ಸರ್ಕಾರಿ ನೌಕರನೊಬ್ಬ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 48 ಗಂಟೆಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿದ್ದರೆ, ಕರ್ನಾಟಕ ನಾಗರೀಕ ಸೇವಾ ನಿಯಮಗಳು 1957ರ ಪ್ರಕಾರ ತಂತಾನೇ ಅಮಾನತುಗೊಳ್ಳುತ್ತಾರೆ. ಈ ನಿಯಮದ ಪ್ರಕಾರ, ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾದರೂ, ಸಕ್ಷಮ ಪ್ರಾಧಿಕಾರ ಅಮಾನತು ರದ್ದು ಮಾಡದ ತನಕ ನೌಕರನ ಅಮಾನತು ಮುಂದುವರೆಯುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸರ್ಕಾರದ ನಿರ್ಧಾರವೇ ಅಂತಿಮ ಎಂದು ಹೇಳಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯ್ತಿ ಪಿಡಿಓ ಡಿ.ಎಂ. ಪದ್ಮನಾಭ ಅವರು ಈ ನಿಯಮವನ್ನು ಪ್ರಶ್ನಿಸಿ ಹೈಕೋರ್ಟ್ (High court) ಮೊರೆ ಹೋಗಿದ್ದರು. ಅವರು ಕರ್ನಾಟಕ ಆಡಳಿತ ನ್ಯಾಯಾಧಿಕರಣ (ಕೆಎಟಿ) ನೀಡಿದ ಆದೇಶವನ್ನು ರದ್ದುಪಡಿಸಬೇಕು ಎಂಬ ಪ್ರಾರ್ಥನೆ ಮಾಡಿದ್ದರು. ಆದರೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿಎಂ ಜೋಶಿ ಅವರ ವಿಭಾಗೀಯ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದೆ.
2015ರ ಸರ್ಕಾರಿ ಸುತ್ತೋಲೆಯ ಪ್ರಕಾರ, ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾದ ಸರ್ಕಾರಿ ನೌಕರನನ್ನು ಮತ್ತೆ ಸೇವೆಗೆ ಸೇರಿಸಬೇಕೋ ಅಥವಾ ಅಮಾನತು ಮುಂದುವರಿಸಬೇಕೋ ಎಂಬುದನ್ನು ಸಕ್ಷಮ ಪ್ರಾಧಿಕಾರವೇ ನಿರ್ಧರಿಸಬೇಕು. ಹೀಗಾಗಿ, ನೌಕರನ ಅಮಾನತು ರದ್ದುಪಡಿಸುವ ಅಧಿಕಾರ ಸರ್ಕಾರದ ಕಡೆಯಲ್ಲಿದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.
ಈ ತೀರ್ಪಿನಿಂದ, ಸರ್ಕಾರಿ ನೌಕರರ ಸೇವಾ ನಿಯಮಗಳು ಮತ್ತು ಶಿಸ್ತು ಕ್ರಮಗಳ ಕುರಿತು ಸ್ಪಷ್ಟತೆ ದೊರಕಿದ್ದು, ಆಡಳಿತ ವ್ಯವಸ್ಥೆಯಲ್ಲಿ ಶಿಸ್ತು ಮತ್ತು ಜವಾಬ್ದಾರಿಯನ್ನು ಪಾಳುವಿಡಲು ಇದು ಪ್ರಮುಖ ನಿರ್ಧಾರವಾಗಿದೆ. ಇದು ಭವಿಷ್ಯದಲ್ಲಿ ಸರ್ಕಾರಿ ನೌಕರರ ಸೇವಾ ನಿಯಮಾವಳಿಗಳನ್ನು ಪಾಲಿಸಲು ಪ್ರೇರಣೆ ನೀಡುವಂತಿದೆ.ಮತ್ತು ಇಂತಹ ಉತ್ತಮವಾದ ಮಾಹಿತಿಯನ್ನು ನೀವು ತಿಳಿದಮೇಲೆ ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.