ಸೆಪ್ಟೆಂಬರ್ 21 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಈಗಿರುವ ಹವಾಮಾನ ಸ್ಥಿತಿಯ ಪ್ರಕಾರ ಕರ್ನಾಟಕದ ರಾಜ್ಯದ್ಯಂತ ಗಾಳಿಯು ಪಶ್ಚಿಮ ಹಾಗೂ ವಾಯುವ್ಯ ದಿಕ್ಕಿನಿಂದ ಬೀಸತ್ತಿದೆ. ಆದ್ದರಿಂದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21 ರಿಂದ 27ರವರಿಗೂ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 21 ರಿಮದ 25 ರವರೆಗೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಈ ಮಾಹಿತಿಗಳನ್ನು ಓದಿ