ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ 2023-24 ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಬಸ್ ಬಸ್ ಪಾಸ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿಕೊಡಲಾಗುತ್ತದೆ,ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವಾರ್ಷಿಕ ಬಸ್ ಪಾಸ್ ಪಡೆಯಲು ಹೊಸ ದರವನ್ನು ಹಾಗೂ ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೊರ್ಟಲ್ ಲಿಂಕ್ ಓಪನ್ ಮಾಡಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
Student Bus Pass 2023 : ವಿದ್ಯಾರ್ಥಿ ಬಸ್ ಪಾಸ್ 2023
ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು/ಡಿಪ್ಲೊಮ, ಐಟಿಐ, ವೃತ್ತಿಪರ ಕೋರ್ಸ್‌ಗಳು, ಸಂಜೆ ಕಾಲೇಜು, ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ಹೊಸ ದರವನ್ನು ನಿಗದಿ ಮಾಡಿದೆ. ಜೊತೆಗೆ, ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೊಸ ದರವನ್ನು ನಿಗದಿ ಮಾಡಿ ಆದೇಶವನ್ನು ಹೊರಡಿಸಿದೆ.
ಬಸ್ ಪಾಸ್ ಪಡೆಯಲು ಬೇಕಾದ ದಾಖಲೆಗಳು
- ಖಾಯಂ ವಿಳಾಸ ದಾಖಲೆ ( ಆಧಾರ್ ಕಾರ್ಡ್).
- ಶಾಲಾ/ಕಾಲೇಜಿನ 2023-24ನೇ ಸಾಲಿನ ಪ್ರವೇಶ ರಸೀದಿ.
- ವಿಳಾಸ ಬದಲಾವಣೆ ಇದ್ದಲ್ಲಿ ದಾಖಲೆ ಪತ್ರ.
- ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಲಗತ್ತಿಸುವುದು ಕಡ್ಡಾಯ.
- ಪಾಸ್‌ಪೋರ್ಟ್ ಅಳತೆಯ ಫೋಟೋ.
ಬಸ್ ಪಾಸ್ ದರ:
ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾರ್ಥಿ ಬಸ್ ಪಾಸ್ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು.
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್ ಲಾಗಿನ್ ಆಗಬೇಕು. ವಿದ್ಯಾರ್ಥಿಗಳು ಜೂನ್ 12 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://sevasindhuservices.karnataka.gov.in/
ಹಂತ 2: ನೀವು ಮೊದಲ ಸಾರಿ ನಿವಾಸಿದ್ದು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ Student Buspass ಆಯ್ಕೆ ಮಾಡಿ.
ಹಂತ 4: ಕೆಳಗೆ ಕೊಡಲಾದ ಡಿಕ್ಲರೇಷನ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಂಡು. ಭರ್ತಿ ಮಾಡಿ ಅಪ್ಲೋಡ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬೇಕು
ಹಂತ 5: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.
ಹಂತ 6: ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿದ ನಂತರ ಸಬ್ಮಿಟ್ ಮಾಡಿ. ವಿದ್ಯಾರ್ಥಿ ಪಾಸ್ ಅಪ್ಲಿಕೇಶನ್‌ನಲ್ಲಿ ನಮೂದಿಸಲಾದ ಮೊಬೈಲ್ ನಂಬರ್‌ಗೆ ಒಟಿಪಿ ಬರುತ್ತದೆ. ನಂತರ ಕೆಎಸ್ ಆರ್‌ಟಿಸಿ ಸಂಸ್ಥೆಯಿಂದ ಅನುಮೋದನೆಯ ಎಸ್‌ಎಂಎಸ್ ಕಳಿಸಲಾಗುತ್ತದೆ. ಅನುಮೋದನೆ ಎಸ್‌ಎಂಎಸ್ ಸ್ವೀಕರಿಸಿದ ನಂತರ ಹತ್ತಿರದ ಪಾಸ್ ವಿತರಣಾ ಕೇಂದ್ರಕ್ಕೆ ತೆರಳಿ ಪಾಸ್ ಪಡೆದುಕೊಳ್ಳಿ.
ವಿದ್ಯಾರ್ಥಿನಿಯರಿಗೆ ಫ್ರೀ ಬಸ್
ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲಾಗಿದೆ. ಹೀಗಾಗಿ ವಿದ್ಯಾರ್ಥಿನಿಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಇರಲಿದೆ.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ