ಮಳೆ ಎಚ್ಚರಿಕೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ ಸಾಧ್ಯತೆ ರಾಜ್ಯದ ಬೇಸಿಗೆ ಕಾಲದಲ್ಲಿ ಹಲವೆಡೆ ಸಂಭವಿಸುತ್ತಿರುವ ಮಳೆ, ಬಿಸಿಲಿನ ತಾಪವನ್ನು ತಾತ್ಕಾಲಿಕವಾಗಿ ತಗ್ಗಿಸುತ್ತಿದೆ. ಮೈಸೂರು, ಚಾಮರಾಜನಗರ, ಮತ್ತು ಕೊಡಗು ಜಿಲ್ಲೆಗಳಲ್ಲಿ ಗತ 3-4 ದಿನಗಳಲ್ಲಿ ಉತ್ತಮ ಮಳೆ ದಾಖಲಾಗಿದೆ. ಗುರುವಾರ ರಾತ್ರಿಯ ವೇಳೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ತೀವ್ರ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
:ಮಳೆಯ ಪರಿಣಾಮಗಳು 1)ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ಅಡಚಣೆ,
2)ಗಾಳಿಯಿಂದ ಮರದ ಕೊಂಬೆಗಳು ಮುರಿದು ಬೀಳುವ ಸಾದ್ಯತೆ,
3)ಸಣ್ಣ ಪ್ರಮಾಣದ ಸಂಚಾರ ಸಮಸ್ಯೆಗಳು.
:ಪೂರ್ವ ಮುಂಗಾರು ಮಳೆಗೆ ನಿರೀಕ್ಷೆ
ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ ಕೊನೆಯ ವಾರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಚೆನ್ನಾಗಿ ಆರಂಭವಾಗಲಿದೆ. ಯುಗಾದಿ ಹಬ್ಬದ ಸಮಯದಲ್ಲಿ ಹೆಚ್ಚಿನ ಜಿಲ್ಲೆಗಳು ಮಳೆಯನ್ನು ಎದುರಿಸಬಹುದು. ಇದೀಗಾಗಲೇ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಧಾರವಾಡ, ಗದಗ, ಬಳ್ಳಾರಿ, ದಾವಣಗೆರೆ ಸೇರಿದಂತೆ 12 ಜಿಲ್ಲೆಗಳಲ್ಲಿ ಚದುರಿದ ಮಳೆ ದಾಖಲಾಗಿದೆ.
:ಮಳೆ ದಾಖಲೆಗಳು (ಗುರುವಾರ ರಾತ್ರಿ 8ರವರೆಗೆ
@ಶಿವಮೊಗ್ಗ: ಹಿರೇಬಿಳಗುಂಜಿ (43.50 ಮಿಮೀ), ತ್ಯಾಗರ್ತಿ (34.50 ಮಿಮೀ).
@ಹಾವೇರಿ: ಘಲಾಪುಜಿ (43.50 ಮಿಮೀ).
@ವಿಜಯಪುರ: ಮಡಿಕೇಶ್ವರ (30 ಮಿಮೀ).
@ಉಡುಪಿ: ಮಾಳ (28.50 ಮಿಮೀ).
ಹವಾಮಾನ ವೀಕ್ಷಕ ರವಿಕೀರ್ತಿಗೌಡ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಶುಕ್ರವಾರದಂದು ಕೂಡ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.ಇಂತಹ ಉತ್ತಮವಾದ ಮಾಹಿತಿಯನ್ನು ನೀವು ತಿಳಿದಮೇಲೆ ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.