ರೈತರೇ ಗಮನಿಸಿ : ಈ ವರ್ಷದ ಬೆಳೆವಿಮೆ ಗೆ ಅರ್ಜಿ ಆಹ್ವಾನ..! ಕಳೆದ ವರ್ಷದ ಬೆಳೆವಿಮೆ ಮೊಬೈಲ್ ನಲ್ಲಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

Picsart 23 06 02 09 18 37 401

ಎಲ್ಲಿರಿಗೂ ನಮಸ್ಕಾರ, ಈ ಲೇಖನದಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ಸಂಭಂಧಿಸಿದಂತೆ ನೋಂದಣಿ ಮಾಡಲು ಗ್ರಾಮ ಒನ್ ಕೇಂದ್ರಗಳಲ್ಲಿ ಅವಕಾಶ ನೀಡಿರುವ ಮತ್ತು ಕಳೆದ ವರ್ಷದ ಬೆಳೆ ವಿಮೆ ಹಣದ ಸ್ಟೇಟಸ್ ಚೆಕ್ ಮಾಡುವ ವಿಧಾನದ ಕುರಿತು ತಿಳಿಸಿಕೊಡಲಾಗುತ್ತದೆ.  ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ರೈತ ಬಾಂಧವರೇ ಮೊದಲು ಕಳೆದ ವರ್ಷದ ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳೋಣ ನಂತರ ಈ ವರ್ಷದ ಬೆಳೆ ವಿಮೆ ಅರ್ಜಿಗೆ ಹಾಕುವ ಸಂಪೂರ್ಣ ಮಾಹಿತಿಯನ್ನು ನೋಡೋಣ.

ಬೆಳೆವಿಮೆ ಸ್ಟೇಟಸ್ ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 1: ಈ  ಲಿಂಕ್ ಮೇಲೆ ಕ್ಲಿಕ್ ಮಾಡಿ https://www.samrakshane.karnataka.gov.in/

ನಂತರ ವರ್ಷದ ಆಯ್ಕೆ “2022-23” ಮತ್ತು ಋುತು “kharif” ಎಂದು select ಮಾಡಿ, “ಮುಂದೆ/Go” ಮೇಲೆ click ಮಾಡಿ

crop1

ಹಂತ 2: Farmer ಕಾಲಂನಲ್ಲಿ “Check status.” ಮೇಲೆ ಕ್ಲಿಕ್ ಮಾಡಿ

crop 2

ಹಂತ 3: ನಂತರ  Mobile number ಮೇಲೆ ಕ್ಲಿಕ್ ಮಾಡಿ,  Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

crop 3

ಹಂತ 4: ಈಗ ಇಲ್ಲಿ ಕಾಣುವ ಪ್ರಪೋಸಲ್ ನಂಬರನ್ನ ಬರೆದಿಟ್ಟುಕೊಂಡು ಮತ್ತೆ ಪ್ರಪೋಸಲ್ ನಂಬರ್ ಮೂಲಕ ಸರ್ಚ್ ಮಾಡಿ. ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

crop 4

ಈಗ ಗ್ರಾಮ ಒನ್‌ನಲ್ಲಿ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆ (pradhan mantri fasal bima yojana) ಯ ಬೆಳೆ ವಿಮೆಯನ್ನು ನೋಂದಾಯಿಸಿ :

ಬೆಂಗಳೂರು ಗ್ರಾಮಾಂತರ, ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ನಡೆಸಲ್ಪಟ್ಟ ಗ್ರಾಮ ಒನ್‌ ಸೇವಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಗಿಸಲಾಗಿದ್ದು, ಈ ಸಂಧರ್ಭದಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ರೇವಣಪ್ಪಯವರು ಗ್ರಾಮ ಒನ್‌ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಯಡಿ ರೈತರು ಬೆಳೆ ವಿಮೆಯನ್ನು ನೋಂದಾಯಿಸಬಹುದು ಎಂದು ಹೇಳೆಕೆ ನೀಡಿದ್ದಾರೆ.

Untitled 1 scaled
ಈ ಹಿಂದೆ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಯ ನೋಂದಣಿಕೆ ಮಾಡಲು ಬ್ಯಾಂಕುಗಳಲ್ಲಿ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಮಾತ್ರ ಸಾಧ್ಯವಾಗುತ್ತಿತ್ತು. ಪ್ರಸ್ತುತ ವರ್ಷದಿಂದ ಪ್ರತಿ ಜಿಲ್ಲೆಯ ಗ್ರಾಮ ಒನ್‌ ಕೇಂದ್ರಗಳಲ್ಲೂ ಬೆಳೆ ವಿಮೆ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ 99 ಗ್ರಾಮ ಒನ್‌ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಬೆಳೆ ವಿಮೆ ಯೋಜನೆಯ ಮಾಹಿತಿ ಹಾಗೂ ನೋಂದಣಿ ಮಾಡಿಕೊಳ್ಳುವ ಕ್ರಮಗಳಿಗೆ ಸೇರಿದಂತೆ ತರಬೇತಿಯನ್ನು ಏರ್ಪಡಿಸಲಾಗಿದೆ ಎಂದು ಹೇಳಿಕೆಯಲ್ಲಿ ಸೇರಿಸಿದ್ದಾರೆ. ಈ ಗ್ರಾಮ ಒನ್‌ ಸಿಬ್ಬಂದಿ ತರಬೇತಿ ಪಡೆಯುವ ಕಾರ್ಯಕ್ರಮದ ಮೂಲಕ ಬೆಳೆ ವಿಮೆ ಯೋಜನೆಯ ಕುರಿತು ರೈತರಲ್ಲಿ ತಿಳುವಳಿಕೆಯನ್ನು ಮೂಡಿಸಿ ಹೆಚ್ಚಿನ ಪ್ರಮಾಣದಲ್ಲಿ ರೈತರು ಬೆಳೆ ವಿಮೆ ನೋಂದಣಿ ಮಾಡಿಸಬೇಕೆನ್ನುವ ಉದ್ದೇಶ ಈ ಕಾರ್ಯಕ್ರಮದಾಗಿರುತ್ತದೆ.

ಉಚಿತ ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here

2022-23 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯ 10 ಬೆಳೆಗಳನ್ನು ಗುರುತಿಸಿ,  ಆಯಾ ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮಾ ನೋಂದಣಿ ಮಾಡಿಕೊಂಡು ಈ ಯೋಜನೆಯ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ರವಿಕುಮಾರ್‌, ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ್‌, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ಹಾಗೂ ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹೀಗೆ ರೈತರಿಗೆ ಅತ್ಯುತ್ತಮ ಉಪಕಾರಿಯಾಗಿರುವ ಈ ಲೇಖನದ ವಿಷಯವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ರೈತ ಬಾಂಧವರಿಗೆ ಶೇರ್ ಮಾಡಿ, ಧನ್ಯವಾದಗಳು.

telee

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!