SSLC ಮುಗಿದಿದೆಯೇ? ಸರ್ಕಾರಿ ಸೇವೆಯಲ್ಲಿ ಉತ್ತಮ ಅವಕಾಶವನ್ನು ಹುಡುಕುತ್ತಿದ್ದೀರಾ?
ಹಾಗಿದ್ರೆ, ನಿಮ್ಮ ಕನಸಿನ ಉದ್ಯೋಗಕ್ಕೆ ಇದು ಸುವರ್ಣಾವಕಾಶ! ಭಾರತೀಯ ಅಂಚೆ ಇಲಾಖೆ 21,413 ಪೋಸ್ಟ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ! ಕೇವಲ 10ನೇ ತರಗತಿ ಪಾಸಾದವರಿಗೂ ಅರ್ಜಿ ಸಲ್ಲಿಸುವ ಅವಕಾಶ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಭಾರತೀಯ ಅಂಚೆ ಇಲಾಖೆಯಿಂದ 21,413 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿ:
ಭಾರತೀಯ ಅಂಚೆ ಇಲಾಖೆ 2025ನೇ ಸಾಲಿನ ಜನವರಿ ಆವೃತ್ತಿಯಲ್ಲಿ ಒಟ್ಟಾರೆ 21,413 ಗ್ರಾಮೀಣ ಡಾಕ್ ಸೇವಕ್ (Gramina Dak Sevak, GDS) ಹುದ್ದೆಗಳ ಭರ್ತಿಗೆ ನೇಮಕಾತಿ ನೋಟಿಫಿಕೇಶನ್ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (BPM), ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (ABPM), ಮತ್ತು ಡಾಕ್ ಸೇವಕ್ ಹುದ್ದೆಗಳು ಸೇರಿವೆ. SSLC ಪಾಸಾದ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ಉದ್ಯೋಗವನ್ನು ಪಡೆಯಬಹುದು.
ಹುದ್ದೆಗಳ ವಿವರ(Job Description):
ಒಟ್ಟು ಹುದ್ದೆಗಳ ಸಂಖ್ಯೆ(: 21,413
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 1,135
ಹುದ್ದೆಗಳ ಹೆಸರು ಮತ್ತು ವೇತನ ಶ್ರೇಣಿ(Post Names and pay scale):
ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (BPM): ವೇತನ ಶ್ರೇಣಿ ರೂ.12,000-29,380
ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (ABPM): ವೇತನ ಶ್ರೇಣಿ ರೂ.10,000-24,470
ಡಾಕ್ ಸೇವಕ್: ವೇತನ ಶ್ರೇಣಿ ರೂ.10,000-24,470
ಅರ್ಹತಾ ಮಾನದಂಡ(Eligibility Criteria):
SSLC/10ನೇ ತರಗತಿ ತೇರ್ಗಡೆ ಹೊಂದಿರಬೇಕು.
ಆಯಾ ರಾಜ್ಯದ ಅಧಿಕೃತ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು. ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಕನ್ನಡ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.
ಬೇಸಿಕ್ ಕಂಪ್ಯೂಟರ್ ಜ್ಞಾನ(Basic Computer Knowledge)ಹೊಂದಿದ್ದು, ಪ್ರಮಾಣಪತ್ರ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
ವಯೋಮಿತಿ(Age limit):
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 40 ವರ್ಷ
ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ.
ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ.
ನೇಮಕಾತಿ ವಿಧಾನ(Recruitment method):
ಅಭ್ಯರ್ಥಿಗಳನ್ನು ಸ್ವಯಂಚಾಲಿತ ಮೆರಿಟ್ ಪಟ್ಟಿಯ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯ ನಂತರ ನೇಮಕಾತಿ ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ಮೊದಲ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳದಿದ್ದಲ್ಲಿ, 2ನೇ ಅರ್ಹತಾ ಪಟ್ಟಿ ಪ್ರಕಟಿಸಿ, ಅವರನ್ನು ದಾಖಲೆ ಪರಿಶೀಲನೆಗೆ ಕರೆದು, ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ(How to apply):
ಅಧಿಕೃತ ವೆಬ್‌ಸೈಟ್ https://indiapostgdsonline.gov.in/ ಗೆ ಭೇಟಿ ನೀಡಿ.
ಮೊದಲಿಗೆ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಳಿಸಿ.
ರಿಜಿಸ್ಟ್ರೇಷನ್ ನಂಬರ್ ಸೃಷ್ಟಿಯಾದ ನಂತರ ಲಾಗಿನ್ ಮಾಡಿ, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿ, ಅಪ್ಲಿಕೇಶನ್ ಪ್ರಕ್ರಿಯೆ ಪೂರ್ಣಗೊಳಿಸಿ.
ಮುಂದಿನ ಉಲ್ಲೇಖಕ್ಕಾಗಿ ಆನ್‌ಲೈನ್ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಿ.
ಮುಖ್ಯ ದಿನಾಂಕಗಳು(Important dates):
ಅಪ್ಲಿಕೇಶನ್ ಸಲ್ಲಿಸಲು ಪ್ರಾರಂಭ ದಿನಾಂಕ: 10-02-2025
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 03-03-2025
ಅರ್ಜಿ ಶುಲ್ಕ(Application fee):
ಆನ್‌ಲೈನ್ ಅಪ್ಲಿಕೇಶನ್ ಶುಲ್ಕ ರೂ.100.
ಭಾರತೀಯ ಅಂಚೆ ಇಲಾಖೆಯ ಈ ನೇಮಕಾತಿ ಪ್ರಕ್ರಿಯೆ ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಉದ್ಯೋಗವನ್ನು ಪಡೆಯಲು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇಲ್ಕಾಣಿಸಿದ ಮಾಹಿತಿಯ ಆಧಾರದ ಮೇಲೆ ಅರ್ಜಿ ಸಲ್ಲಿಸಿ, ತಮ್ಮ ಭವಿಷ್ಯವನ್ನು ಸುಸ್ಥಿರಗೊಳಿಸಬಹುದು. ನಿಮ್ಮ ಭವಿಷ್ಯವನ್ನು ಭದ್ರಗೊಳಿಸಿಕೊಳ್ಳಲು ತಡ ಮಾಡದೇ ಈ ಅವಕಾಶವನ್ನು ಬಳಸಿಕೊಳ್ಳಿ!
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.