ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭರ್ಜರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Picsart 25 03 24 23 52 43 152

WhatsApp Group Telegram Group

ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆಯ ಮುನ್ಸೂಚನೆ: ಉತ್ತರ ಮತ್ತು ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಬಿರುಬಿಸಿಲು (Bright sunny) ಅನುಭವಿಸುತ್ತಿರುವ ನಾಗರಿಕರಿಗೆ ಹವಾಮಾನ ಇಲಾಖೆ ನಿರೀಕ್ಷಿತ ಮುನ್ಸೂಚನೆಯೊಂದು ಹೊರಡಿಸಿದೆ. ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ (forecast) ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ (Yellow alert) ಘೋಷಿಸಿದೆ. ಯಾವ ಜಿಲ್ಲೆ ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು, ರಾಜ್ಯದಲ್ಲಿ ಮಾರ್ಚ್‌ನ (March) ಕೊನೆ ವಾರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದರೂ, ಹವಾಮಾನದಲ್ಲಿ ಗಣನೀಯ  ಬದಲಾವಣೆ ಕಂಡುಬಂದಿದೆ. ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಹಲವೆಡೆ ಗುಡುಗು, ಮಿಂಚು, ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (Weather telecast) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಮೋಡ ಕವಿದ ವಾತಾವರಣ:

ಹವಾಮಾನ ಇಲಾಖೆ ನೀಡಿದ ವರದಿ ಪ್ರಕಾರ, ಮಾರ್ಚ್ 25ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಮಳೆ ಮತ್ತು ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ (In the northern interior districts) ತುಂತುರು ಮಳೆಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಇಂದು ಈ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ(Normal rain) :

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಉಡುಪಿ, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಗಾಳಿಯ (Air) ಪ್ರಭಾವ ಎಷ್ಟಿರಲಿದೆ?:

ರಾಜ್ಯದ ಕೆಲವೆಡೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ, ಜನರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ಕರ್ನಾಟಕದ ಹವಾಮಾನದಲ್ಲಿ ಗಂಭೀರ ಬದಲಾವಣೆ ಸಂಭವಿಸುವ ಸಾಧ್ಯತೆ ಇರುವುದರಿಂದ, ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಬಿರುಬಿಸಿಲಿನಿಂದ ತಾತ್ಕಾಲಿಕವಾಗಿ ರಕ್ಷಣೆಯಾಗುವ ಈ ಮಳೆಯು, ರೈತರಿಗೂ (Formers) ಅಲ್ಪ ಪ್ರಮಾಣದ ನಿರಾಳತೆಯನ್ನು ನೀಡಬಹುದು. ಆದರೆ ಗುಡುಗು, ಮಿಂಚು ಹಾಗೂ ಬಿರುಗಾಳಿಗೆ ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ (weather telecast department) ಮುನ್ನೆಚ್ಚರಿಕೆ ನೀಡಿದೆ. ಇನ್ನು, ರಾಜ್ಯದ ಉಳಿದ ಭಾಗಗಳಲ್ಲಿ ಹವಾಮಾನದಲ್ಲಿ ಬಿಸಿಲಿನ ಪ್ರಮಾಣ ಕಡಿಮೆಯಾಗಬಹುದು, ಆದರೆ ಒಣಗಾಳಿ ಹಾಗೂ ಉಷ್ಣತೆ ಸ್ಥಿರವಾಗಿರಬಹುದು ಎಂದು ತಜ್ಞರು ಹೇಳಿದ್ದಾರೆ.

ಈ ವಾತಾವರಣದ ಹಿನ್ನೆಲೆ, ರೈತರು ಮತ್ತು ಜನಸಾಮಾನ್ಯರು ಮುನ್ನೆಚ್ಚರಿಕೆ ಕ್ರಮಗಳನ್ನು (Precautionary measures) ತೆಗೆದುಕೊಳ್ಳುವುದು ಅಗತ್ಯ. ಅನಾವಶ್ಯಕ ಪ್ರವಾಸವನ್ನು ತಪ್ಪಿಸಿ, ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!