Gruhalakshmi : ಗೃಹಲಕ್ಷ್ಮಿ ಎರಡು ತಿಂಗಳ ಬಾಕಿ ಹಣ ಬಿಡುಗಡೆ, ಒಂದು ತಿಂಗಳ ಹಣ ಜಮಾ.! ಅಕೌಂಟ್ ಚೆಕ್ ಮಾಡಿಕೊಳ್ಳಿ  

Picsart 25 03 04 23 47 12 613

WhatsApp Group Telegram Group

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಅನುಕೂಲ: ಎರಡು ತಿಂಗಳ ಬಾಕಿ ಹಣ ಬಿಡುಗಡೆ

ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರ ಆರ್ಥಿಕ ಸ್ವಾಯತ್ತತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರದ (Karnataka government) ಪ್ರಮುಖ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ (Gruhalakshmi scheme) ಮತ್ತೊಮ್ಮೆ ವರದಾನವಾಗಿದೆ. ಈ ಯೋಜನೆಯಡಿ ಫಲಾನುಭವಿಯಾಗಿರುವ ಲಕ್ಷಾಂತರ ಮಹಿಳೆಯರಿಗೆ ತಮ್ಮ ಕುಟುಂಬದ ದೈನಂದಿನ ಖರ್ಚು ನಿರ್ವಹಿಸಲು ತಿಂಗಳಿಗೆ ಅವರಿಗೆ ನಿಗದಿತ ಹಣವನ್ನು ಸರ್ಕಾರ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದೆ. ಆದರೆ, ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಹಣ ನೀಡುವಲ್ಲಿ ವಿಳಂಬವಾಗಿತ್ತು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಆದರೆ ಇದೀಗ, ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ನೆರವು (Economic help) ನೀಡುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದು ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ (Women and Child Development Minister Lakshmi Hebbalkar) ಅವರು, ಈ ಯೋಜನೆಯ ಫಲಾನುಭವಿಗಳಿಗೆ ಎರಡು ತಿಂಗಳ ಬಾಕಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಅವರು, ಯೋಜನೆಯ ಫಲಾನುಭವಿಗಳಿಗೆ ಬಾಕಿ ಉಳಿದ ಎರಡು ತಿಂಗಳ ಹಣವನ್ನು (2 Months pending payments) ಬಿಡುಗಡೆ ಮಾಡಲು ಈಗ ಎಲ್ಲಾ ವ್ಯವಸ್ಥೆಗಳು ಪೂರ್ಣಗೊಂಡಿವೆ. ಸರಿಯಾದ ಸಮಯಕ್ಕೆ ಹಣ ತಲುಪುವ ದಾರಿಯನ್ನು ಕಂಡುಕೊಳ್ಳಲು  ಸ್ವಲ್ಪ ಸಮಯ ಬೇಕಾಗಿತ್ತು, ಆದರೆ ಈಗ ಎಲ್ಲ ಸಮಸ್ಯೆಗಳಿಗೂ ಪರಿಹಾರ (Solutions) ಕಂಡುಕೊಂಡಿದ್ದು, ಫಲಾನುಭವಿಗಳಿಗೆ ಬಾಕಿ ಉಳಿದ ಹಣ ಶೀಘ್ರದಲ್ಲೇ ಜಮೆಯಾಗಲಿದೆ ಎಂದು ತಿಳಿಸಿದರು.

ಈ ಯಜಮಾನಿಯರಿಗೆ 2000/- ಜಮಾ:

  ಹಾವೇರಿ ಮತ್ತು ದಾವಣಗೆರೆ ಜಿಲ್ಲೆಯ ಯಜಮಾನಿಯರ ಖಾತೆಗೆ  2000/- ಹಣ ಈಗಾಗಲೇ ಜಮಾ ಆಗಿದ್ದು, ಹಂತ ಹಂತವಾಗಿ ಇನ್ನೇನು ಎರಡರಿಂದ ಮೂರು ದಿನಗಳಲ್ಲಿ ಎಲ್ಲಾ ಜಿಲ್ಲೆಯ ಯಜಮಾನಿಯರ ಖಾತೆಗೆ ಹಣ ಜಮಾ ಆಗಲಿದ್ದು. ಯಾವುದೇ ಆತಂಕ ಪಡಬೇಕಾಗಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಬಗ್ಗೆ ಉಂಟಾಗಿದ್ದ ಅನುಮಾನಗಳಿಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಪ್ರತಿಕ್ರಿಯೆ ನೀಡಿದ್ದು, ಯೋಜನೆಯ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ (Government) ಮುಂದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ. ಇನ್ನು ಮುಂದಿನ ಐದು ವರ್ಷಗಳ ಕಾಲ ಯೋಜನೆ ಎಂದಿನಂತೆ ಮುಂದುವರಿಯಲಿದೆ ಎಂದು ಫಲಾನುಭವಿಗಳಿಗೆ ಭರವಸೆ ನೀಡಿದ್ದಾರೆ.

ಈ ಘೋಷಣೆಯಿಂದ ರಾಜ್ಯದ ಲಕ್ಷಾಂತರ ಮಹಿಳೆಯರು ತಮ್ಮ ಬಾಕಿಯ ಹಣವನ್ನು ಪಡೆದು, ತಮ್ಮ ದಿನನಿತ್ಯದ ಖರ್ಚು (Daily expenses) ನಿರ್ವಹಣೆಗೆ ಮತ್ತಷ್ಟು ನೆರವು ಪಡೆಯಲಿದ್ದಾರೆ. ಸರ್ಕಾರದ ಈ ನಿರ್ಧಾರ ಫಲಾನುಭವಿಗಳಿಗೆ ದೊಡ್ಡ ವರವಾಗಿ ಪರಿಣಮಿಸಿದ್ದು, ಗೃಹಲಕ್ಷ್ಮಿ ಯೋಜನೆಯ ಸದುಪಯೋಗವನ್ನು ಪಡೆಯುವ ಎಲ್ಲಾ ಮಹಿಳೆಯರಿಗೂ ಈ ಘೋಷಣೆಯಿಂದ ಮತ್ತಷ್ಟು ಆರ್ಥಿಕ ಭದ್ರತೆ ದೊರೆಯಲಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!