ಈ ವರದಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ (State Bank of India Recruitment ) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಮಹತ್ವದ ಸುದ್ದಿಯಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 13,735 ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳ (Junior Associate Post) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗಾಗಿ ಡಿಸೆಂಬರ್ 17ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಜನವರಿ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
ಹುದ್ದೆ:ಕ್ಲರಿಕಲ್ ಮಟ್ಟದ ಜ್ಯೂನಿಯರ್ ಅಸೋಸಿಯೇಟ್ (Junior Associate )
ಒಟ್ಟು ಹುದ್ದೆಗಳು: 13,735
ಸ್ಥಾನ: ಭಾರತಾದ್ಯಂತ ವಿವಿಧ ಶಾಖೆಗಳು
ಅರ್ಜಿ ಸಲ್ಲಿಕೆಗಾಗಿ ಅಗತ್ಯ ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು. ಪದವಿ ಪೂರ್ಣಗೊಳ್ಳುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿಗಳೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ ವಯಸ್ಸು: 20 ವರ್ಷ
ಗರಿಷ್ಠ ವಯಸ್ಸು: 28 ವರ್ಷ
ವರ್ಗಾವಾರು ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು:
ಒಬಿಸಿ (OBC): 3 ವರ್ಷ
ಎಸ್ಸಿ/ಎಸ್ಟಿ (Sc/St): 5 ವರ್ಷ
ಅಪ್ಲಿಕೇಶನ್ ಶುಲ್ಕ
ಜೆನೆರಲ್ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ವರ್ಗ: ₹750
ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ / ಇಎಸ್ಎಂ / ಡಿಇಎಸ್ಎಂ: ಶುಲ್ಕ ವಿನಾಯಿತಿ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಎಸ್ ಬಿಐ ಅಧಿಸೂಚನೆ ಮಾನದಂಡಗಳ ಪ್ರಕಾರ ಪ್ರತಿ ತಿಂಗಳು 24050-64480 ರೂ. ವೇತನವನ್ನು ನೀಡಲಾಗುತ್ತದೆ .
ಆಯ್ಕೆ ಪ್ರಕ್ರಿಯೆ:
ಹುದ್ದೆಗಳಿಗಾಗಿ ಅಭ್ಯರ್ಥಿಗಳನ್ನು ಮೂರು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ:
ಪ್ರಿಲಿಮ್ಸ್ ಪರೀಕ್ಷೆ (Prelims Test): ಆನ್ಲೈನ್ ಆಧಾರಿತ ಪ್ರಾಥಮಿಕ ಪರೀಕ್ಷೆ
ಮೇನ್ಸ್ ಪರೀಕ್ಷೆ (Mains test):ಮುಖ್ಯ ಪರೀಕ್ಷೆ
ಭಾಷಾ ಪರಿಣಿತಿ ಪರೀಕ್ಷೆ (LPT): ಪ್ರಾದೇಶಿಕ ಭಾಷಾ ಅರಿವು ಪರೀಕ್ಷೆ (ಕಂಪ್ಯೂಟರ್ ಆಧಾರಿತ)
ಅರ್ಜಿ ಸಲ್ಲಿಸುವುದು ಹೇಗೆ?
ಹಂತ 1: ಮೊದಲು, ಅಧಿಕೃತ ವೆಬ್ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://ibpsonline.ibps.in/sbidrjadec24/
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕಗಳು :
ಅಪ್ಲಿಕೇಶನ್ ತೆರೆಯುವ ದಿನಾಂಕ: ಡಿಸೆಂಬರ್ 17, 2024
ಅಪ್ಲಿಕೇಶನ್ನ ಕೊನೆಯ ದಿನಾಂಕ: ಜನವರಿ 7, 2025
ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ
ಹುದ್ದೆಗಳ ಮಹತ್ವ:
SBI ಯಂತಹ ಪ್ರಮುಖ ಬ್ಯಾಂಕಿನಲ್ಲಿ ಕೆಲಸ ಮಾಡುವುದು ಕಾರ್ಮಿಕ ಭದ್ರತೆಗೆ ಮಾತ್ರವಲ್ಲ, ಉದ್ಯೋಗ ಪ್ರೋತ್ಸಾಹಕ್ಕೂ ಮಾರ್ಗದರ್ಶಿಯಾಗುತ್ತದೆ. ಈ ಹುದ್ದೆಗಳು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹತೋಟಿ, ಗ್ರಾಹಕ ಸೇವೆ, ಮತ್ತು ವಿತ್ತೀಯ ಜ್ಞಾನ ಹೆಚ್ಚಿಸಲು ಉತ್ತಮ ಅವಕಾಶವನ್ನು ಒದಗಿಸುತ್ತವೆ.
ಕೊನೆಯದಾಗಿ,ಆಸಕ್ತರು SBI ನೇಮಕಾತಿ ಕುರಿತ ಅಧಿಕೃತ ಅಧಿಸೂಚನೆ ಹಾಗೂ ಪರೀಕ್ಷಾ ಪಠ್ಯಕ್ರಮವನ್ನು ಅಧ್ಯಯನ ಮಾಡಿ ತಯಾರಿ ಆರಂಭಿಸಬಹುದು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ತಯಾರಿ ಮಾಡುವ ಮೂಲಕ ನಿಮಗೆ ಉಜ್ವಲ ಭವಿಷ್ಯವನ್ನು ನಿರ್ಮಿಸಲು ಅವಕಾಶ ಸಿಗುತ್ತದೆ. ನಿಮ್ಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ!
ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.