ದಸರಾ ಹಬ್ಬ: ರಾಜ್ಯದ ಈ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ.. ಇಲ್ಲಿದೆ ಡೀಟೇಲ್ಸ್!

IMG 20240924 WA0001

ದಸರಾ ರಜೆಯ ಪ್ರಯುಕ್ತ ಸರ್ಕಾರದ ಮಹತ್ತರ ನಿರ್ಧಾರ!. ರಾಜ್ಯದ 34 ರೈಲುಗಳಿಗೆ (34 Trains) ಹೆಚ್ಚುವರಿ ಭೋಗಿ ಅಳವಡಿಕೆ (Additional Coaches).

ನಮ್ಮ ಕರ್ನಾಟಕದಲ್ಲಿ ಕಲೆ ಸಂಸ್ಕೃತಿ ಎಂದರೆ ಎಲ್ಲರಿಗೂ ಹರುಷ. ಕರ್ನಾಟಕದ ಜನತೆಗೆ ಬಹಳ ಇಷ್ಟವಾಗುವಂತಹ ಕೆಲವೊಂದು ಧಾರ್ಮಿಕ ಹಬ್ಬಗಳಿಗೆ ಜನರು ಊರಿನಿಂದ ಊರಿಗೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅದರಲ್ಲೂ ಇನ್ನೇನು ಕೆಲವು ದಿನಗಳಲ್ಲಿ ಹಳ್ಳಿಯಿಂದ ಹಿಡಿದು ದೇಶವಿದೇಶದ ಜನರನ್ನು ಆಕರ್ಷಿಸುವ ನವರಾತ್ರಿ(Navaratri), ವಿಜಯ ದಶಮಿ, ದಸರಾ ಹಬ್ಬ, ಜಂಬೂ ಸವಾರಿ ಎಂದೆಲ್ಲ ಕರೆಯಲ್ಪಡುವ ನಾಡ ಹಬ್ಬ ದಸರವು (Dasara) ಪ್ರಾರಂಭವಾಗುತ್ತಿದೆ. ಇನ್ನು ಇದೇ ಸಂದರ್ಭದಲ್ಲಿ ಶಾಲಾ ಕಾಲೇಜುಗಳಿಗೂ ಕೂಡ ದಸರಾ ರಜಾ(Dasara holidays) ಎಂದು ರಜೆಯನ್ನು ಕೂಡ ಸರ್ಕಾರ (government) ಘೋಷಿಸುತ್ತದೆ. ವಿಜೃಂಭಣೆಯಿಂದ ಆಚರಿಸಲ್ಪಡುವ ನಾಡ ಹಬ್ಬ ದಸರಾವನ್ನು ವೀಕ್ಷಿಸಲು ದೇಶದ ಮೂಲೆ ಮೂಲೆಗಳಿಂದ ಜನ ಮೈಸೂರಿಗೆ ಬರುತ್ತಾರೆ. ಹಾಗೂ ಕರ್ನಾಟಕ ರಾಜ್ಯದ (Karnataka state) ಎಲ್ಲ ಜಿಲ್ಲೆಗಳಿಂದ ಹಾಗೂ ಹಳ್ಳಿಹಳ್ಳಿಯಿಂದ ಈ ಹಬ್ಬವನ್ನು ವೀಕ್ಷಿಸಲು ಜನರು ಬರುತ್ತಾರೆ. ಆದ್ದರಿಂದ ಪ್ರಯಾಣದ ದೃಷ್ಟಿಯನ್ನು ಇಟ್ಟುಕೊಂಡು ಸರ್ಕಾರವು  ರಾಜ್ಯದ 34 ರೈಲುಗಳಿಗೆ (34 Trains) ಹೆಚ್ಚುವರಿ ಭೋಗಿ ಅಳವಡಿಕೆಯನ್ನು (Additional Coaches) ಮಾಡುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು ದಸರಾ ಹಬ್ಬದ ಪ್ರಯುಕ್ತ ಕರ್ನಾಟಕದಲ್ಲಿ (karnataka) ಸಂಚಾರ ನಡೆಸುವ ಒಟ್ಟು 34 ರೈಲುಗಳಿಗೆ (34 Trains) ಹೆಚ್ಚುವರಿ ಭೋಗಿಗಳನ್ನು (Additional Coaches) ಅಳವಡಿಕೆ ಮಾಡಲು ನಿರ್ಧರಿಸಲಾಗಿದೆ. ದೂರದ ಪ್ರಯಾಣವನ್ನು ಮಾಡುವಂತಹ ಜನರು ರೈಲು ಪ್ರಯಾಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾರೆ. ಈ ನಡುವೆ ಜನಘಟ್ಟನೇ ಹೆಚ್ಚಾಗಿ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯನ್ನು ಇಟ್ಟುಕೊಂಡು ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ಈ ಬಗ್ಗೆ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಹಬ್ಬದ ಸಂದರ್ಭದಲ್ಲಿ ಪ್ರಯಾಣವನ್ನು ಮಾಡುವಂತಹ ರೈಲ್ವೆ (Railway) ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ” ಎಂದು ತಿಳಿಸಿದೆ.

ಸ್ಲೀಪರ್‌ ಬೋಗಿ
ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್‌ (17301).
ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್‌ (17302).
ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್‌ (06233/06234).
ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್‌ಪ್ರೆಸ್‌ (17307).
ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್‌ಪ್ರೆಸ್‌ (17308).
ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್‌ಪ್ರೆಸ್‌ (16591).
ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್‌ (16592).
ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16535).
ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್‌ (16536).

(ಈ ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.)

ಸ್ಲೀಪರ್‌ ಬೋಗಿ (2 Sleeper coach) :

ಅಕ್ಟೋಬರ್ 3 ರಿಂದ 12 ರವರೆಗೆ  ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್‌ (16227).
ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ (16228).
(ಈ ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.)

1 ಜನರಲ್‌ ಬೋಗಿ (1 general coach) :

ಅಕ್ಟೋಬರ್ 4 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್ (06543/06544).
ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್‌ (16221).
ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌.
ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274).
ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582).
ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213).
ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214).
ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್‌ (16225).
ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್‌ಪ್ರೆಸ್‌ (16226).
ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365).
ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366).
ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್‌ (16239/16240).
ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267).
ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268).
ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269).
ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270).
ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್‌ಪ್ರೆಸ್‌ (16529).
ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌.
(ಈ ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.)

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!