ಈ ವರದಿಯಲ್ಲಿ ಕೋಲ್ ಇಂಡಿಯಾ ಲಿಮಿಟೆಡ್ (CIL) ನೇಮಕಾತಿ 2024 (Coal India Limited Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾJob Alert : ಕೋಲ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
ನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕೋಲ್ ಇಂಡಿಯಾ ಲಿಮಿಟೆಡ್ (CIL) ವಿಶ್ವದ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ ಸಂಸ್ಥೆ ಆಗಿದ್ದು, ಭಾರತ ಸರ್ಕಾರದ ಪ್ರಾಧ್ಯವಸ್ಥೆಯ ಅಡಿಯಲ್ಲಿ ಕೋಲ್ಕತ್ತಾದಲ್ಲಿರುವ ಕಾರ್ಪೊರೇಟ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ. 2.25 ಲಕ್ಷಕ್ಕೂ ಅಧಿಕ ಜನರನ್ನು ಉದ್ಯೋಗದಲ್ಲಿಟ್ಟುಕೊಂಡಿರುವ ಸಿಐಎಲ್ (CIL), ಇದೀಗ ಮ್ಯಾನೇಜ್‌ಮೆಂಟ್ ಟ್ರೈನಿಗಳ (Management Trainie) ನೇಮಕಾತಿಗಾಗಿ 640 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹುದ್ದೆಯ ವಿವರ:
ಹುದ್ದೆಯ ಹೆಸರು: ಮ್ಯಾನೇಜ್‌ಮೆಂಟ್ ಟ್ರೈನಿ (ಇ-2 ಗ್ರೇಡ್)
ಒಟ್ಟು ಹುದ್ದೆಗಳು: 640
ಕೆಲಸ ಸ್ಥಳ: ಭಾರತಾದ್ಯಂತ
ಸಂಬಳ: ಪ್ರಾರಂಭದಲ್ಲಿ 50,000 ರೂ./ತಿಂಗಳು, ತರಬೇತಿ ಪೂರ್ಣಗೊಂಡ ನಂತರ 60,000 ರೂ. – 1,80,000 ರೂ. ನಡುವಿನ ವೇತನ.
ಅರ್ಹತೆ ಮತ್ತು ವಯೋಮಿತಿ :
ವಯಸ್ಸಿನ ಮಿತಿ: ಅರ್ಜಿದಾರರು 30 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ (OBC) ಅಭ್ಯರ್ಥಿಗಳಿಗೆ 3 ವರ್ಷ
ಎಸ್‌ಸಿ/ಎಸ್‌ಟಿ (Sc/St) ಅಭ್ಯರ್ಥಿಗಳಿಗೆ 5 ವರ್ಷ
ವಿಶೇಷ ಚೇತನರಿಗೆ 10 ವರ್ಷ
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಬಿಇ, ಬಿಟೆಕ್, ಬಿಎಸ್‌ಸಿ, ಎಂಸಿಎ ಪದವಿ ಹೊಂದಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು ಮತ್ತು ಒಬಿಸಿ: 1180 ರೂ.
ಎಸ್‌ಸಿ ಮತ್ತು ಎಸ್‌ಟಿ: ಶುಲ್ಕ ವಿನಾಯಿತಿ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಗೇಟ್ (GATE) ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು 1:3 ಅನುಪಾತದಲ್ಲಿ ಸಿದ್ಧಪಡಿಸಲಾಗುತ್ತದೆ. ಅದನ್ನು ಅನುಸರಿಸಿ, ಪ್ರಮಾಣ ಪತ್ರ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಯುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಬಹುದು:
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ : coalindia.in
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ನವೆಂಬರ್ 2024
ಈ ಉದ್ಯೋಗಾವಕಾಶ ನಿಮ್ಮ ಭವಿಷ್ಯವನ್ನು ಉತ್ತಮಗೊಳಿಸುವಲ್ಲಿ ಸಹಾಯಕವಾಗಬಹುದು. ಸಮರ್ಪಕ ಅರ್ಹತೆ ಇದ್ದರೆ, ನಿಮ್ಮ ಆಕಾಂಕ್ಷೆಯನ್ನು ಸಾಧಿಸಲು ಈಗಲೇ ಮೊದಲಿಗೆ ಹೆಜ್ಜೆ ಹಾಕಿ.
ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.