ಕೇಂದ್ರದ ಈ ಯೋಜನೆಯಡಿ ಸಿಗಲಿದೆ ಪ್ರತಿ ವರ್ಷ 72,000 ರೂಪಾಯಿ ಪಿಂಚಣಿ..!

IMG 20241101 WA0005

ಕಾರ್ಮಿಕ ವಲಯದಲ್ಲಿ ಕೆಲಸ ಮಾಡುವವರಿಗೆ ವಾರ್ಷಿಕ 72,000 ರೂ ಪಿಂಚಣಿ.! ಯಾವ ಯೋಜನೆಯಡಿ ಸಿಗಲಿದೆ ಈ ಪಿಂಚಣಿ?

2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಫೆಬ್ರವರಿ 2019 ರಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM)ಅನ್ನು ಪ್ರಾರಂಭಿಸಿದರು. ನಮ್ಮ ದಿನನಿತ್ಯದ ಜೀವನದಲ್ಲಿ ಬೀದಿಬದಿ ವ್ಯಾಪಾರ ಮಾಡುವವರಿಂದ ಹಿಡಿದು ಆಟೋ ಚಾಲಕರು, ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕೃಷಿ ಕಾರ್ಮಿಕರು, ಕಸ ತೆಗೆಯುವವರು, ಇತರೆ ವಿವಿಧ ವೃತ್ತಿಗಳಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರು ಕಂಡು ಬರುತ್ತಾರೆ. ಒಟ್ಟಾರೆಯಾಗಿ ಭಾರತ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ (unorganized sector) 42 ಕೋಟಿ ಉತ್ಪಾದನೆಯಾಗುತ್ತದೆ. ಈ ಯೋಜನೆಯಲ್ಲಿ  ಎಷ್ಟು ಪಿಂಚಣಿ ಸಿಗಲಿದೆ? ಯೋಜನೆಯ ಲಾಭ ಪಡೆಯಲು ಯಾರೆಲ್ಲಾ ಅರ್ಹರು? ಎಷ್ಟು ವಯಸ್ಸಿನವರಿಗೆ ಈ ಯೋಜನೆಯ ಲಾಭ ಸಿಗಲಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಯೋಜನೆ ವಿಶ್ವದ ಅತಿ ದೊಡ್ಡ ಪಿಂಚಣಿ ಯೋಜನೆಯಾಗಿದೆ. ಕಾರ್ಮಿಕ ವಲಯದಲ್ಲಿ ಕೆಲಸ ಮಾಡುವವರಿಗೆ ಪಿಂಚಣಿ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಶ್ರಮ ಯೋಗಿ ಮಂದನ್ ಯೋಜನೆಯಡಿ ಒದಗಿಸುತ್ತದೆ. ಈ ಯೋಜನೆ ರುದ್ರ ದಂಪತಿಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ.

ವರ್ಷಕ್ಕೆ ಎಷ್ಟು ಪಿಂಚಣಿ ನೀಡಲಾಗುವುದು?:

ಕಾರ್ಮಿಕ ವಲಯದಲ್ಲಿ ಕೆಲಸ ಮಾಡುವ ವೃದ್ಧ ದಂಪತಿಗೆ (elderly couple) ವಾರ್ಷಿಕ 72,000 ರೂ.ಗಳ ಪಿಂಚಣಿ(pension) ನೀಡಲಾಗುತ್ತದೆ. ವಯಸ್ಸಾದ ಕಾಲದಲ್ಲಿ ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಈ ಯೋಜನೆಯನ್ನು ಜಾರಿ ತರಲಾಗಿದೆ. ಈ ಯೋಜನೆಯನ್ನು ನೀವು ಪ್ರಾರಂಭಿಸಬೇಕು ಎಂದರೆ ನಿಮಗೆ 30 ವರ್ಷ ವಯಸ್ಸಾಗಿರಬೇಕು. ಹಾಗೂ ತಿಂಗಳಿಗೆ 100 ರೂಪಾಯಿಗಳನ್ನು ಹೂಡಿಕೆ ಮಾಡಬೇಕು. ನಂತರ 60 ವರ್ಷ ವಯಸ್ಸಾದ ಮೇಲೆ ವೃದ್ಧ ದಂಪತಿಗೆ 72, 000 ರೂ. ಗಳಷ್ಟು ಪಿಂಚಣಿ ಸಿಗುತ್ತದೆ.

ಯೋಜನೆಗೆ ಸೇರಲು ಇರಬೇಕಾದ ಅರ್ಹತೆಗಳೇನು (Qualifications) ?

ಯೋಜನೆಯನ್ನು ಪ್ರಾರಂಭಿಸಬೇಕು ಎಂದರೆ ಫಲಾನುಭವಿಯು  40 ವರ್ಷದೊಳಗಾಗಿರಬೇಕು.
ಅವನ ಮಾಸಿಕ ಆದಾಯ ರೂ.15,000/ ಅಥವಾ ಅದಕ್ಕಿಂತ ಕಡಿಮೆ ಇರಬೇಕು.
ಸಂಘಟಿತ ವಲಯದ ಕಾರ್ಮಿಕರಾಗಿರಬಾರದು ಹಾಗೂ ಇ.ಎಸ್.ಐ/ಪಿ.ಎಫ್/ಎನ್.ಪಿ.ಎಸ್ ಯೋಜನೆಗೆ ಒಳಪಟ್ಟಿರಬಾರದು.
ಯಾವುದೇ ರೀತಿಯ ಆದಾಯ ತೆರಿಗೆಗಳನ್ನು ಪಾವತಿಸುತ್ತಿರಬಾರದು.

ಈ ಯೋಜನೆಯಿಂದ ಸಿಗುವ ಸೌಲಭ್ಯಗಳೇನು (Facilities) ?

ಚಂದಾದಾರರಿಗೆ 60 ವರ್ಷ ತುಂಬಿದ ನಂತರ ತಿಂಗಳಿಗೆ 3000 ರೂ.ಗಳ ಖಾತರಿ ಪಿಂಚಣಿಯನ್ನು ಪಡೆದುಕೊಳ್ಳುತ್ತಾರೆ.
ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತ ಪಟ್ಟಲ್ಲಿ ಅವರ ಪತ್ನಿ/ಪತಿ ಪಿಂಚಣಿಯ ಶೆ.50 ರಷ್ಟು ಪಿಂಚಣೆಯನ್ನು ಪಡೆಯಲು ಅರ್ಹರಾಗಿರುತ್ತಾರೆ.

ಯೋಜನೆ ನೋಂದಣಿ ವಿಧಾನಗಳು (Scheme Registration Procedures) :

ಅರ್ಹ ಫಲಾನುಭವಿಗಳು ಹತ್ತಿರದ “ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ)” ಗಳಲ್ಲಿ ಯೋಜನೆಯಡಿ ನೋಂದಾಯಿಸಬಹುದಾಗಿರುತ್ತದೆ. ಸಿ.ಎಸ್.ಸಿ.ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ. ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ (Central government) ಕಾರ್ಮಿಕ ಇಲಾಖೆ, ಇ.ಎಸ್.ಐ. ಕಾರ್ಪೋರೇಷನ್, ಹಾಗೂ ಭವಿಷ್ಯನಿಧಿ ಇಲಾಖೆ ಹಾಗೂ ಅವರ ವೆಬ್ ವಿಳಾಸಗಳು ಹಾಗೂ ವೆಬ್ ವಿಳಾಸ http://locator.csccloud.in ಗಳಲ್ಲಿ ಪಡೆಯಬಹುದಾಗಿರುತ್ತದೆ.  ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ (ಬ್ಯಾಂಕ್ ಪಾಸ್ ಪುಸ್ತಕ/ಚೆಕ್ ಪುಸ್ತಕ/ಬ್ಯಾಂಕ್ ಸ್ಟೇಟ್‍ಮೆಂಟ್) ಮತ್ತು ಮೊಬೈಲ್‍ನೊಂದಿಗೆ ಕಾಮನ್ ಸರ್ವಿಸ್ ಸೆಂಟರ್ (Common service center) ಗಳಿಗೆ ತೆರಳುವುದು. ಅನುಬಂಧದಲ್ಲಿ ತಿಳಿಸಿರುವಂತೆ ವಯಸ್ಸಿಗೆ ಅನುಗುಣವಾಗಿ ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸಲು ತೆರಳುವುದು. ತದ ನಂತರ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ-ಡೆಬಿಟ್ ಮಾಡಲಾಗುವುದು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!