ಯಂತ್ರ ಇಂಡಿಯಾ ಲಿಮಿಟೆಡ್ ಅಪ್ರೆಂಟಿಸ್ ನೇಮಕಾತಿಗೆ ಅಧಿಸೂಚನೆ ಪ್ರಕಟ. ಅಪ್ಲೈ ಮಾಡಿ

IMG 20241123 WA0004

ಈ ವರದಿಯಲ್ಲಿ ಯಂತ್ರ ಇಂಡಿಯಾ ಲಿಮಿಟೆಡ್ ಅಪ್ರೆಂಟಿಸ್ ನೇಮಕಾತಿ 2024 (YIL Apprentice Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯಂತ್ರ ಇಂಡಿಯಾ ಲಿಮಿಟೆಡ್, ಭಾರತದ ಪ್ರಮುಖ ರಕ್ಷಣಾ ಉತ್ಪಾದನಾ ಸಂಸ್ಥೆ, ತನ್ನ 58ನೇ ಬ್ಯಾಚ್‌ಗಾಗಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. 1961ರ ಅಪ್ರೆಂಟಿಸ್ ಕಾಯಿದೆಯ ಅಡಿಯಲ್ಲಿ ನಡೆಯುತ್ತಿರುವ ಈ ನೇಮಕಾತಿ, ಪ್ರತಿಭಾವಂತ ಮತ್ತು ಆಕಾಂಕ್ಷಿ ಅಭ್ಯರ್ಥಿಗಳಿಗೆ ಉನ್ನತ ಅವಕಾಶವನ್ನು ಒದಗಿಸುತ್ತಿದೆ. ಈ ಬೃಹತ್ ನೇಮಕಾತಿಯು 3883 ಹುದ್ದೆಗಳಿಗೆ ಆಕರ್ಷಕ ವೇದಿಕೆಯಾಗಿದೆ.

ಯಂತ್ರ ಇಂಡಿಯಾ ಲಿಮಿಟೆಡ್‌ ಅಪ್ರೆಂಟಿಸ್ ನೇಮಕಾತಿ 2024 ಸಂಪೂರ್ಣ ಮಾಹಿತಿ:

ಉದ್ಯೋಗ ಸಂಸ್ಥೆ- ಯಂತ್ರ ಇಂಡಿಯಾ ಲಿಮಿಟೆಡ್‌ (Yantra India Limited)
ಹುದ್ದೆಗಳ ಹೆಸರು – ಅಪ್ರೆಂಟಿಸ್‌ ತರಬೇತುದಾರರು
ಹುದ್ದೆಗಳ ವಿಭಾಗ -ನಾನ್‌-ಐಟಿಐ ಮತ್ತು ಐಟಿಐ ಕೆಟಗರಿಯ ಟ್ರೇಡ್ – ಅಪ್ರೆಂಟಿಸ್
(Apprentice) ಹುದ್ದೆ
ನಾನ್‌-ಐಟಿಐ ಕೆಟಗರಿ ಹುದ್ದೆಗಳ ಸಂಖ್ಯೆ -1385
ಐಟಿಐ ಕೆಟಗರಿ ಹುದ್ದೆಗಳ ಸಂಖ್ಯೆ – 2498

ಅರ್ಹತಾ ಮಾನದಂಡಗಳು:

ವಯಸ್ಸಿನ ಮಿತಿ (21-11-2024ರ ಆಧಾರದ ಮೇಲೆ):
ಕನಿಷ್ಠ: 14 ವರ್ಷ
ಗರಿಷ್ಠ: 35 ವರ್ಷ
ನಿರ್ಧಿಷ್ಟ ಪ್ರಮಾಣದಲ್ಲಿ ವಯೋಮಿತಿ ಸಡಿಲಿಕೆ ಲಭ್ಯವಿದೆ.

ಶೈಕ್ಷಣಿಕ ಅರ್ಹತೆ:

ನಾನ್-ಐಟಿಐ (Non- ITI):
ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಶೇಕಡಾ 60 ಅಂಕಗಳೊಂದಿಗೆ ತೇರ್ಗಡೆ.
ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇಕಡಾ 40 ಅಂಕಗಳ ಅವಶ್ಯಕತೆ.

ಐಟಿಐ (ITI):
ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ತೇರ್ಗಡೆ.
NCVT/SCVT ಪ್ರಮಾಣಪತ್ರ ಅಗತ್ಯ.
ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ಅಂಕಗಳ ಶೇಕಡಾ 50 ಆಧಾರದಲ್ಲಿ ಶಾರ್ಟ್‌ಲಿಸ್ಟ್.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಅರ್ಜಿ ಪ್ರಾರಂಭ: 22 ಅಕ್ಟೋಬರ್ 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 30 ನವೆಂಬರ್ 2024 (23:59 ಗಂಟೆ)
ಪಾವತಿ ವಿಧಾನ: ಆನ್‌ಲೈನ್ ಗೇಟ್‌ವೇ (Online gate way) ಮೂಲಕ

ಅರ್ಜಿ ಶುಲ್ಕ :

UR ಮತ್ತು OBC ಅಭ್ಯರ್ಥಿಗಳು: ₹200 + GST
SC/ST/ಮಹಿಳೆ/PWD/ಟ್ರಾನ್ಸ್‌ಜೆಂಡರ್: ₹100 + GST

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಬಹುದು:

ಹಂತ 1: ಮೊದಲು, ಡೀಟೇಲ್ಡ್‌ ನೋಟಿಫಿಕೇಶನ್‌ ಅನ್ನು ವೆಬ್‌ಸೈಟ್‌ https://www.yantraindia.co.in ಗೆ ಭೇಟಿ ನೀಡುವ ಮೂಲಕ ಓದಬಹುದು. ಮತ್ತೆ ನಂತರ https://www.apprenticeship.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದವರು ಮತ್ತೆ ಯಂತ್ರ ಇಂಡಿಯಾ ಲಿಮಿಟೆಡ್‌ನ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಈ ನೇಮಕಾತಿಯು ಉತ್ತಮ ತರಬೇತಿ ಮತ್ತು ಅನುಭವವನ್ನು ಒದಗಿಸಲಿದ್ದು, ಹೊಸ ಉದ್ಯೋಗದ ಮಾರ್ಗಗಳನ್ನು ತೆರೆಯಲು ಸಹಕಾರಿಯಾಗಲಿದೆ. ನೇಮಕಾತಿ ಪ್ರಕ್ರಿಯೆಯು ನಿಷ್ಠೆ ಮತ್ತು ಪಾರದರ್ಶಕತೆಯನ್ನು ಅನುಸರಿಸುವ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಈ ಉದ್ಯೋಗಾವಕಾಶ ನಿಮ್ಮ ಭವಿಷ್ಯವನ್ನು ಉತ್ತಮಗೊಳಿಸುವಲ್ಲಿ ಸಹಾಯಕವಾಗಬಹುದು. ಸಮರ್ಪಕ ಅರ್ಹತೆ ಇದ್ದರೆ, ನಿಮ್ಮ ಆಕಾಂಕ್ಷೆಯನ್ನು ಸಾಧಿಸಲು ಈಗಲೇ ಮೊದಲಿಗೆ ಹೆಜ್ಜೆ ಹಾಕಿ.ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.





WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!