Gruhalakshmi : ಎರಡು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಈ ದಿನ ಜಮಾ.! ಹೀಗೆ ಚೆಕ್ ಮಾಡಿ

Picsart 25 03 16 00 06 46 338

WhatsApp Group Telegram Group

ರಾಜ್ಯದ ಖಜಾನೆಯಲ್ಲಿ ತಾತ್ಕಾಲಿಕ ಸಮಸ್ಯೆ – ಜನವರಿ, ಫೆಬ್ರವರಿ ಪಾವತಿ ತಡವಾಗಿದ್ರೂ ಭರವಸೆ ನೀಡಿದ ಸರ್ಕಾರ

ಕರ್ನಾಟಕ ಸರ್ಕಾರದ (Karnataka government) ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಮಹಿಳಾ ಫಲಾನುಭವಿಗಳಿಗೆ ಶೀಘ್ರದಲ್ಲಿ ಸಂತಸದ ಸುದ್ದಿಯನ್ನು ನೀಡಲಿದೆ. ಈ ಯೋಜನೆಯು ರಾಜ್ಯದ ಲಕ್ಷಾಂತರ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಗೃಹಿಣಿಯರಿಗೆ ಆರ್ಥಿಕ ಸ್ವಾಯತ್ತತೆ ನೀಡುವ ಉದ್ದೇಶವನ್ನು ಹೊಂದಿದ್ದು, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ (Five guarantees) ಪೈಕಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬಿಡುಗಡೆಗೊಂಡಿದೆ, ಆದರೆ ಜನವರಿ ಮತ್ತು ಫೆಬ್ರವರಿ ತಿಂಗಳ ಪಾವತಿ ಇನ್ನೂ ಬಾಕಿ ಉಳಿದಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಿದ್ದು, ಶೀಘ್ರದಲ್ಲಿಯೇ ಬಾಕಿ ಇರುವ ಮೊತ್ತ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹಣ ವಿಳಂಬಕ್ಕೆ ಕಾರಣವೇನು?

ವಿಧಾನಸಭೆಯ ಅಧಿವೇಶನದಲ್ಲಿ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ‘ಕಳೆದ ಎರಡು ತಿಂಗಳಿಂದ(Two months) ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗುತ್ತಿಲ್ಲ’ ಏಕೆ? ಎಂದು ಅವರು ಪ್ರಶ್ನಿಸಿದರು.

ಅರವಿಂದ ಬೆಲ್ಲದ ಅವರ ಪ್ರಶ್ನೆಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಳರ್ ಅವರ ಪರವಾಗಿ ಸಚಿವ ಸಂತೋಷ ಲಾಡ್ ಉತ್ತರಿಸಿದರು. ರಾಜ್ಯದ ಆರ್ಥಿಕ ಸಂಪತ್ತು ಮತ್ತು ಖಜಾನದ ಸ್ಥಿತಿಯನ್ನು ಪರಿಗಣಿಸಿ ಸರ್ಕಾರ ಹಣ ಬಿಡುಗಡೆ ಮಾಡುವ ತೀರ್ಮಾನ ಕೈಗೊಳ್ಳಬೇಕಾಗುತ್ತದೆ.

ರಾಜ್ಯದ ಖಜಾನೆಯಲ್ಲಿ ತಾತ್ಕಾಲಿಕ ಹಣಕಾಸು ತೊಂದರೆ (Temporary financial problem) ಉಂಟಾಗಿರುವುದರಿಂದ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ತಡವಾಗಿದೆ. ಆದರೆ ಶೀಘ್ರದಲ್ಲಿಯೇ ಈ ಮೊತ್ತ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು” ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಯೋಜನೆಯ ಪ್ರಾಮುಖ್ಯತೆ (Importance):

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮಹಿಳಗೆ ರಾಜ್ಯ ಸರ್ಕಾರವು ನಿಗದಿತ ಮೊತ್ತವನ್ನು ನೀಡುತ್ತಿದೆ. ಈ ಯೋಜನೆಯು ಮಹಿಳೆಯರ ಆರ್ಥಿಕ ಸ್ಥಿರತೆಯನ್ನು (Economic Stability) ಹೆಚ್ಚಿಸುವ ಜೊತೆಗೆ ಕುಟುಂಬದ ದೈನಂದಿನ ವೆಚ್ಚವನ್ನು ನಿರ್ವಹಿಸಲು ಸಹಾಯ ಮಾಡುತ್ತಿದೆ. ಈ ಯೋಜನೆಯ ನಿರಂತರತೆ ಮತ್ತು ಪಾವತಿ ವಿಳಂಬವಾಗದೆ ನಡೆಯುವಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!