ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ RRB ಚೆನ್ನೈ ನೇಮಕಾತಿಯ 2024 (RRB Chennai Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
RRB ಚೆನ್ನೈ ನೇಮಕಾತಿ 2024 (RRB Chennai Recruitment 2024)ರ ಅವಲೋಕನ:
RRB ಚೆನ್ನೈ ನೇಮಕಾತಿ 2024 ಖಾಲಿ ಹುದ್ದೆ 14,928 ಭಾರತೀಯ ರೈಲ್ವೆ ತಂತ್ರಜ್ಞರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಉದ್ಯೋಗ ಅಧಿಸೂಚನೆಯನ್ನು ಪ್ರಕಟಿಸಿದೆ. ಪ್ರಸ್ತುತ ಅಧಿಸೂಚನೆಯಲ್ಲಿ, ದೇಶಾದ್ಯಂತ ಒಟ್ಟು 14,928 ಹುದ್ದೆಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಲು ತಿಳಿಸಲಾಗಿದೆ.
ಅರ್ಹ ಮತ್ತು ಸಿದ್ಧರಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಲು ಕೋರಲಾಗಿದೆ 9144 ಹುದ್ದೆಗಳು ಖಾಲಿ ಇವೆ. ಪ್ರಸ್ತುತ 5154 ಹೆಚ್ಚುವರಿ ಹುದ್ದೆಗಳನ್ನು ಹೆಚ್ಚಿಸಲಾಗಿದೆ. ಹಾಗಾಗಿ ಮರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿದವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ ಮತ್ತು ಅಗತ್ಯವಿದ್ದರೆ ಬದಲಾವಣೆಗಳನ್ನು ಮಾಡಬಹುದು.
ಖಾಲಿ ಹುದ್ದೆಗಳ ವಿವರ:
RRB ಚೆನ್ನೈ ನೇಮಕಾತಿ 2024 ಖಾಲಿ ಹುದ್ದೆ 14928
ತಂತ್ರಜ್ಞ ಗ್ರೇಡ್ – I (ಸಿಗ್ನಲ್)(Technician grade -l)(Signal)
ಖಾಲಿ ಹುದ್ದೆಗಳ ಸಂಖ್ಯೆ: 1092
ಶೈಕ್ಷಣಿಕ ಅರ್ಹತೆ:
B.Sc ಭೌತಶಾಸ್ತ್ರ/ ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಮಾಹಿತಿ ತಂತ್ರಜ್ಞಾನವನ್ನು ಓದಿರಬೇಕು. ಅಥವಾ ಅದೇ ವಿಭಾಗಗಳಲ್ಲಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಓದಿರಬೇಕು.
ವಯೋಮಿತಿ ಅರ್ಹತೆ:
01.07.2024 ಕ್ಕೆ 18 ವರ್ಷದಿಂದ 36 ವರ್ಷಗಳ ನಡುವೆ ಇರಬೇಕು. ಆದಾಗ್ಯೂ ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ ಮತ್ತು ಎಸ್‌ಟಿ ವರ್ಗಕ್ಕೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ: ರೂ. 29,200
ತಂತ್ರಜ್ಞ ಗ್ರೇಡ್ – III(Technician grade -lll)
ಖಾಲಿ ಹುದ್ದೆಗಳ ಸಂಖ್ಯೆ: 13206
ಶೈಕ್ಷಣಿಕ ಅರ್ಹತೆ: 10 ನೇ ತೇರ್ಗಡೆ ಮತ್ತು ಸಂಬಂಧಿತ ಸ್ಟ್ರೀಮ್‌ನಲ್ಲಿ ಐಟಿಐ.
ವಯೋಮಿತಿ ಅರ್ಹತೆ: 01.07.2024 ಕ್ಕೆ 18 ವರ್ಷದಿಂದ 33 ವರ್ಷಗಳ ನಡುವೆ ಇರಬೇಕು. ಆದಾಗ್ಯೂ ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ ಮತ್ತು ಎಸ್‌ಟಿ ವರ್ಗಕ್ಕೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ವೇತನ: ರೂ. 19,900
ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುವುದು. ಪ್ರತಿ ಹುದ್ದೆಗೆ ಪ್ರತ್ಯೇಕ ಪರೀಕ್ಷೆಯನ್ನು ಆಯೋಜಿಸಲಾಗುತ್ತದೆ. ಪರೀಕ್ಷಾ ಅಂಕಗಳು, ದಾಖಲೆ ಪರಿಶೀಲನೆ, ಮತ್ತು ತಂತ್ರಜ್ಞತೆ ಸಂಬಂಧಿತ ಪ್ರದರ್ಶನದ ಮೇಲೆ ಅಂತಿಮ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಇತರೆ-ರೂ. 500.
SC/ST/ಮಹಿಳೆಯರು- ರೂ. 250
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://www.rrbchennai.gov.in/
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.10.2024
ಈ ಅಧಿಸೂಚನೆಯು ಹೊಸ ಉದ್ಯೋಗದ ಅರ್ಹತೆಯನ್ನು ಹೊಂದಿರುವವರಿಗೆ ಭಾರತೀಯ ರೈಲ್ವೆಯಲ್ಲಿ ಕೈಗೊಳ್ಳಲು ಅವಕಾಶ ಒದಗಿಸುತ್ತದೆ. 10ನೇ ತರಗತಿ ಅಥವಾ ಐಟಿಐ/ ಡಿಪ್ಲೊಮಾ/ ಎಂಜಿನಿಯರಿಂಗ್ ಪದವೀಧರರು, ತಮ್ಮ ಅರ್ಜಿಗಳನ್ನು ಸಲ್ಲಿಸಲು ತಕ್ಷಣವೇ ಮುಂದಾಗಬಹುದು.ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.