ಸರ್ಕಾರದಿಂದ ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ.! ಇಲ್ಲಿದೆ ಮಾಹಿತಿ

IMG 20241011 WA0001

ರುಡ್ಸೆಟ್ ಸಂಸ್ಥೆಯ 10 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿ – ಅರ್ಜಿಗಳಿಗೆ ಆಹ್ವಾನ:

ಬ್ಯಾಡಗಿಯಲ್ಲಿ ಗ್ರಾ.ಧ.ಮಂ.ಆ.ಗ.ಟ್ರಸ್ಟ್ (ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್) ಮತ್ತು ಕೆನರಾ ಬ್ಯಾಂಕ್(Canara Bank) ಸಹಯೋಗದಲ್ಲಿ ನಡೆಸಲಾಗುತ್ತಿರುವ ರುಡ್ಸೆಟ್ ಸಂಸ್ಥೆ (Rudset Institute), ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಗಳಿಗಾಗಿ 10 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯು (Free Poultry Training) ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಆಸಕ್ತರು ಈ ವಿಶೇಷ ಅವಕಾಶವನ್ನು ಪಡೆದುಕೊಳ್ಳಲು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅರ್ಹತಾ ಮಾನದಂಡಗಳು:

ವಯೋಮಿತಿ: 18 ರಿಂದ 45 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಬಹುದು.
ಭಾಷಾ ಪರಿಣಿತಿ: ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ಆಧಾರ್ ಕಾರ್ಡ್: ಅಭ್ಯರ್ಥಿಗಳಿಗೆ ಆಧಾರ್ ಕಾರ್ಡ್(Aadhar card) ಕಡ್ಡಾಯ.
ಆದಾಯದ ಮಾನದಂಡ: ಬಿಪಿಎಲ್ ಕಾರ್ಡ್(BPL card) ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ.

ತರಬೇತಿಯ ಹೈಲೈಟ್ಸ್ :

ಈ ತರಬೇತಿಯಲ್ಲಿ ಪಾಲ್ಗೊಳ್ಳುವವರಿಗೆ ವಸತಿಯನ್ನು ಕಲ್ಪಿಸಲಾಗುವುದು. ತರಬೇತಿ ಅವಧಿಯವರೆಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುತ್ತದೆ. ತರಬೇತಿ ಪೂರ್ಣಗೊಳ್ಳುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಮಾನ್ಯ ಪ್ರಮಾಣಪತ್ರ ವಿತರಣೆ ಮಾಡಲಾಗುತ್ತದೆ.

ಅರ್ಜಿಗಳ ಕೊನೆ ದಿನಾಂಕ ಮತ್ತು ಸಂಪರ್ಕ ಮಾಹಿತಿ:

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಅಕ್ಟೋಬರ್ 25 ಆಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಸಲ್ಲಿಸಲು ರುಡ್ಸೆಟ್ ಸಂಸ್ಥೆಯ ಅರಿಶಿನಕುಂಟೆ ಶಾಖೆಯನ್ನು ಸಂಪರ್ಕಿಸಬಹುದು.

ಸಂಪರ್ಕ ವಿವರಗಳು:

ಸ್ಥಳ: ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ
ಮೊಬೈಲ್: 9740982585, 9380162042
ರುಡ್ಸೆಟ್ ಸಂಸ್ಥೆಯ (Rudset Institute) ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಈ ಯೋಜನೆಯನ್ನು ಪ್ರಕಟಿಸಿದ್ದು, ಯುವಕರು ತಮ್ಮ ಸ್ವಂತ ಉದ್ಯೋಗದ ಅವಕಾಶಗಳನ್ನು ಸುಲಭವಾಗಿ ಪಡೆಯಲು ಈ ತರಬೇತಿಯನ್ನು ಬಳಸಿಕೊಳ್ಳಬಹುದು ಎಂದು ಸೂಚಿಸಿದ್ದಾರೆ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ವರದಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!