ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಸಿಗುತ್ತಿರುವ ಅಕ್ಕಿ ಹಣಕ್ಕೆ ಸಂಬಂಧಿಸಿದಂತೆ ಹಣ ಬಿಡುಗಡೆಯ ಬಗ್ಗೆ ರಾಜ್ಯದ ಫಲಾನುಭವಿಗಳಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಬಂದಿದೆ. ಹೌದು ಅನ್ನ ಭಾಗ್ಯದ ಫೆಬ್ರವರಿ ತಿಂಗಳ ಅಕ್ಕಿ ಹಣ ಮನೆ ಯಜಮಾನಿಯರ ಖಾತೆಗೆ ಜಮಾ ಆಗಿದ್ದು, ಈ ಕುರಿತು ಅಧಿಕೃತ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ರಾಜ್ಯದ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಸಿಗುತ್ತಿದ್ದ ಅಕ್ಕಿ ಹಣಕ್ಕೆ ಲಕ್ಷಾಂತರ ಫಲಾನುಭವಿಗಳು ಕಾಯುತ್ತಿದ್ದು, ಕೊನೆಗೂ ಎಲ್ಲ ಯಜಮಾನಿಯರ ಖಾತೆಗೆ ಹಣ ಜಮಾ ಆಗಿದೆ. ಬಿಪಿಎಲ್ ಕಾರ್ಡ್ ಮತ್ತು ಅಂತೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ದವಸ ಧಾನ್ಯಗಳ ಜೊತೆ ಉಚಿತವಾಗಿ ಹಣ ಕೂಡ ಲಭ್ಯವಾಗುತ್ತಿದೆ. ಈಗಾಗಲೇ ಕಳೆದ ಫೆಬ್ರವರಿ ತಿಂಗಳ ಅನ್ನಭಾಗ್ಯದ 680 ರೂಪಾಯಿ ಹಣ ಬ್ಯಾಂಕ್ ಖಾತೆಗೆ ಬಂದಿರುವುದನ್ನ ನೀವು ಕೆಳಗಡೆ ಗಮನಿಸಬಹುದು.

ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯಡಿ (Anna Bhagya Scheme) ಫಲಾನುಭವಿಗಳಿಗೆ ಪ್ರತಿತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ನಿರ್ಧಾರ ಮಾಡಿತ್ತು. ಆದರೆ ಅಕ್ಕಿ ಕೊರತೆಯ ಕಾರಣ ಯೋಜನೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿತು. 5 ಕೆಜಿ ಅಕ್ಕಿ ವಿತರಿಸಿ, ಉಳಿದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂ. ದರದಲ್ಲಿ ನಗದನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ದಾರರಿಗೆ ಹಣವನ್ನು ಜಮೆ ಮಾಡಲಾಗುತ್ತಿದೆ. ಬಿಪಿಎಲ್ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಗಳಿಗೆ ಲಿಂಕ್ ಮಾಡಲಾದ ಫಲಾನುಭವಿಗಳ ಬ್ಯಾಂಕ್ ಖಾತೆ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ. ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಎಂದು ಚೆಕ್ ಮಾಡುವುದು ಹೇಗೆ ಎಂಬ ವಿವರ ಇಲ್ಲಿದೆ.
ಜನವರಿ ತಿಂಗಳ ಅನ್ನ ಭಾಗ್ಯದ ಅಕ್ಕಿ ಹಣ ಜಮಾ
ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಹಣ ನೀಡುತ್ತಿದೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ಹಣದ ಬದಲಾಗಿ ಅಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಅಕ್ಕಿಯನ್ನು ಹೊಂದಿಸೋದು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಹಣವನ್ನು ಸರ್ಕಾರ ಯಜಮಾನಿಯ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದ್ದೇವೆಯೇ?, ಎಷ್ಟು ಹಣ ಬಂದಿದೆ?, ಯಾರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂಬುದನ್ನು ತಿಳಿಯಲು DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿ ನೀವು ಚೆಕ್ ಮಾಡಿಕೊಳ್ಳಿ.
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

ಹಂತ 4: ಮುಂದುವರೆದುನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.