ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಪಿಎಂ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯ ಲಭ್ಯ..!
ಇಂದು ಹಲವಾರು ಯುವಕ ಯುವತಿಯರು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಎಲ್ಲವೂ ಆಧುನಿಕ ಮಯವಾಗಿದ್ದು, ಎಲ್ಲ ಕೆಲಸಗಳನ್ನು ಯಂತ್ರೋಪಕರಣಗಳೇ ಮಾಡಿ ಮುಗಿಸುತ್ತವೆ. ಹಾಗಾಗಿ ಇಂದು ಅನೇಕ ಜನರು ನಿರುದ್ಯೋಗ ಸಮಸ್ಯೆಯನ್ನು. ಎದುರಿಸುತ್ತಿದ್ದಾರೆ. ಆದರೆ ಇದೀಗ ಚಿಂತಿಸುವ ಅಗತ್ಯವಿಲ್ಲ. ಸ್ವಂತ ದುಡಿಮೆ ಅಥವಾ ಇನ್ನಾವುದೇ ಹೊಸ ಉದ್ಯೋಗವನ್ನು ಶುರು ಮಾಡುವ ಯುವಕ ಯುವತಿಯರಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ.
ಹೌದು, 2024ನೇ ಸಾಲಿನ ಭಾರತ ಸರ್ಕಾರದ (Indian government) ಪ್ರಧಾನಮಂತ್ರಿ ಉದ್ಯೋಗ ಸೃಜನ (PMEGP) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ(loan facility) ಪಡೆಯಲು ಆನ್‌ಲೈನ್ ಮುಖಾಂತರ ಎಲ್ಲಾ ವರ್ಗದವರು ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ನಿರುದ್ಯೋಗ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯ ಲಭ್ಯ ದೊರೆಯಲಿದೆ :
ಯುವಕ ಯುವತಿಯರು ತಮ್ಮ ವಿದ್ಯಾಭ್ಯಾಸದ ಬಳಿಕ ತಮ್ಮ ತಮ್ಮ ಊರುಗಳನ್ನು ಬಿಟ್ಟು ಪಟ್ಟಣಗಳಿಗೆ ಉದ್ಯೋಗವನ್ನು ಅರಿಸಿಕೊಂಡು ಹೊರಡುತ್ತಾರೆ. ಆದರೆ ಸ್ವಂತ ದುಡಿಮೆ ಅಥವಾ ಉದ್ಯೋಗ ಮಾಡಲು ಯಾರು ಇಚ್ಚಿಸುವುದಿಲ್ಲ. ಇಂದು ಸ್ವಂತ ಉದ್ಯೋಗ ಹೆಚ್ಚು ಲಾಭವನ್ನು ನೀಡಲಿದೆ. ಆದರೆ ಆರ್ಥಿಕ ಸಮಸ್ಯೆಯಿಂದ (Economic problems) ಸ್ವಂತ ಉದ್ಯೋಗ ಮಾಡಲು ಯಾರು ಮುಂದೆ ಬರುವುದಿಲ್ಲ. ಅದರ ಭಯ ಬಿಟ್ಟು ಬಿಡಿ ಯಾಕೆಂದರೆ, ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಸಾಲ ಸೌಲಭ್ಯ ಲಭ್ಯ ದೊರೆಯಲಿದೆ. ಅದಕ್ಕಾಗಿ ಅರ್ಜಿಯನ್ನು ಕೂಡ ಆಹ್ವಾನಿಸಲಾಗಿದೆ.
ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯ ಮುಖ್ಯ ಉದ್ದೇಶ :
ಯುವಜನರು ಇಂದು ಹೆಚ್ಚು ಸ್ವಂತ ಉದ್ದಿಮೆಯನ್ನು ಹೊಂದಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಬೇಕಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಒಂದು ಉತ್ತಮ ಯೋಜನೆಯನ್ನು ರೂಪಿಸಿದೆ. ಸ್ವ-ಉದ್ಯೋಗ (Own Business) ಮಾಡಿಕೊಳ್ಳುವವರಿಗೆ ಪಟ್ಟಣ, ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50 ಲಕ್ಷಗಳವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ.25 ರಿಂದ 35 ರವರೆಗೆ ಸಹಾಯಧನ ನೀಡಲು ಮುಂದಾಗಿದೆ. ಇದು ಪ್ರಧಾನಮಂತ್ರಿ ಉದ್ಯೋಗ ಸೃಜನ (PMEGP) ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
630 ಕ್ಕೂ ಅಧಿಕ ಉದ್ದಿಮೆಗಳಿಗೆ ಈ ಯೋಜನೆಯಿಂದ ಸಹಾಯಧನ ಪಡೆಯಬಹುದಾಗಿದೆ :
ಕಾಫಿ ಗ್ರೈಂಡಿಂಗ್, ಫ್ಲೋರ್ ಮಿಲ್, ಸಿಮೆಂಟ್ ಬ್ಲಾಕ್ಸ್, ವರ್ಮಿ ಕಾಂಪೋಸ್ಟ್, ಜೇನುಕೃಷಿ, ಎಣ್ಣೆ ತಯಾರಿಕೆ, ರಬ್ಬರ್, ಪಶು ಆಹಾರ, ಜ್ಯೂಸ್ ತಯಾರಿಕೆ, ರೆಡಿಮೆಡ್ ಗಾರ್ಮೆಂಟ್ಸ್, ಫ್ಲೆಕ್ಸ್ ಅಂಡ್ ಪ್ರಿಂಟಿಂಗ್ ಪ್ರಸ್, ಬ್ಯೂಟಿ ಪಾರ್ಲರ್, ಸಲೂನ್, X-Ray scanning, Medical lab, ಅಡಿಕೆ ಮತ್ತು ಪೇಪರ್ ಪ್ಲೇಟ್ಸ್, ಶಾಮಿಯಾನ, ಸೆಂಟ್ರಿಂಗ್ ವಕ್ರ್ಸ್, ಎಂಜಿನಿಯರಿಂಗ್ ವಕ್ರ್ಸ್, ವೆಲ್ಡಿಂಗ್, ವಾಟರ್ ಸರ್ವೀಸ್ ಸ್ಟೇಷನ್, ಹಸು, ಕುರಿ, ಮೇಕೆ, ಎಮ್ಮೆ, ಕೋಳಿ, ಬಾತು ಕೋಳಿ ಹಾಗೂ ಮೀನು ಸಾಕಾಣಿಕೆ ಹಾಗೂ ಸಸ್ಯಹಾರಿ ಮತ್ತು ಮಾಂಸಹಾರಿ ಹೋಟೆಲ್ ಮತ್ತು ಇತರೆ 630ಕ್ಕೂ ಅಧಿಕ ಉದ್ದಿಮೆಗಳಿಗೆ ಸಹ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಿಂದ ಸಾಲದ ರೂಪದಲ್ಲಿ ಸಹಾಯಧನ ನೀಡಲಾಗುತ್ತದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಆನ್ ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು :
ಈ ಸೌಲಭ್ಯವನ್ನು ಪಡೆಯಲು ಆನ್‌ಲೈನ್ ಮೂಲಕ www.kvic.org.in (pmegp online application) ನಲ್ಲಿ ಅರ್ಜಿ ಸಲ್ಲಿಸುವಾಗ ಏಜೆನ್ಸಿ ಕೆವಿಐಬಿ ಎಂದು ಅರ್ಜಿಯಲ್ಲಿ ಅಳವಡಿಸಿ ಅದರ ಪ್ರತಿಯೊಂದಿಗೆ 03 ಸೆಟ್‌ನಲ್ಲಿ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳನ್ನು ಪಡೆಯಲು ಇಲ್ಲಿದೆ ಮಾಹಿತಿ (For More information) :
ಹೆಚ್.ಆರ್.ಸುಧಾಮ, ಜಿಲ್ಲಾ ಖಾದಿ ಗ್ರಾಮೊದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ: 08272-225946, 9480825630ನ್ನು ಸಂಪರ್ಕಿಸಿ ಆಸಕ್ತರು ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.