ಪ್ರಾಥಮಿಕ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್, ವೇತನ(payment) ಪಾವತಿಯ ಬಗ್ಗೆ ಮಾಹಿತಿ, ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ..!
ಇಂದು ಕನ್ನಡ ಶಾಲೆಗಳು ನಶಿಸುತ್ತಿವೆ. ಕನ್ನಡ ಶಾಲೆಗಳಲ್ಲಿ (Government schools) ಕಲಿಯುವ ಮಕ್ಕಳ ಸಂಖ್ಯೆ ಬಹಳ ಕಡಿಮೆಯಾಗಿದೆ. ಹಾಗೆಯೇ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆಯು ಬಹಳ ಕಡಿಮೆಯಾಗಿದೆ. ಇಂದು ಅನೇಕ ಜನರು ಖಾಸಗಿ ಶಾಲೆಗಳತ್ತ ತೆರಳುತ್ತಿದ್ದಾರೆ. ಅಲ್ಪ ಸ್ವಲ್ಪ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿದ್ದರೂ ಅಲ್ಲಿ ಕಲಿಸುವವರ ಶಿಕ್ಷಕರ ಸಂಖ್ಯೆ ಬಹಳ ವೀರಳವಾಗಿದೆ. ಆದರೂ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರು (Guest teachers) ನೇಮಕಗೊಂಡಿದ್ದಾರೆ. ಹಾಗೆಯೇ ಇದೀಗ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಸಂಭಾವನೆಗಾಗಿ ಅನುಮೋದನೆ ನೀಡಲಾಗಿದೆ :
ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ (Teachers payment) ಲೆಕ್ಕ ಶೀರ್ಷಿಕೆ 2202-00-101-0-61-324 ರಡಿ ಲಭ್ಯವಿರುವ ರೂ.24941.25 ಲಕ್ಷಗಳನ್ನು ಬಿಡುಗಡೆಗೊಳಿಸಲು ಅನುಮೋದನೆ ನೀಡಲಾಗಿದೆ. ಸದರಿ ಅನುದಾನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ (Taluk Panchayath’s) ಬಿಡುಗಡೆಗೊಳಿಸಲು ತಿಳಿಸಲಾಗಿದೆ.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರೂ.24941.25ಲಕ್ಷ ಬಿಡುಗಡೆಗೊಳಿಸಲಾಗಿದೆ :
ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ಅಗತ್ಯವಿರುವ ರೂ.24941.25ಲಕ್ಷಗಳನ್ನು ಅನುದಾನವನ್ನು ಲೆಕ್ಕ ಶೀರ್ಷಿಕೆ 2202-01-197-1-01-300ರಡಿ ಈ ಕೆಳಕಂಡಂತೆ ಆದೇಶಿಸಲಾಗಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧ-1 ರ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (Government primary schools) ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕಾಲಂ 5ರಲ್ಲಿ ತೋರಿಸಿದಂತೆ ಲೆಕ್ಕ ಶೀರ್ಷಿಕೆ 2202-01- 197-1-01-300ರಡಿ ರೂ.24941.25ಲಕ್ಷ (ರೂಪಾಯಿ ಇಪ್ಪತ್ತು ನಾಲ್ಕು ಸಾವಿರದ ಒಂಬತ್ತು ನೂರಾ ನಲವತ್ತೊಂದು ಲಕ್ಷದ ಇಪ್ಪತ್ತೈದು ಸಾವಿರ ಮಾತ್ರ)ಗಳನ್ನು ಬಿಡುಗಡೆಗೊಳಿಸಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.