2024-25 ನೇ ವಾರ್ಷಿಕ ದ್ವಿತೀಯ PUC ಬೋರ್ಡ್ ಎಕ್ಸಾಮ್ ಮಾರ್ಚ್ 1ರಿಂದ 20ರ ವರೆ ಗೆ ನಡೆಯಲಿದ್ದು ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳು ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪರೀಕ್ಷೆ ನಡೆಯುವ ಎಕ್ಸಾಮ್ ಸೆಂಟರ್ ಒಳಗೆ ಈ ನಿಯಮ ಪಾಲನೆ ಮಾಡುವುದು ಕಡ್ಡಾಯ
1) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
2) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
3) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
4) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
5) ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
6) ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಉಚಿತ ಬಸ್ ಪ್ರಯಾಣ :
ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಯವರಿಗೆ ವಿದ್ಯಾರ್ಥಿಗಳ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿದರೆ ಉಚಿತ ಬಸ್ ಪ್ರಯಾಣ ಅವಕಾಶ ನೀಡಿದ್ದಾರೆ
ಸಿ ಸಿ ಕ್ಯಾಮರಾ ಕಡ್ಡಾಯ :
ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾ ಆಡುವಳಿಕೆ ಕಡ್ಡಾಯವಾಗಿದೆ. ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.