Heavy Rain:  ರಾಜ್ಯದ ಈ ಜಿಲ್ಲೆಗಳಲ್ಲಿ ಡಿ. 8ರ ವರೆಗೆ ಭಾರೀ ಮಳೆ ಮುನ್ಸೂಚನೆ..!

1000339324

ಇಂದಿನಿಂದ ಮುಂದಿನ ಮೂರು ದಿನ ಭಾರೀ  ಮಳೆಯಾಗುವ (rains) ಸಾಧ್ಯತೆ.! ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಫೆಂಗಲ್ ಚಂಡಮಾರುತ ಕಾರಣ ಅಧಿಕ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಕೇವಲ ರೈತರಿಗಷ್ಟೇ ಅಲ್ಲ ಸಾಮಾನ್ಯ ಜನರಿಗೂ ಕೂಡ ಹೆಚ್ಚು ಸಮಸ್ಯೆಯಾಗಿದ್ದು, ಮಳೆಯಿಂದ ಬೆಳೆನಾಶದ ಜೊತೆಗೆ ಹಲವರು ತಮ್ಮ ಮನೆಗಳನ್ನೂ ಕೂಡ ಕಳೆದುಕೊಂಡಿದ್ದರು. ಇದೀಗ ಫೆಂಗಲ್ ಅಬ್ಬರ ತಗ್ಗಿದೆ. ಮೊನ್ನೆ ಇಂದಷ್ಟೇ ಬೆಂಗಳೂರಿನಲ್ಲಿ ಬಿಸಿಲು ಕಾಣಿಸಿಕೊಂಡಿತ್ತು. ಮಳೆ ಕಡಿಮೆಯಾಗಿದೆ ಸ್ವಲ್ಪ ಚೇತರಿಸಿಕೊಳ್ಳೋಣ ಎನ್ನುವಷ್ಟರಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ಕೇಳಿಬರುತ್ತಿದೆ. 6 ನೇ ತಾರೀಕಿನಿಂದ 9ನೇ ತಾರೀಕಿನವರೆರಗೆ ಹಲವು ಕಡೆ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ (Meteorology Department) ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಯಾವ ಯಾವ ದಿನ ಮಳೆಯಾಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಹವಮಾನ ಇಲಾಖೆ (Meteorology Department) ಮುನ್ಸೂಚನೆ ನೀಡಿರುವ ಪ್ರಕಾರ ಇಂದಿನಿಂದ ಮುಂದಿನ ಮೂರು ದಿನ ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗಲಿದ್ದು, ಇದಕ್ಕೆ ಪೂರಕವಾಗಿ ಬೆಂಗಳೂರಿನಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27°C ಮತ್ತು 19°C ಆಗಿರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 5 ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ:

ಡಿಸೆಂಬರ್ 6 ಎಂದರೆ ನಿನ್ನ ರಾಜ್ಯದ ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ  ಮಳೆಯಾಗಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡಿಮ ಜಿಲ್ಲೆಗಳಲ್ಲಿ  ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಒತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ನಿನ್ನೆ ಇಂದ ನಾಳೆಯವರೆಗೂ ಈ ಜಿಲ್ಲೆಗಳಲ್ಲಿ ಭಾರಿ ಮಳೆ :

ನಿನ್ನೆಯಿಂದ ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ, ಧಾರವಾಡ, ಹಾವೇರಿ, ವಿಜಯಪುರ,  ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು ಇನ್ನುಳಿದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತೆ ನಾಳೆ ಮಳೆಯಾಗುವ ಸಾಧ್ಯತೆ ಇದೆ.

ಇಂದು ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ :

ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು,ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ,ಮಂಡ್ಯ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಕೊಡಗು, ಯಾದಗಿರಿ, ಬಾಗಲಕೋಟೆ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!