ಕರ್ನಾಟಕ ಹವಾಮಾನ: ರಾಜ್ಯದ ಕೆಲವೆಡೆ ಮಳೆಯ ಮುನ್ಸೂಚನೆ, ಬಿಸಿಲಿನ ತಾಪಮಾನದಲ್ಲಿ ಏರಿಕೆ
ಕರ್ನಾಟಕದಲ್ಲಿ (Karnataka) ಹವಾಮಾನವು ತೀವ್ರವಾಗಿ ಬದಲಾಗುತ್ತಿದ್ದು, ಒಂದು ಭಾಗದಲ್ಲಿ ತಾಪಮಾನ ಹೆಚ್ಚಳ ಕಾಣಿಸಿಕೊಂಡರೆ, ಇನ್ನೊಂದು ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಮಾರ್ಚ್ ಮೊದಲ ವಾರದ (March first week) ವಾತಾವರಣದ ಸ್ಥಿತಿಯನ್ನು ಗಮನಿಸಿದರೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಕಡಿಮೆಯಾಗಿದ್ದು, ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಸ್ಪಷ್ಟವಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕ (North karnataka) ಮತ್ತು ದಕ್ಷಿಣ ಒಳನಾಡಿನ (some south region’s) ಕೆಲವೊಂದು ಭಾಗಗಳಲ್ಲಿ ರಣಬಿಸಿಲಿನ ಅನುಭವವಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇದರ ನಡುವೆಯೂ, ರಾಜ್ಯದ ಕೆಲವೆಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆಯಿಂದ ನೀಡಲಾಗಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಭಾಗದ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗುವ ಸಾಧ್ಯತೆಯಿದೆ. ಹಾಗಿದ್ದರೆ ಯಾವ ಯಾವ ಜಿಲ್ಲೆಗಳಲ್ಲಿ ಹವಮಾನ (Weather) ಯಾವ ರೀತಿ ಇರಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಹವಾಮಾನ ಇಲಾಖೆ (Weather telecast department) ಮುನ್ಸೂಚನೆಯ ಪ್ರಕಾರ, ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ನಡುವೆಯೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣತೆಯ (heat) ಪ್ರಮಾಣ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಹತ್ತಿರಕ್ಕೆ ತಲುಪುವ ನಿರೀಕ್ಷೆಯಿದೆ.
ರಾಜ್ಯದ ಪ್ರಮುಖ ಜಿಲ್ಲೆಗಳ ಹವಾಮಾನ ಸ್ಥಿತಿ ಯಾವ ರೀತಿಯಿರಲಿದೆ?:
ಬೆಂಗಳೂರು (Bangalore) :
ಇಂದು ಬೆಳಗ್ಗೆ ರಾಜ್ಯ ರಾಜಧಾನಿಯಾದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಬೆಳಗ್ಗೆ 8 ಗಂಟೆಯ ನಂತರ ಬಿಸಿಲು ಹೆಚ್ಚಾಗಿತ್ತು. ದಿನದ ಮದ್ಯಾಹ್ನ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಉಷ್ಣತೆ 34-35 ಡಿಗ್ರಿ ಸೆಲ್ಸಿಯಸ್ ಮಟ್ಟಕ್ಕೆ ತಲುಪಿದೆ.
ಕರಾವಳಿ ಜಿಲ್ಲೆಗಳು (Coastal districts) :
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಏರಿಳಿತ ಕಂಡುಬರುತ್ತಿದ್ದು, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ.
ಉತ್ತರ ಕರ್ನಾಟಕ (North Karnataka) :
ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಬೆಳಗಾವಿ, ಯಾದಗಿರಿ, ರಾಯಚೂರು, ಬೀದರ್ ಜಿಲ್ಲೆಗಳಲ್ಲಿ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ದಾಖಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಪ್ರದೇಶಗಳಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆ ಯಾಗುವ ಸಾಧ್ಯಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು (South Regions) :
ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದರೆ ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ನಿರೀಕ್ಷೆ ಇದೆ.
ಮುಂದಿನ ದಿನಗಳಲ್ಲಿ ರಾಜ್ಯದ ಹವಾಮಾನ ಯಾವ ರೀತಿಯಿರಲಿದೆ:
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ (3 Days rain) ಸಾಧ್ಯತೆ ಇದೆ. ಆದರೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದ್ದು, ಉತ್ತರ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಸಮೀಪ ತಲುಪುವ ಮುನ್ಸೂಚನೆ ನೀಡಲಾಗಿದೆ. ಇದರಿಂದಾಗಿ ಈ ಪ್ರದೇಶಗಳಲ್ಲಿ ಸೂರ್ಯನ ತೀವ್ರತೆಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
ಹವಾಮಾನ ವೈಪರಿತ್ಯದಿಂದ ಆರೋಗ್ಯದ ಮೇಲೆ ಪರಿಣಾಮ (Health issues) ಬೀರುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಬೇಸಿಗೆಗನುಗುಣವಾಗಿ ಎಚ್ಚರಿಕೆ ವಹಿಸಬೇಕು. ವಿಶೇಷವಾಗಿ ತಾಪಮಾನ ಹೆಚ್ಚಾಗುತ್ತಿರುವ ಪ್ರದೇಶಗಳಲ್ಲಿ ನೀರಿನ ಪ್ರಮಾಣ ಹೆಚ್ಚಿಸಿ, ಗರಿಷ್ಠ ಬಿಸಿಲಿನ ಸಮಯದಲ್ಲಿ ಹೊರಗಿನ ಕೆಲಸಗಳನ್ನು ತಗ್ಗಿಸಬೇಕು. ಹವಾಮಾನ ಇಲಾಖೆಯ (Weather telecast department) ನಿರೀಕ್ಷೆಗಳ ಪ್ರಕಾರ, ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಉಷ್ಣತೆ ಮತ್ತಷ್ಟು ಏರಬಹುದು, ಇದರಿಂದಾಗಿ ರಾಜ್ಯದ ಜನತೆ ಬೇಸಿಗೆಯ ತಾಪಮಾನವನ್ನು ಅನುಭವಿಸಬೇಕಾಗಬಹುದು. ರಾಜ್ಯದ ಹವಾಮಾನದಲ್ಲಿ ತಾಪಮಾನ ಕ್ರಮೇಣ ಏರುತ್ತಿದ್ದು, ಈ ನಡುವೆ ಕೆಲವು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆಯೂ ಇದೆ. ಮುಂದಿನ ಮೂರು ದಿನಗಳ ಅವಧಿಯಲ್ಲಿ ಉತ್ತರ ಕರ್ನಾಟಕ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹವಾಮಾನದಲ್ಲಿ ಬದಲಾವಣೆಗಳಾಗಬಹುದು. ತಾಪಮಾನ ನಿರೀಕ್ಷೆಯ ಪ್ರಕಾರ, ರಾಜ್ಯದ ಜನತೆ ಮುಂದಿನ ಬೇಸಿಗೆ ದಿನಗಳಿಗೆ ಮುನ್ನೆಚ್ಚರಿಕೆ (Precautions) ವಹಿಸಲು ಹವಾಮಾನ ಇಲಾಖೆ ಸಲಹೆ ನೀಡಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.