ಸರ್ಕಾರಿ ನೌಕರರ ವೇತನವನ್ನು ಕಟಾವು ಮಾಡುವ ಬಗ್ಗೆ ಮತ್ತೊಂದು ಸರ್ಕಾರಿ ಆದೇಶ, ಇಲ್ಲಿದೆ ಸಂಪೂರ್ಣ ಮಾಹಿತಿ…!
ಈ ಹಿಂದೆ ರಾಜ್ಯ ಸರ್ಕಾರವು (state government) ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(Government employee’s DA) ಹಾಗೂ ತಮ್ಮ ವೇತನವನ್ನು ಏರಿಕೆ(salary hike) ಮಾಡಿತ್ತು, ಇದು ಒಂದು ವಿಚಾರ ಸರ್ಕಾರಿ ನೌಕರರಿಗೆ ಸಂತಸ ತಂದಿದೆ. ಅಷ್ಟೇ ಅಲ್ಲದೆ ಸರ್ಕಾರಿ ನೌಕರರು ತಮ್ಮ 8ನೇ ವೇತನ ಆಯೋಗ (8th pay Commission) ಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮಹತ್ವದ ಮಾಹಿತಿಯೊಂದು ತಿಳಿದು ಬಂದಿದೆ. ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಒಂದು ದಿನದ ವೇತನವನ್ನು ಕಟಾಯಿಸಿ ವಂತಿಗೆಯಾಗಿ ನೀಡುವ ಬಗ್ಗೆ ಸರ್ಕಾರ ಆದೇಶವನ್ನು ಹೊರಡಿಸಿದೆ. ಈ ಕುರಿತು ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಿದೆ. ಇದರ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರಿ ನೌಕರರ (Government employees) ನವೆಂಬರ್ ತಿಂಗಳ ವೇತನದಲ್ಲಿ ಒಂದು ದಿನದ ವೇತನವನ್ನು ಕಡಿತ ಮಾಡಲು ಸರ್ಕಾರ ಆದೇಶ ನೀಡಿದೆ :
ಸರ್ಕಾರದ ಉದ್ದೇಶದ ಕುರಿತಂತೆ, ಕರ್ನಾಟಕ ರಾಜ್ಯಪಾಲರ (Governer) ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಉಮಾ ಕೆ. ಸರ್ಕಾರದ ಜಂಟಿ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಆದೇಶವನ್ನು ಹೊರಡಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿಗಳ ಪತ್ರ ದಿನಾಂಕ 14/11/2024 ಉಲ್ಲೇಖಿಸಿದ್ದಾರೆ. ಮಂಡ್ಯ ಜಿಲ್ಲೆ (Mandya District) ಯಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಮುದಾಯ ಭವನವನ್ನು ನಿರ್ಮಿಸುವ ಉದ್ದೇಶಕ್ಕಾಗಿ ಮಂಡ್ಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ರಾಜ್ಯ ಸರ್ಕಾರಿ ನೌಕರರ ನವೆಂಬರ್ ತಿಂಗಳ ವೇತನದಲ್ಲಿ ಒಂದು ದಿನದ ವೇತನವನ್ನು ಕಡಿತ ಮಾಡಲು ಸರ್ಕಾರ ಆದೇಶ ನೀಡಿದೆ.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಒಂದು ದಿನದ ವೇತನವನ್ನು ಕಟಾವು :
ದಿನಾಂಕ 14.11.2004ರ ಪತ್ರದಲ್ಲಿ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯಲ್ಲಿ, ದಿನಾಂಕ 20.12.2024 ರಿಂದ ದಿನಾಂಕ 22.12.2024ರ ವರೆಗೆ ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (81 Akhil Bharath Kannada Sahithya Sammelan) ಕ್ಕೆ ಜಿಲ್ಲೆಯ ರಾಜ್ಯ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಒಂದು ದಿನದ ವೇತನವನ್ನು ಕಟಾಯಿಸಿ ವಂತಿಗೆಯಾಗಿ ನೀಡಲು ಸೂಕ್ತ ಆದೇಶ ಹೊರಡಿಸಬೇಕೆಂದು ಕೋರಿರುತ್ತಾರೆ.
ಸರ್ಕಾರಿ ನೌಕರರ ವೇತನವನ್ನು ಕಟಾಯಿಸಿ ಒಟ್ಟಾರೆ ಕ್ರೋಢೀಕೃತ ಮೊತ್ತವನ್ನು ಮಂಡ್ಯ ಜಿಲ್ಲಾಧಿಕಾರಿ ಖಾತೆಗೆ ಸಂದಾಯ ಮಾಡಲು ಸರ್ಕಾರ ಮಂಜೂರಾತಿ ನೀಡಿದೆ. ಅದರೊಂದಿಗೆ ಈ ಕೆಳಗಿನ ಷರತ್ತುಗಳನ್ನು ಅನ್ವಯಿಸಲಾಗುತ್ತದೆ.
ನೌಕರರ ಒಂದು ದಿನದ ವೇತನ ವಂತಿಗೆಯನ್ನು 2024ರ ನವೆಂಬರ್ ತಿಂಗಳ ವೇತನದ ಬಿಲ್ಲಿನಿಂದ ಕಟಾವುಗೊಳಿಸುವ ಮೂಲಕ ವಸೂಲಿ ಮಾಡಲು ಆಯಾ ಕಛೇರಿ ಮುಖ್ಯಾಧಿಕಾರಿಗಳು (DDO) ಮತ್ತು ಖಜಾನಾಧಿಕಾರಿಗಳು ಅಧಿಕಾರ ಪಡೆದಿರುತ್ತಾರೆ.
ನವೆಂಬರ್ 2024ರ ತಿಂಗಳ ವೇತನದಲ್ಲಿ ಒಂದು ದಿನದ ವೇತನವನ್ನು ವಂತಿಗೆಯಾಗಿ ಕೊಡಲಿಚ್ಚಿಸದ ನೌಕರರು ತಮ್ಮ ಅಸಮ್ಮತಿಯನ್ನು ಸಂಬಂಧಪಟ್ಟ ಬಟವಾಡೆ ಅಧಿಕಾರಿಗಳಿಗೆ 2ನೇ ಡಿಸೆಂಬರ್ 2024ರೊಳಗೆ ಲಿಖಿತ ಮೂಲಕ ಸಲ್ಲಿಸತಕ್ಕದ್ದು ಮತ್ತು ಅಂತಹ ನೌಕರರ ಒಂದು ದಿನದ ವೇತನವನ್ನು 2024ರ ನವೆಂಬರ್ ತಿಂಗಳಿನ ವೇತನ ಬಿಲ್ಲಿನಲ್ಲಿ ಕಟಾವು ಮಾಡತಕ್ಕದ್ದಲ್ಲ.
ವಂತಿಗೆ ರೂಪದಲ್ಲಿ ಕಟಾಯಿಸಲಾದ ಒಂದು ದಿನದ ವೇತನದ ಮೊತ್ತದ ಬಗ್ಗೆ ಸಂಬಂಧಿಸಿದ ನೌಕರರ ವೇತನ ಬಿಲ್ಲಿನಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ” ಎಂದು ಪ್ರತ್ಯೇಕ ಅಂಕಣದಲ್ಲಿ ನಮೂದಿಸತಕ್ಕದ್ದು ಮತ್ತು ಸಮಗ್ರ ವೇತನ ಬಿಲ್ಲಿನಲ್ಲಿ ಕಡಿತಗೊಳಿಸಿದ ಒಟ್ಟು ಮೊತ್ತವನ್ನು ವೇತನ ಬಿಲ್ಲಿನ ಮುಖ ಪುಟದಲ್ಲಿ “87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಂತಿಗೆ’ ಎಂಬುದಾಗಿ ಸ್ಪಷ್ಟವಾಗಿ ನಮೂದಿಸಬೇಕು.
ಜಿಲ್ಲಾ ಖಜಾನೆ ಅಧಿಕಾರಿಗಳು “ಖಜಾನೆ-2 ತಂತ್ರಾಂಶ’ ಅನುಷ್ಠಾನದ ಹಿನ್ನೆಲೆಯಲ್ಲಿ ವಂತಿಗೆ ರೂಪದಲ್ಲಿ ಕಟಾವು ಮಾಡಿದ ಹಣವನ್ನು ಸಂಬಂಧಿಸಿದ ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಇ-ಪಾವತಿ (E Transaction) ಮೂಲಕ ನೇರವಾಗಿ ಜಮೆ ಮಾಡಲು ಈ ಕೆಳಕಂಡಂತೆ ಕ್ರಮವಹಿಸುವುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.