ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತದ ಆತಂಕ..! ಮುಷ್ಕರ ಯಾವಾಗ?

IMG 20240926 WA0005

ಬಿಸಿ ಬಿಸಿ ಸುದ್ದಿ, ಸಾರಿಗೆ ನೌಕರರ ಮುಷ್ಕರ ಸಾಧ್ಯತೆ, ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಸಂಚಾರ ಬಂದ್ ಆಗುವ ನಿರೀಕ್ಷೆ…!

ಸಾರಿಗೆ ವ್ಯವಸ್ಥೆಯಲ್ಲಿ (transport system) ಇಂದು ಕೂಡ ಜನರಿಗೆ ಹಲವಾರು ರೀತಿಯ ತೊಂದರೆಗಳು ಎದುರಾಗುತ್ತಲೇ ಇವೆ. ಕೆಲವೊಂದು ಕಡೆಗಳಲ್ಲಿ ಬಸ್ ಗಳು ಇರುವುದಿಲ್ಲ. ಹಾಗೆಯೇ ಇನ್ನು ನೋಡುವುದಾದರೆ ಸಮಯಕ್ಕೆ ತಕ್ಕಂತೆ ಬಸ್ ಗಳ ವ್ಯವಸ್ಥೆಮಾಡಲಾಗಿದೆ. ಜನಸಂಖ್ಯೆ ಹೆಚ್ಚಳ, ಜನರ ಓಡಾಟ, ಶಾಲಾ ಕಾಲೇಜು ವಿದ್ಯಾರ್ಥಿಗಳು, ಒಂದು ಕಡೆಯಿಂದ ಮತ್ತೊಂದು ಕಡೆಗೆ ಕೆಲಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಹಾಗೆಯೇ ಇದೀಗ ಮತ್ತೊಂದು ಸುದ್ದಿ ಕೇಳಿಬರುತ್ತಿದೆ. ಹೌದು, ಸಾರಿಗೆ ನೌಕರರ ಮುಷ್ಕರ ಸಾಧ್ಯತೆ ಇದ್ದು, ಕೆಎಸ್ ಆರ್ ಟಿಸಿ(KSRTC), ಬಿಎಂಟಿಸಿ(BMTC) ಬಸ್ ಸಂಚಾರ ಬಂದ್(Bus Transport Bandh) ಆಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ :

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ (KSRTC) ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಸಾರಿಗೆ ಮುಷ್ಕರಕ್ಕೆ ಸಿದ್ಧರಾಗಲು ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ (Ananth Subbarav) ಕರೆ ನೀಡಿದ್ದಾರೆ.

ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮುಷ್ಕರ ದಿನಾಂಕ ಘೋಷಣೆ :

ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ತಿಂಗಳ 26 ರ ವರೆಗೆ ಗಡುವು ನೀಡಲಾಗಿದೆ. ಈ ತಿಂಗಳ 26 ರೊಳಗೆ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ, 27 ರಂದು ಸಭೆ ನಡೆಸಿ ಮುಷ್ಕರದ ದಿನಾಂಕ ಘೋಷಣೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತಾನಾಡಿದ ಅನಂತ ಸುಬ್ಬರಾವ್, 27 ರಂದು ಸಭೆ ಮಾಡಿ ಮುಷ್ಕರ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳೇನು (What are the demands) ?

ಈಗ ಸಾರಿಗೆ ನಿಗಮಗಳು ಬಾಕಿ ಇರಿಸಿರುವ ಮೊತ್ತವನ್ನು ಚುಕ್ತಾ ಮಾಡಲು ಸರ್ಕಾರವು 4,562 ಕೋಟಿ ರೂಪಾಯಿಗಳನ್ನು ಹಾಗೂ ಶಕ್ತಿ ಯೋಜನೆಯ ಬಾಕಿ ಹಣವಾದ 1,346 ಕೋಟಿ ರೂಪಾಯಿಗಳನ್ನು ನಿಗಮಗಳಿಗೆ ಕೊಡಬೇಕು.
ಸರಬರಾಜುದಾರರಿಗೆ ಮತ್ತು ಇಂಧನ ಬಾಕಿ ಕಡೆಗೆ 998 ಕೋಟಿ ರೂಪಾಯಿಗಳನ್ನು ಸರ್ಕಾರವು ನಿಗಮಗಳಿಗೆ ಕೊಡಬೇಕು.
ಶಕ್ತಿ ಯೋಜನೆ ಅನುಷ್ಠಾನದ ಕಡೆಗೆ ಪ್ರತಿ ತಿಂಗಳು ಸಾರಿಗೆ ನಿಗಮಗಳಿಗೆ ಖರ್ಚಾಗುವ ಹಣವನ್ನು ಮುಂದಿನ ತಿಂಗಳು ಮೊದಲನೆ ವಾರದಲ್ಲೇ ಕೊಡಬೇಕು.
ವಿಶೇಷ ಸಮಿತಿಗಳ ಶಿಫಾರಸಿನಂತೆ, ಪ್ರಯಾಣ ದರ ನಿರ್ಧರಿಸಲು ತಜ್ಞರ ಸಮಿತಿ ರಚಿಸುವುದು.
ಈ ಸೂಚನೆಯನ್ನು ಸರ್ಕಾರ ಒಪ್ಪದಿದ್ದ ಪಕ್ಷದಲ್ಲಿ, ಸಾರಿಗೆ ನಿಗಮಗಳ ಎಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು.
ಜಂಟಿ ಕ್ರಿಯಾ ಸಮಿತಿಯಿಂದ ದಿನಾಂಕ 25.01.2024 ರಂದು ಕೊಟ್ಟಿರುವ ದಿನಾಂಕ 01.01.2024 ರ ವೇತನ ಪರಿಷ್ಕರಣೆ, 01.01.2020ರಿಂದ 38 ತಿಂಗಳ ಬಾಕಿ ಪಾವತಿ, ನಿವೃತ್ತ ನೌಕರರಿಗೆ 27.06.2024 ರ ಆದೇಶದ ಪ್ರಕಾರ ಕೂಡಲೇ ಹಣ ಪಾವತಿಸುವುದು ಹಾಗೂ ಇತರೆ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು.
ಕೆಎಸ್ ಆರ್ ಟಿಸಿ(KSRTC), ಬಿಎಂಟಿಸಿ(BMTC) ಸೇರಿದಂತೆ ನಾಲ್ಕು ನಿಗಮಗಳಲ್ಲಿ ಒಟ್ಟು 23,978 ಬಸ್ಸುಗಳಿದ್ದು, ಇವುಗಳಲ್ಲಿ 1,04,450 ನೌಕರರಿದ್ದಾರೆ. ಈಗಾಗಲೇ ಸಾರಿಗೆ ನೌಕರರು 2020 ರ ಡಿಸೆಂಬರ್ – 10 ರಿಂದ 14 ರ ವರೆಗೆ 5 ದಿನಗಳ ಕಾಲ ಮತ್ತು 2021 ರಲ್ಲಿ ಏಪ್ರಿಲ್‌- 7 ರಿಂದ 21 ರ ವರೆಗೆ 17 ದಿನಗಳ ಮುಷ್ಕರ ಮಾಡಿ ಅಂದಿನ ಬಿಜೆಪಿ ಸರ್ಕಾರಕ್ಕೆ ಸರಿಯಾಗಿ ಬಿಸಿ ಮುಟ್ಟಿಸಿದ್ದರು. ಇದೀಗ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ಧರಾಗಲು ಕರೆ ನೀಡಿದ್ದಾರೆ.

ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕಿದೆ :

ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ ಸಾರಿಗೆ ನೌಕರರು. ಒಂದು ವೇಳೆ ಈ ಬೇಡಿಕೆಗಳನ್ನು ನಿರಾಕರಿಸಿದರೆ ಮುಂದೆ ಮುಸ್ಕರದ ದಿನಾಂಕ ಘೋಷಣೆ ಆಗುತ್ತದೆ ಎಂದು ಸಾರಿಗೆ ಮುಖಂಡರು ತಿಳಿಸಿದ್ದಾರೆ. ಹಾಗಾಗಿ ಇದೀಗ ಸಾರಿಗೆ ಮುಖಂಡರು 26 ರವರೆಗೆ ಸರ್ಕಾರಕ್ಕೆ (Government) ಬೇಡಿಕೆ ಈಡೇರಿಸಲು ಗಡುವು ನೀಡಿದ್ದು, ಒಂದು ವೇಳೆ 26 ರೊಳಗೆ ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ 27 ರಂದು ಮುಷ್ಕರದ ದಿನಾಂಕ ಘೋಷಣೆ ಮಾಡುತ್ತೇವೆ ಎಂದಿದ್ದಾರೆ. ಈ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಇನ್ನಸ್ಟೇ ತಿಳಿದು ಬರಬೇಕು. ಇದರ ಬಗ್ಗೆ ಎಲ್ಲರಿಗೂ ಕುತೂಹಲ ಮೂಡಿದ್ದು, ಇದರ ಬಗ್ಗೆ ಕಾದು ನೋಡಬೇಕು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!