ಈ ವರದಿಯಲ್ಲಿ ಐಪಿಪಿಬಿ ಎಕ್ಸಿಕ್ಯೂಟಿವ್ ನೇಮಕಾತಿ 2024 ರ (IPPB Executive Recruitment 2024)
ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (IPPB) ಅಂಚೆ ಇಲಾಖೆಯ (Post Department) ಗ್ರಾಮೀಣ ಡಾಕ್ ಸೇವಕರನ್ನು (Rural dock workers) ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ(IPPB Executive Recruitment) ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. 344 ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಅಕ್ಟೋಬರ್ 11, 2024 ರಿಂದ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿತ ಅಕ್ಟೋಬರ್ 31, 2024ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಆಸಕ್ತ ಅಭ್ಯರ್ಥಿಗಳಿಗೆ ಈ ಅವಕಾಶದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಹುದ್ದೆಯ ವಿವರಗಳು
ಹುದ್ದೆ : ಐಪಿಪಿಬಿ ಎಕ್ಸಿಕ್ಯೂಟಿವ್ (IPPB Executive)
ಸಂಸ್ಥೆ ಹೆಸರು : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (IPPB)
ಉದ್ಯೋಗ ವರ್ಗ : ಸರ್ಕಾರಿ ಉದ್ಯೋಗಗಳು
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 31, 2024
ಸಂಬಳ : ತಿಂಗಳಿಗೆ 30,000 ರೂ.
ಒಟ್ಟು ಹುದ್ದೆಗಳು : 344
ಅರ್ಹತೆಯ ಮಾನದಂಡಗಳು :
ಶೈಕ್ಷಣಿಕ ಅರ್ಹತೆ:
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ ಪೂರೈಸಿರಬೇಕು.
ಅನುಭವ:
ಕನಿಷ್ಠ 2 ವರ್ಷಗಳ ಕಾಲ ಗ್ರಾಮೀಣ ಡಾಕ್ ಸೇವಕರಾಗಿ ಕೆಲಸದ (Rural dock workers Experience) ಅನುಭವವಿರಬೇಕು.
ವಯೋಮಿತಿ:
ಅರ್ಜಿದಾರನು ಕನಿಷ್ಠ 21 ವರ್ಷವಯಸ್ಸಿನವನು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ಒಬಿಸಿ (OBC)ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಹಾಗೂ ಎಸ್‌ಸಿ/ಎಸ್‌ಟಿ (Sc/St)ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷವರೆಗೆ ಸಡಿಲಿಕೆ ಇರುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ: ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ.
ಆನ್‌ಲೈನ್ ಪರೀಕ್ಷೆ: ಅಭ್ಯರ್ಥಿಗಳ ಅಂತಿಮ ಆಯ್ಕೆಯನ್ನು ಆನ್‌ಲೈನ್ ಪರೀಕ್ಷೆ(Online Exam) ನಡೆಸುವ ಮೂಲಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ:
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://www.ippbonline.com
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕ:
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ
ಅಕ್ಟೋಬರ್ 31, 2024
ಈ ರೀತಿಯಾಗಿ ಗ್ರಾಮೀಣ ಡಾಕ್ ಸೇವಕರಿಗೆ ಭಾರತ ಅಂಚೆ ಇಲಾಖೆಯಿಂದ ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.
ಈ ಉದ್ಯೋಗಾವಕಾಶ ನಿಮ್ಮ ಭವಿಷ್ಯವನ್ನು ಉತ್ತಮಗೊಳಿಸುವಲ್ಲಿ ಸಹಾಯಕವಾಗಬಹುದು. ಸಮರ್ಪಕ ಅರ್ಹತೆ ಇದ್ದರೆ, ನಿಮ್ಮ ಆಕಾಂಕ್ಷೆಯನ್ನು ಸಾಧಿಸಲು ಈಗಲೇ ಮೊದಲಿಗೆ ಹೆಜ್ಜೆ ಹಾಕಿ.
ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.