ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಹೊಸ ನಿಯಮ. ತಿಳಿದುಕೊಳ್ಳಿ

IMG 20241126 WA0008

ಬಿಪಿಎಲ್ ಕಾರ್ಡ್ ರದ್ದಾದ(BPL card Cancel) ಅರ್ಹ ಫಲಾನುಭವಿಗಳಿಗೆ ಸರ್ಕಾರವು ಗುಡ್ ನ್ಯೂಸ್ ಒಂದನ್ನು ನೀಡಿದೆ. ಅದೇನೆಂದರೆ, ಬಿಪಿಎಲ್ ಕಾರ್ಡ್ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಅಧಿಕಾರಿಗಳು ಹೊಸ ಸಮಯವೊಂದನ್ನು ನಿಗದಿಪಡಿಸಿದ್ದಾರೆ. ಅರ್ಹ ಫಲಾನುಭವಿಗಳು ತಮ್ಮ ಬಿಪಿಎಲ್ ಕಾರ್ಡನ್ನು ಹಿಂಪಡೆದುಕೊಳ್ಳಬಹುದು ಅಷ್ಟೇ ಅಲ್ಲದೆ ನವಂಬರ್ 29ರಿಂದ ಅರ್ಹ ಪಡಿತರದಾರರಿಗೆ ಪಡಿತರವು ಕೂಡ ದೊರೆಯಲಿದೆ. ಬಿಪಿಎಲ್ ಕಾರ್ಡ್ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಿಗದಿಪಡಿಸಿರುವ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬಿಪಿಎಲ್ ಕಾರ್ಡ್ ಸಮಸ್ಯೆ ಬಗೆಹರಿಸಿಕೊಳ್ಳಲು ನಿಗದಿಪಡಿಸಿರುವ ಹೊಸ ದಿನಾಂಕ :

ಸರಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಬೇರೆ ಅರ್ಹ ಫಲಾನುಭವಿಗಳ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಡೆಡ್ ಲೈನ್ ನೀಡಿದೆ. ಇದೇ ನವೆಂಬರ್ 28ರವರೆಗೆ ಸರಿಪಡಿಸಲು ಸಮಯಾವಕಾಶವನ್ನು ಆಹಾರ ಸಚಿವ ಮುನಿಯಪ್ಪ ನೀಡಿದ್ದಾರೆ.

ಯಾವುದೇ ಅರ್ಹ ಬಿಪಿಎಲ್ ರದ್ದಾಗಿಲ್ಲ ಅನರ್ಹರನ್ನ ಮಾತ್ರ ಎಪಿಎಲ್‌ಗೆ ಸೇರಿಸಲಾಗಿದೆ ಎಂದು ಇತ್ತೀಚೆಗೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದರು. ಒಂದು ವೇಳೆ ಬಿಪಿಎಲ್​ಗೆ ಅರ್ಹರಿದ್ದು, ಎಪಿಎಲ್ ಆಗಿದ್ರೆ ಅಂತವರಿಗೆ ಪುನರ್ ಸ್ಥಾಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಇತ್ತಿಚೆಗೆ ಸಚಿವರು ತಿಳಿಸಿದ್ದರು. ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಕಾರ್ಡ್‌ ರದ್ದಾದ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!