ಈ ವರದಿಯಲ್ಲಿ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿ (NFL recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ನೀವು 10ನೇ ಅಥವಾ 12ನೇ ತರಗತಿ, ಡಿಪ್ಲೋಮಾ ಅಥವಾ ಪದವಿ ಪಾಸಾದವರಾಗಿದ್ದರೆ ಮತ್ತು ಖಾಸಗಿ ಕ್ಷೇತ್ರದಲ್ಲಿ ಉತ್ತಮ ಉದ್ಯೋಗವಕಾಶವನ್ನು ಹುಡುಕುತ್ತಿರುವರೆ, ಇಲ್ಲಿದೆ ಸುಸ್ಥಿತಿಯ ಉದ್ಯೋಗದ ಅವಕಾಶ. ರಾಷ್ಟ್ರದ ಪ್ರಮುಖ ಸಂಸ್ಥೆ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (NFL) ತನ್ನ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2024ನೇ ಸಾಲಿನ ಈ ನೇಮಕಾತಿಯಲ್ಲಿ ಒಟ್ಟು 336 ಹುದ್ದೆಗಳಿವೆ, ಮತ್ತು ನೀವು ಭಾರತಾದ್ಯಂತ ಕೆಲಸ ಮಾಡಲು ತಯಾರಾಗಿದ್ದರೆ ಅರ್ಜಿ ಸಲ್ಲಿಸಲು ಸೂಕ್ತವಾದ ಸಮಯ ಇದು.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ:
ಈ ನೇಮಕಾತಿಯಲ್ಲಿ ಜೂನಿಯರ್ ಎಂಜಿನಿಯರಿಂಗ್ ಅಸಿಸ್ಟೆಂಟ್, ಸ್ಟೋರ್ ಅಸಿಸ್ಟೆಂಟ್, ಅಟೆಂಡೆಂಟ್, ನರ್ಸ್, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಷಿಯನ್, ಎಕ್ಸ್-ರೇ ಟೆಕ್ನಿಷಿಯನ್ ಮತ್ತು ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. 10ನೇ ತರಗತಿ ಪಾಸಾದವರು ಮತ್ತು ಡಿಪ್ಲೋಮಾ, ಪದವಿ, ಬಿ.ಎಸ್‌ಸಿ, ಬಿ.ಕಾಂ ಮುಂತಾದ ವಿದ್ಯಾರ್ಹತೆಗಳ ಅಭ್ಯರ್ಥಿಗಳು ಆಯ್ಕೆ ಮಾಡಲಾಗುವ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅರ್ಜಿದಾರರು ಕನಿಷ್ಟ 18 ವರ್ಷಗಳಿಂದ 30 ವರ್ಷ ವಯೋಮಾನದವರಾಗಿರಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ದೊರೆಯುತ್ತದೆ.
ಅರ್ಜಿ ಶುಲ್ಕ:
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಯೋಧರಿಗೆ: ಶುಲ್ಕವೇನೂ ಇಲ್ಲ.
ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ: 200 ರೂ. ಶುಲ್ಕ (ಬ್ಯಾಂಕ್ ಚಾರ್ಜ್ ಸಹಿತ).
ಆಯ್ಕೆ ವಿಧಾನ:
ಆಫ್‌ಲೈನ್ ಒಎಂಆರ್ ಪರೀಕ್ಷೆಯ (offline OMR exam) ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಬೆಂಗಳೂರು (ಕರ್ನಾಟಕ), ರಾಂಚಿ(ಝಾರ್ಖಂಡ್), ಲಕ್ನೋ (ಉತ್ತರ ಪ್ರದೇಶ), ಚಂಡೀಗಢ (ಚಂಡೀಗಢ), ರಾಯ್‌ಪುರ (ಛತ್ತೀಸ್‌ಗಢ), ದಿಲ್ಲಿ, ನೋಯ್ಡಾ (ಉತ್ತರ ಪ್ರದೇಶ), ಭೋಪಾಲ್ (ಮಧ್ಯ ಪ್ರದೇಶ), ಅಹಮದಾಬಾದ್ (ಗುಜರಾತ್), ಹೈದರಾಬಾದ್ (ತೆಲಂಗಾಣ), ಚೆನ್ನೈ (ತಮಿಳುನಾಡು), ಕೊಚ್ಚಿ (ಕೇರಳ), ಜೈಪುರ (ರಾಜಸ್ತಾನ), ಮುಂಬೈ (ಮಹಾರಾಷ್ಟ್ರ), ಗುವಾಹಟಿ (ಅಸ್ಸಾಂ), ಕೋಲ್ಕತ್ತಾ (ಪಶ್ಚಿಮ ಬಂಗಾಳ), ಜಮ್ಮು (ಜಮ್ಮು ಮತ್ತು ಕಾಶ್ಮೀರ), ಭುವನೇಶ್ವರ್ (ಒಡಿಶಾ), ಅಮರಾವತಿ/ವಿಜವಾಡ (ಆಂಧ್ರ ಪ್ರದೇಶ), ಪಾಟ್ನಾ (ಬಿಹಾರ), ಗ್ವಾಲಿಯಾರ್ (ಮಧ್ಯ ಪ್ರದೇಶ)ನಲ್ಲಿ ಪರೀಕ್ಷೆ ನಡೆಯಲಿದೆ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕ:
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ
ನವೆಂಬರ್ 8, 2024.
ಅರ್ಜಿ ಸಲ್ಲಿಸುವಲ್ಲಿ ನಿರ್ಧಾರ ಪಕ್ಕಾ ಮಾಡಿದ್ದರೆ, ಈಗಲೇ ಅರ್ಜಿಯನ್ನು ಪೂರ್ಣಗೊಳಿಸಿ, ಮಹತ್ವದ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಶುಲ್ಕ ಪಾವತಿಸಿ. ಅರ್ಜಿ ಸಲ್ಲಿಸಿದ ಬಳಿಕದ ಪಡಿಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಅಗತ್ಯವಿದ್ದರೆ ಡೌನ್‌ಲೋಡ್ ಮಾಡಿಕೊಂಡು ಇಡಿ.
ಈ ಉದ್ಯೋಗಾವಕಾಶ ನಿಮ್ಮ ಭವಿಷ್ಯವನ್ನು ಉತ್ತಮಗೊಳಿಸುವಲ್ಲಿ ಸಹಾಯಕವಾಗಬಹುದು. ಸಮರ್ಪಕ ಅರ್ಹತೆ ಇದ್ದರೆ, ನಿಮ್ಮ ಆಕಾಂಕ್ಷೆಯನ್ನು ಸಾಧಿಸಲು ಈಗಲೇ ಮೊದಲಿಗೆ ಹೆಜ್ಜೆ ಹಾಕಿ.
ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.