ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಹೊಸ BPL ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ, ದಾಖಲಾತಿಗಳು ಏನು ಬೇಕು, ಅರ್ಹತೆ ಏನು, ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ್ದು, ಈ ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳಿಗೆ ಮುಖ್ಯವಾಗಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮಾತ್ರ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಸಿಗಲಿವೆ ಎಂಬ ಸುದ್ದಿಯೇ ಬಿಪಿಎಲ್ ಕಾರ್ಡ್ಗೆ ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ ಈ ಯೋಜನೆಗಳ ಲಾಭ ಪಡೆಯಲು ಬಿಪಿಎಲ್ ರೇಷನ್ ಕಾರ್ಡ್ಗೆ ಜನರು ಮುಗಿ ಬಿದ್ದಿದ್ದಾರೆ.
ಹೊಸ ಪಡಿತರ ಚೀಟಿಗಾಗಿ ಅರ್ಜಿ ಪ್ರಕ್ರಿಯೆಯನ್ನೇ ಆಹಾರ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರಿಂದ, ಸರ್ಕಾರದ ಉಚಿತ ಕೊಡುಗೆಗಳನ್ನು ಪಡೆಯಲು ಮುಂದಾಗಿದ್ದ ಕೆಲವು ಜನರಿಗೆ ನಿರಾಶೆಯಾಗಿತ್ತು. ಆದರೆ, ಬಿಪಿಎಲ್ ಕಾರ್ಡ್ (BPL Ration Card) ನಿರೀಕ್ಷೆಯಲ್ಲಿ ಇದ್ದವರಿಗೆ ಇದೀಗ ಹೊಸ ಸುದ್ದಿ ಒಂದು ಹೊರ ಬಿದ್ದಿದ್ದು, BPL ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನ ಮಾಡಿದೆ ಎನ್ನಲಾಗಿದೆ.
ಬಿಪಿಎಲ್ ಪಡಿತರ ಚೀಟಿ: ಜೂನ್ 1 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ
ಮೇ 14 ರಿಂದ 20ರವರೆಗೆ 6 ದಿನಗಳಲ್ಲಿ ಬರೋಬ್ಬರಿ 78 ಸಾವಿರ ಅರ್ಜಿಗಳನ್ನು ಸಲ್ಲಿಸಲಾಗಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆಯೇ ಆನ್ಲೈನ್ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು. ಈಗ ಸರ್ಕಾರದ ಆದೇಶಕ್ಕೆ ಕಾಯಲಾಗುತ್ತಿದೆ. ಹೊಸ ಸರ್ಕಾರ ನಿರ್ದೇಶನ ನೀಡಿದ ನಂತರವಷ್ಟೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶವಾಗಲಿದೆ. ಮಾರ್ಗಸೂಚಿಗಳ ಪ್ರಕಾರ ಅರ್ಹರಿಗೆ ಬಿಪಿಎಲ್ ಪಡಿತರ ಚೀಟಿ ಕೊಡಲಾಗುತ್ತದೆ ಎನ್ನುತ್ತಾರೆ ಇಲಾಖೆ ಅಧಿಕಾರಿಗಳು. ಇದೇ ಜೂನ್ 1 ರಿಂದ ಹೊಸ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಬಹುದು ಎಂದು ಹೇಳಲಾಗುತ್ತಿದೆ.
ಬಿಪಿಎಲ್ ಪಡಿತರ ಚೀಟಿ ಅರ್ಜಿ ಸಲ್ಲಿಸಲು ದಾಖಲಾತಿಗಳು:
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ
- ರೇಷನ್ ಕಾರ್ಡ್ ಸಂಖ್ಯೆ
- ಜನನ ಪ್ರಮಾಣ ಪತ್ರ ( 6 ವರ್ಷದ ಒಳಗೆ ಮಕ್ಕಳು ಇದ್ದರೆ ಮಾತ್ರ )
Online ಅರ್ಜಿ ಸಲ್ಲಿಸುವ ವಿಧಾನ (ಅರ್ಜಿ ಸಲ್ಲಿಸಲು Secugen ಬಯೋಮೆಟ್ರಿಕ್ ನ ಅವಶ್ಯಕತೆ ಇದೆ)
ಹಂತ 1: ಇಲಾಖೆಯ ಅಧಿಕೃತ https://ahara.kar.nic.in/ ವೆಬ್ಸೈಟ್ ಭೇಟಿ ನೀಡಿ ಹೋಗಿ, ಇ-ಸೇವೆಗಳು’ (E Service) ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಹಂತ 2: ಇ-ರೇಷನ್ ಕಾರ್ಡ್ನಿಂದ ಹೊಸ ಪಡಿತರ ಚೀಟಿಯನ್ನು (New Ration card) ಆಯ್ಕೆ ಮಾಡಿ, “ಹೊಸ ಪಡಿತರ ಚೀಟಿ ವಿನಂತಿ” (New ration card request) ಮೇಲೆ ಕ್ಲಿಕ್ ಮಾಡಿ, ನಂತರ ಹೊಸ ಪಡಿತರ ಚೀಟಿ ವಿನಂತಿಯ (New ration card request) ಮೇಲೆ ಕ್ಲಿಕ್ ಮಾಡಿ.
ಹಂತ 3: ನಂತರ ಬಿಪಿಎಲ್ ಕಾರ್ಡ್ ಗೆ(BPL Card) ಅರ್ಜಿ ಸಲ್ಲಿಸಲು ಆದ್ಯತಾ ಹೌಸ್ಹೋಲ್ಡ್ (PHH) ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿ.
ಹಂತ 4: ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ಟೈಪ್ ಮಾಡಿ, ಹೋಗಿ(GO) ಬಟನ್ ಅನ್ನು ಕ್ಲಿಕ್ ಮಾಡಿ. ನಂತರ OTP ಅಥವಾ ಫಿಂಗರ್ಪ್ರಿಂಟ್ (Fingerprint) ಪರಿಶೀಲನೆಯನ್ನು ಬಳಸಿಕೊಂಡು ಯಶಸ್ವಿ ದೃಢೀಕರಣ ಮಾಡಬೇಕು.
ಹಂತ 5: ಅರ್ಜಿದಾರರು OTP ಅನ್ನು ಆಯ್ಕೆ ಮಾಡಿದರೆ, ನೋಂದಾಯಿತ ಮೊಬೈಲ್ ಫೋನ್ಗೆ SMS ಕಳುಹಿಸಲಾಗುತ್ತದೆ. OTP ಅನ್ನು ನಮೂದಿಸಿದ ನಂತರ ‘ಹೋಗಿ'(GO) ಕ್ಲಿಕ್ ಮಾಡಬೇಕು. ಯಶಸ್ವಿ ಪರಿಶೀಲನೆಯ ನಂತರ ಆಧಾರ್ ಡೇಟಾವನ್ನು (Adhar details) ತೋರಿಸಲಾಗುತ್ತದೆ. ನಂತರ “ಸೇರಿಸು” (Add) ಬಟನ್ ಕ್ಲಿಕ್ ಮಾಡುವ ಮೂಲಕ ಅಪ್ಲಿಕೇಶನ್ ಸಂಖ್ಯೆ ಕ್ರಿಯೇಟ್ ಆಗುತ್ತದೆ.
ಹಂತ 6: ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಪೂರ್ಣಗೊಳಿಸಿದ ನಂತರ ನಿಮ್ಮ ಅರ್ಜಿಯನ್ನು ಕಳುಹಿಸಲು “ಸಲ್ಲಿಸು”(Submit) ಮೇಲೆ ಕ್ಲಿಕ್ ಮಾಡಿ ಅರ್ಜಿ ಪೂರ್ಣಗೊಳಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ತಿದ್ದುಪಡಿ ಮಾಡಿಸುವುದು ಎಲ್ಲಿ?:
ನೀವು ಮೇಲೆ ತಿಳಿಸಿರುವ ಎಲ್ಲಾ ದಾಖಲಾತಿಗಳೊಂದಿಗೆ ನಿಮ್ಮ ಹತ್ತಿರದ CSC ಸೆಂಟರ್ ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರದಲ್ಲಿ ಅಥವಾ ಸೈಬರ್ ಸೆಂಟರ್ ಗಳಿಗೆ ಹೋಗಬಹುದು. ನಾವೇ ಸ್ವತಃ ಮೊಬೈಲ್ ಫೋನ್ ಮೂಲಕ ಅರ್ಜಿ ಸಲ್ಲಿಸಲು Secugen ಬಯೋಮೆಟ್ರಿಕ್ ನ ಅವಶ್ಯಕತೆ ಇದೆ. ಹಾಗಾಗಿ ಹತ್ತಿರದ ಸೈಬರ್ ಸೆಂಟರ್ ಸಿಎಸ್ಸಿ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ದಯವಿಟ್ಟು ಭೇಟಿ ನೀಡಿ ತಮ್ಮ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ