ಮುಂದಿನ 24 ಗಂಟೆ ಹೆಚ್ಚಿನ ಮಳೆಯಾಗುವ (heavy rainfall) ಸಾಧ್ಯತೆ.! ಬೆಂಗಳೂರು (Bangalore) ಸೇರಿದಂತೆ ಈ ಜಿಲ್ಲೆಗಳಲ್ಲಿ ಅಕ್ಟೋಬರ್ (October) 14ರ ವರೆಗೆ ಭಾರಿ ಮಳೆ.
ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗಿದ್ದು, ಕೆಲವು ಅಷ್ಟು ಜನರಿಗೆ ಈ ಮಳೆ ಖುಷಿ ನೀಡಿದ್ದರೆ ಇನ್ನೂ ಕೆಲವರಿಗೆ ಕಷ್ಟಗಳನ್ನು ನೀಡಿದೆ. ಆದರೆ ಇನ್ನೇನು ಮುಂಗಾರು ಮಳೆ (Monsoon rain) ಮುಕ್ತಾಯ ಅನ್ನೋ ಸಮಯದಲ್ಲೇ ಮತ್ತೆ ಮಳೆರಾಯ ಧರೆಗೆ ಇಳಿದಿದ್ದಾನೆ. ಹೌದು, ಹಿಂಗಾರು ಮಳೆ ಶುರುವಾಗಿದ್ದು ಈಗಾಗಲೇ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಇನ್ನೂ 48 ಗಂಟೆಗಳ ಕಾಲ ಕೆಲವೊಂದು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬೀಳುವ ಸಂಭವವಿದೆ. ಎಲ್ಲೆಡೆ ಮಳೆಯಾಗುತ್ತಿದ್ದು ಹಿಂಗಾರು ಮತ್ತಷ್ಟು ಚುರುಕಾಗಿದೆ. ಹವಾಮಾನ ಇಲಾಖೆ (Meteorological Department) ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಹಾಗೂ ಅಕ್ಟೋಬರ್ 14ರವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದೆ. ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ? ಯಾಕೆ ಅತಿ ಹೆಚ್ಚು ಮಳೆ ಸುರಿಯುತ್ತಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕೆಲವು ದಿನಗಳಿಂದ ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಹೇರಳವಾಗಿ ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ (North Karnataka) ಭಾಗದಲ್ಲಿ ಅತಿ ಹೆಚ್ಚಾಗಿ ಸುರಿಯುತ್ತಿದ್ದ ಮಳೆ ಇದೀಗ ದಕ್ಷಿಣ ಕರ್ನಾಟಕ (South Karnataka) ಮತ್ತು ಕರಾವಳಿ ಭಾಗಗಳಲ್ಲೂ (coastal areas) ಕೂಡ ಮುಂದಿನ ಕೆಲವು ದಿನಗಳವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರಿನಲ್ಲಿ (Bangalore) ಅದರಲ್ಲೂ ಬುಧವಾರ ರಾತ್ರಿಯಿಂದಲೇ ಮಳೆ ಸುರಿಯುತ್ತಿದೆ. ಹಾಗೂ ಇಂದು ಬೆಳ್ಳಂಬೆಳಗ್ಗೆ ಸಾಧಾರಣ ಮಳೆ ಸುರಿದಿದೆ. ಅಕ್ಟೋಬರ್ 14ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ :
ಕರ್ನಾಟಕದಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬೆಂಗಳೂರು ನಗರ, ಕೊಡಗು, ಕೋಲಾರ, ಮೈಸೂರು, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಚಿತ್ರದುರ್ಗ , ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ಈ ಭಾರಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಏನು?:
ಮುಂಗಾರು ಮುಕ್ತವಾಗಿದೆ ಆದರೆ ಹಿಂಗಾರಿನಲ್ಲೂ ಯಾಕೆ ಇಷ್ಟು ಮಳೆಯಾಗುತ್ತಿದೆ ಅಂದರೆ ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರದ ಕುಸಿತ ಹಿನ್ನೆಲೆಯಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಈಗಾಗಲೇ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಂಭವವಿದೆ.
ಅಕ್ಟೋಬರ್ 14ರ ವರೆಗೆ ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತದೆ:
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗಲಿದೆ. ಹಾಗೂ ಚಿಕ್ಕಮಗಳೂರು, ಉತ್ತರ ಕನ್ನಡ, ಕೋಲಾರ, ಚಿತ್ರದುರ್ಗ, ಹುಬ್ಬಳ್ಳಿ, ಹಾವೇರಿ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿಯೂ ಕೂಡ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಿಗೆ ಈಗಾಗಲೇ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ ಎರಡನೇ ವಾರದಲ್ಲಿ ಸ್ವಲ್ಪಮಟ್ಟಿನಲ್ಲಿ ಮಳೆ ಕಡಿಮೆಯಾಗಲಿದ್ದು, ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.