ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಜ್ಯೋತಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲಾಗುವುದು. ಈ ಗೃಹಜ್ಯೋತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾವ ದಾಖಲೆಗಳು ಬೇಕು?, ಷರತ್ತುಗಳು ಏನಿದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಜ್ಯೋತಿ ಯೋಜನೆ ಆನ್ಲೈನ್ ಅರ್ಜಿ:
ಕರ್ನಾಟಕ ಗೃಹ ಜ್ಯೋತಿ ಯೋಜನೆಯಡಿ, ಕರ್ನಾಟಕ ಸರ್ಕಾರವು ಕರ್ನಾಟಕದ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ವಿದ್ಯುತ್ ಅನ್ನು ಒದಗಿಸುತ್ತದೆ. ಕರ್ನಾಟಕ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ತಿಂಗಳಿಗೆ 200 ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಸುವ ಕುಟುಂಬಗಳು ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಮನೆಯಲ್ಲಿ ಗೃಹ ವಿದ್ಯುತ್ ಸಂಪರ್ಕ ಹೊಂದಿರುವ ಕರ್ನಾಟಕದ ಖಾಯಂ ನಿವಾಸಿಗಳು ಕರ್ನಾಟಕ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಉಚಿತ ವಿದ್ಯುತ್ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಯೋಜನೆ ಲಾಭವನ್ನು ಪಡೆಯಲು ಅನ್ವಯಿಸಲಾಗದ ಷರತ್ತುಗಳು, ಬೇಕಾಗಿರುವ ಧಾಖಲೆಗಳು, ಅರ್ಜಿಯನ್ನು ಸಲ್ಲಿಸುವ ವಿಧಾನ ಹಾಗೂ ಯೋಜನೆಯ ಪ್ರಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿವೇ.
ಯಾರಿಗೆಲ್ಲ ಉಚಿತ ವಿದ್ಯುತ್?:
ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರು ಮನೆಯ ವಿದ್ಯುತ್ ಸಂಪರ್ಕವನ್ನು ಹೊಂದಿರಬೇಕು.
ದಲಿತರು, ಒಬಿಸಿಗಳು ಮತ್ತು ಅಲ್ಪಸಂಖ್ಯಾತರಿಗೆ ಸೀಮಿತವಾಗಿರದೆ ಎಲ್ಲರಿಗೂ ನೀಡಲಾಗುವುದು
ಗೃಹಜ್ಯೋತಿ ಯೋಜನೆಯ ಉಪಯೋಗವನ್ನು ಪಡೆಯಲು ಬೇಕಾಗಿರುವ ದಾಖಲೆಗಳು?:
ಕರ್ನಾಟಕ ಗೃಹ ಜ್ಯೋತಿ ಯೋಜನೆಯ ಪ್ರಯೋಜನವನ್ನು ಪಡೆಯಲು ಈ ಕೆಳಗಿನ ದಾಖಲೆಗಳು ಬೇಕಾಗುತ್ತವೆ:-
ಕರ್ನಾಟಕದ ನಿವಾಸ ಪುರಾವೆ
ಆಧಾರ್ ಕಾರ್ಡ್.
ವಿದ್ಯುತ್ ಸಂಪರ್ಕ/ ವಿದ್ಯುತ್ ಬಿಲ್.
ಬಾಡಿಗೆ ಮನೆಯಲ್ಲಿ ವಾಸವಾಗಿದ್ದರೆ ಬಾಡಿಗೆಯ ಕರಾರು ಪತ್ರ
“ಗೃಹ ಜ್ಯೋತಿ” ಯೋಜನೆಯ ಷರತ್ತುಗಳು:
ಗೃಹ ಜ್ಯೋತಿ ಯೋಜನೆಯು ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದ್ದು, ಮಾಸಿಕ ಬಳಕೆ ಗರಿಷ್ಠ 200 ಯೂನಿಟ್‌ಗಳವರೆಗೆ, ಪ್ರತಿ ಗ್ರಾಹಕ ಕಳೆದ ಹಣಕಾಸು ವರ್ಷದಲ್ಲಿ ಅವರ ಮಾಸಿಕ ಸರಾಸರಿ ಬಳಕೆಯ ಮೇಲೆ ಮತ್ತು ಅವರ ಸರಾಸರಿ ಬಳಕೆಯ ಮೇಲೆ 10% ಉಚಿತ ಅರ್ಹತೆಗೆ ಅರ್ಹರಾಗಿರುತ್ತಾರೆ. ಈ ಉಪಕ್ರಮವು ಎಲ್ಲರನ್ನೂ ಒಳಗೊಳ್ಳುವ ಮತ್ತು ಕಲ್ಯಾಣಕಾರಿಯಾಗಿದ್ದು, ಈ ರೀತಿಯ ಮೊದಲನೆಯದು ಮತ್ತು ಇದು ಕರ್ನಾಟಕ ರಾಜ್ಯದ 2 ಕೋಟಿ ದೇಶೀಯ ಗ್ರಾಹಕರಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯು ಆಗಸ್ಟ್ 1″ 2023 ರಿಂದ (ಜುಲೈನಲ್ಲಿ ವಿದ್ಯುತ್ ಬಳಕೆಗಾಗಿ) ಜಾರಿಗೆ ಬರಲಿದೆ. ಫಲಾನುಭವಿಗಳು ತಮ್ಮ ಅರ್ಹತೆಯೊಳಗೆ ಬಳಕೆಯಾಗಿದ್ದರೆ ಆಗಸ್ಟ್ 1 ರಿಂದ ಪ್ರಾರಂಭವಾಗುವ ಶೂನ್ಯ ಬಿಲ್’ ಅನ್ನು ಪಡೆಯುತ್ತಾರೆ.
ಕರಾರು ಪತ್ರ ಕಡ್ಡಾಯ:
ಸಚಿವ ಜಾರ್ಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿರುವಂತೆ ರಾಜ್ಯದಲ್ಲಿ 200ಯೂನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವ 2.16 ಕೋಟಿ ಜನರಿದ್ದಾರೆ. 2 ಲಕಷಕ್ಕಿಂತ ಹೆಚ್ಚಿನ ಗ್ರಾಹಕರು 200 ಯೂನಿಟ್‌ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡುತ್ತಾರೆ.
ಹೊಸದಾಗಿ ಮನೆ ಕಟ್ಟಿದವರಿಗೆ, ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ಇರುವವರಿಗೆ ಈ ಯೋಜನೆ ಸದ್ಯಕ್ಕೆ ಜಾರಿಯಾಗುವುದಿಲ್ಲ. ಇದರ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಸ್ಪಷ್ಟತೆಯನ್ನು ನೀಡುತ್ತೇವೆ ಎಂದು ಹೇಳಿದ್ದಾರೆ. ಬೇರೆ ರಾಜ್ಯಗಳಿಂದ ಬಂದು ಇಲ್ಲಿ ವಾಸ ಇರುವವರಿಗೆ ಈ ಯೋಜನೆಯ ಲಾಭವನ್ನು ಪಡೆಯಬಹುದು. ಆದರೆ, ಆಧಾರ್ ಗುರುತಿನ ಚೀಟಿಯಲ್ಲಿ ಇಲ್ಲಿನ ವಿಳಾಸ ನಮೂದಿಸಿರಬೇಕು ಇಲ್ಲವಾದಲ್ಲಿ ಕಡ್ಡಾಯವಾಗಿ ಕರಾರು ಪತ್ರ ಸಲ್ಲಿಸಬೇಕು, ಎಂದು ಮಾಹಿತಿ ನೀಡಿದ್ದಾರೆ.
ವಾಣಿಜ್ಯ ಕಟ್ಟಡಗಳು ಹಾಗೂ ಅಂಗಡಿಗಳಿಗೆ ಈ ಯೋಜನೆಯ ಅನ್ವಯಿಸುವುದಿಲ್ಲ.
ಕಡ್ಡಾಯವಾಗಿ ವಿದ್ಯುತ್ ಕನ್ಸ್ಯುಮರ್ ಐಡಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಲೇಬೇಕು.
ಅರ್ಜಿಯನ್ನು ಸಲ್ಲಿಸುವ ವಿಧಾನ :
ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಜೂನ್ 18ರಂದು ಪ್ರಾರಂಭಿಸಲಾಗುವುದು ಎಂದು ಸರ್ಕಾರ ಪ್ರಕಟಿಸಿದೆ.
ಈ ಯೋಜನೆಯನ್ನು ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷ ಕಸ್ಟಮ್-ನಿರ್ಮಿತ ಪುಟದ ಅಡಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಸೇವಾ ಸಿಂಧೂವಿನ ಜಾಲತಾಣದ ಲಿಂಕನ್ನು ಕೆಳಗೆ ನೀಡಲಾಗಿದೆ:
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs1.karnataka.gov.in/#
ನಾಗರಿಕರು ತಮ್ಮ ಮಾಹಿತಿಗಳನ್ನು ಅಪ್ಲೋಡ್ ಮಾಡಲು ಲ್ಯಾಪ್‌ಟಾಪ್, ಮೊಬೈಲ್ ಫೋನ್ ಸೇರಿದಂತೆ ಯಾವುದೇ ಸಾಧನವನ್ನು ಬಳಸಬಹುದು. ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್‌ಗಳು ಮತ್ತು ಗ್ರಾಹಕ ID ಗಳನ್ನು ನೋಂದಣಿಗಾಗಿ ವಿದ್ಯುತ್ ಬಿಲ್‌ಗಳಲ್ಲಿ ನಮೂದಿಸಿದಂತೆ ಬಳಸಬೇಕು, ಇದನ್ನು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಯಾವುದೇ ಇತರ ಕೇಂದ್ರಗಳಲ್ಲಿಯೂ ಮಾಡಬಹುದು.
ನಾಳೆಯಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶುರುವಾಗಲಿದ್ದು ಈ ಮೇಲಿನ ಎಲ್ಲ ಮಾಹಿತಿಗಳನ್ನು ಎಲ್ಲರೂ ತಿಳಿದುಕೊಳ್ಳುವುದು ಸೂಕ್ತವಾಗಿದೆ.
ಸ್ವತಃ ಅರ್ಜಿ ಸಲ್ಲಿಸಲು ಸೇವಾ ಸಿಂಧುವಿನಲ್ಲಿ ಐಡಿ ಕ್ರಿಯೇಟ್ ಮಾಡುವುದು ಕಡ್ಡಾಯ
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://sevasindhuservices.karnataka.gov.in/
ಹಂತ 2: ನೀವು ಮೊದಲ ಸಾರಿ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ
ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.
ಈ ತರಹದ ಉತ್ತಮ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹತರಿಗೆ ಹಾಗೂ ಬಂಧುಗಳಿಗೆ ತಪ್ಪದೆ ಶೇರ್ ಮಾಡಿ, ಧನ್ಯವಾದಗಳು.
ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ
ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
ಹೀಗೆ ನೀವು ಸರ್ಕಾರದ ವತಿಯಿಂದ ಘೋಷಣೆ ಹೊರಡಿಸಿದ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ