ಇಸ್ರೋದಲ್ಲಿ ಖಾಲಿ  ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..! ಇಲ್ಲಿದೆ ಡೈರೆಕ್ಟ್ ಲಿಂಕ್

IMG 20241009 WA0006

ಉದ್ಯೋಗ ಸಿರಿಯ ಓದುಗರಿಗೆ ನಮಸ್ಕಾರ. ಈ ವರದಿಯಲ್ಲಿ ಇಸ್ರೋ ನೇಮಕಾತಿ 2024 (ISRO recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಇವತ್ತು ಮಾತ್ರವೇ ಅರ್ಜಿಯನ್ನು ಸಲ್ಲಿಸಬಹುದು. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.

ಇಸ್ರೋ ನೇಮಕಾತಿ 2024(ISRO recruitment 2024)ರ ಅವಲೋಕನ:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 103 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ISRO ದ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ (HSFC) ವ್ಯಾಪ್ತಿಯಲ್ಲಿದೆ, ಅದು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತದೆ. ತಾತ್ಕಾಲಿಕ ಹುದ್ದೆಗಳಾದರೂ, ಅವುಗಳ ಅವಧಿ ಮುಂದುವರೆಯುವ ಸಾಧ್ಯತೆ ಇದೆ.

ಹುದ್ದೆಗಳ ವಿವರ ಮತ್ತು ಅರ್ಹತೆ :

ಖಾಲಿ ಹುದ್ದೆಗಳು:
ವೈದ್ಯಕೀಯ ಅಧಿಕಾರಿ-ಎಸ್‌ಸಿ,
ವೈದ್ಯಕೀಯ ಅಧಿಕಾರಿ-ಎಸ್‌ಡಿ,
ಸೈಂಟಿಸ್ಟ್ ಇಂಜಿನಿಯರ್-ಎಸ್‌ಸಿ,
ತಾಂತ್ರಿಕ ಸಹಾಯಕ,
ವೈಜ್ಞಾನಿಕ ಸಹಾಯಕ,
ತಂತ್ರಜ್ಞ-ಬಿ,
ಡ್ರಾಫ್ಟ್ಸ್‌ಮನ್-ಬಿ,
ಸಹಾಯಕ (ರಾಜಭಾಷಾ ಅಥವಾ ಅಧಿಕೃತ ಭಾಷೆ).

ವೇತನ ಶ್ರೇಣಿ: ಹುದ್ದೆಗಳ ಪ್ರಕಾರ ವೇತನ ₹21,700 ರಿಂದ ₹2,08,700 ರಷ್ಟಿದೆ.

ವಯೋಮಿತಿ:

ವೈದ್ಯಕೀಯ ಅಧಿಕಾರಿ-ಎಸ್‌ಡಿ ಮತ್ತು -ಎಸ್‌ಸಿ, ತಾಂತ್ರಿಕ ಸಹಾಯಕ, ವೈಜ್ಞಾನಿಕ ಸಹಾಯಕ, ತಂತ್ರಜ್ಞ-ಬಿ, ಡ್ರಾಫ್ಟ್ಸ್‌ಮನ್-ಬಿ: 18 ರಿಂದ 35 ವರ್ಷಗಳ ವಯೋಮಿತಿ.
ಸೈಂಟಿಸ್ಟ್ ಇಂಜಿನಿಯರ್-ಎಸ್ಸಿ: 18 ರಿಂದ 30 ವರ್ಷಗಳು.
ಸಹಾಯಕ (ರಾಜಭಾಷಾ ಅಥವಾ ಅಧಿಕೃತ ಭಾಷೆ): 18 ರಿಂದ 28 ವರ್ಷಗಳು.

ಶೈಕ್ಷಣಿಕ ಅರ್ಹತೆ:

ವೈದ್ಯಕೀಯ ಅಧಿಕಾರಿ: ಎಂಬಿಬಿಎಸ್, ಎಂಡಿ
ಸೈಂಟಿಸ್ಟ್ ಇಂಜಿನಿಯರ್: ಎಂಇ/ಎಂಟೆಕ್, ಬಿಇ/ಬಿಟೆಕ್
ತಾಂತ್ರಿಕ ಸಹಾಯಕ: ಇಂಜಿನಿಯರಿಂಗ್ ಡಿಪ್ಲೋಮಾ
ತಂತ್ರಜ್ಞ, ಡ್ರಾಫ್ಟ್ಸ್‌ಮನ್: ಐಟಿಐ
ವೈಜ್ಞಾನಿಕ ಸಹಾಯಕ: ಬಿಎಸ್‌ಸಿ
ಸಹಾಯಕ: ಪದವಿ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳು ಮೊದಲಿಗೆ ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸುವುದು. ಲಿಖಿತ ಪರೀಕ್ಷೆಯಲ್ಲಿ ಮುಂಚಿನಿಂದ ಶ್ರೇಣಿಗತ ಮಾಡಲಾಗುತ್ತಿದ್ದು, ಉತ್ತಮ ಶ್ರೇಣಿಯ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಸಂದರ್ಶನದ ನಂತರ, ಆಯ್ಕೆಯಾದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಗೆ ಕರೆದೊಯ್ಯಲಾಗುವುದು.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://www.isro.gov.in

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕ:

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 9, 2024.

ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!