Rain Alert : ರಾಜ್ಯದ ಈ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ , ವಾಯುಭಾರ ಕುಸಿತ.!

1000345238

ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ(Meteorological Department) ನೀಡಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ, ಈ ಮಳೆ ಉಂಟಾಗಲಿದೆ. ತೀವ್ರ ಗಾಳಿ, ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ(Meteorological Department) ಎಚ್ಚರಿಕೆ ನೀಡಿರುವ ಪ್ರಕಾರ ಇಂದಿನಿಂದ 3 ದಿನಗಳು ಹೆಚ್ಚಿನ ಮಳೆಯಾಗುತ್ತದೆ ಎಂದು ತಿಳಿಸಿದೆ. ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು, ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕರ್ನಾಟಕದ ಹವಾಮಾನದಲ್ಲಿ ಮಹತ್ವದ ಬದಲಾವಣೆಗಳನ್ನುಂಟುಮಾಡಿದೆ. ಈ ವಾಯುಭಾರ ಕುಸಿತದ ಪರಿಣಾಮವಾಗಿ, ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವು ಆಂಧ್ರಪ್ರದೇಶದ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿದ್ದು, ಇದು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯ ದಿಕ್ಕಿಗೆ ಚಲಿಸುತ್ತಿದೆ. ಚೆನ್ನೈನ ಪೂರ್ವ-ಈಶಾನ್ಯಕ್ಕೆ ಸುಮಾರು 450 ಕಿ.ಮೀ, ಆಂಧ್ರಪ್ರದೇಶದ ವಿಶಾಖಪಟ್ಟಣದ ದಕ್ಷಿಣ-ಆಗ್ನೇಯಕ್ಕೆ 440 ಕಿ.ಮೀ, ಮತ್ತು ಒಡಿಶಾದ ಗೋಪಾಲಪುರದ ದಕ್ಷಿಣ-ನೈಋತ್ಯಕ್ಕೆ 600 ಕಿ.ಮೀ ದೂರದಲ್ಲಿ ಈ ವಾಯುಭಾರ ಕುಸಿತ ಸ್ಥಿತಿಯಲ್ಲಿದೆ. ಇದು ಮುಂದಿನ ದಿನಗಳಲ್ಲಿ ಪೂರ್ವ-ಈಶಾನ್ಯ ದಿಕ್ಕಿಗೆ ಚಲಿಸಿ, ತನ್ನ ತೀವ್ರತೆಯನ್ನು ಕಾಯ್ದುಕೊಳ್ಳುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಒಣಹವೆ ಜೊತೆಗೆ ಮಳೆಯಾಗುವ(Rain) ಸಾಧ್ಯತೆ :

ಈ ವಾಯುಭಾರ ಕುಸಿತದ ಪರಿಣಾಮವಾಗಿ, ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ . ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಡಿಸೆಂಬರ್ 23ರಿಂದ(December 23) ಅಂದರೆ ನಿನ್ನೆ ಹಾಗೂ ಇಂದಿನಿಂದ ಮುಂದಿನ ಮೂರು ದಿನಗಳವರೆಗೆ ಈ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಪ್ರವಾಸ ಮಾಡುವವರು ಮತ್ತು ಸ್ಥಳೀಯ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು. ನದಿ ತೀರ ಪ್ರದೇಶಗಳಲ್ಲಿ ಪ್ರವಾಹದ(Flood)ಸಾಧ್ಯತೆ ಇರುವುದರಿಂದ, ಜನರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು ಉತ್ತಮ.

ಇಂದು ಎಲ್ಲಿ ಎಲ್ಲಿ ಮಳೆಯಾಗುವ ಸಾಧ್ಯತೆ ಇದೆ:

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ಧಾರವಾಡ, ಹಾಸನ, ಕೊಡಗು, ಚಾಮರಾಜನಗರ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.

ಡಿಸೆಂಬರ್‌ 24 ರಂದು ಎಲ್ಲಿ ಎಲ್ಲಿ ಮಳೆಯಾಗುವ ಸಾಧ್ಯತೆ ಇದೆ:

ನಾಳೆ ಅಂದರೆ ಡಿಸೆಂಬರ್‌ 24ರಂದು(24th December) ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಹಾವೇರಿ, ಉಡುಪಿ, ಗದಗ,  ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯಗಳಿದ್ದು, ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಇರಲಿದೆ. ಇನ್ನು ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.

ಮಳೆಯಿಂದ ಆಗುವ ಪರಿಣಾಮಗಳೇನು :

ಇನ್ನು ಜೋರು ಮಳೆಯಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳು, ವಿಶೇಷವಾಗಿ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ, ಪರಿಣಾಮಕ್ಕೆ ಒಳಗಾಗಬಹುದು. ಮಳೆಯು ರಸ್ತೆ ಸಂಚಾರಕ್ಕೂ ಅಡ್ಡಿಪಡಿಸಬಹುದು, ಆದ್ದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು(public) ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.

ಮುನ್ನೆಚ್ಚರಿಕೆ ಕ್ರಮಗಳು:

ಹವಾಮಾನ ಇಲಾಖೆ ಮತ್ತು ಸ್ಥಳೀಯ ಆಡಳಿತಗಳು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸಲಹೆ ನೀಡಿದೆ.
ನದಿಗಳ ಸಮೀಪದ ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಬೇಕು.
ಅಗತ್ಯವಿಲ್ಲದೆ ಹೊರಗಡೆ ಹೋಗುವುದನ್ನು ತಪ್ಪಿಸಲು ಪ್ರಯತ್ನಿಸಬೇಕು.
ವಾಹನ ಸವಾರರು ಮಳೆಯ ಸಮಯದಲ್ಲಿ ಸುರಕ್ಷಿತವಾಗಿ ಚಾಲನೆ ಮಾಡಬೇಕು.
ಸ್ಥಳೀಯ ಆಡಳಿತಗಳ ಸೂಚನೆಗಳನ್ನು ಪಾಲಿಸಬೇಕು.

ಹವಾಮಾನ ವಿಭಾಗವು ಇಂದಿನಿಂದ 3 ದಿನಗಳು ರಾಜ್ಯಾದ್ಯಂತ ಹವಮಾನದಲ್ಲಿ ತೀವ್ರ ಬದಲಾವಣೆಗಳ ನಿರೀಕ್ಷೆ ವ್ಯಕ್ತಪಡಿಸಿದೆ. ಕಡಲತೀರದ ಹಳ್ಳಿಗಳು ಮತ್ತು ಮೀನುಗಾರರು ಇನ್ನಷ್ಟು ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಮೀನುಗಾರಿಕೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!