ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ(gruhalakshmi) ಯೋಜನೆಯ ಆಪ್(app) ಬಿಡುಗಡೆಯಾಗುತ್ತಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಅಪ್ಲಿಕೇಶನ್ ಹೇಗೆ ಕೆಲಸ ಮಾಡುತ್ತದೆ?, ಇದರಲ್ಲೇನೇ ಎಲ್ಲರೂ ಅರ್ಜಿಯನ್ನು ಸಲ್ಲಿಸಬಹುದಾ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅಪ್ಲಿಕೇಶನ್ ಹಾಕಲು ಆಪ್ ಬರುತ್ತದೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇನ್ನೇನು ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಅಪ್ಲಿಕೇಶನ್ ಬಿಡುಗಡೆಯಾಗಲಿದೆ ಎಂದು ಹೇಳಿದರು. ಇದರ ಮುಂಚೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಕಚೇರಿಗಳಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬೇಕು ಎಂದು ಹೇಳಿಕೆ ಇತ್ತು, ಆದರೆ ಆದರೆ ಇನ್ನು ಮುಂದೆ ಇದರ ಸಮಸ್ಯೆ ಇರುವುದಿಲ್ಲ. ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನಕ್ಕಾಗಿ ತಂತ್ರಾಂಶ ಹಾಗೂ ಅಪ್ಲಿಕೇಶನ್ ಸಿದ್ಧತೆಯನ್ನು ಮಾಡುತ್ತಿರುವುದರಾಗಿ ತಿಳಿಸಿದರು.
ಭೌತಿಕ ಸಲ್ಲಿಕೆ ಪ್ರಕ್ರಿಯೆಗೆ ಜೊತೆಗೆ, ಸಿಎಸ್‌ಸಿ ಕೇಂದ್ರಗಳು, ಬಾಪೂಜಿ ಸೇವಾ ಸಿಂಧು ಕೇಂದ್ರಗಳು, ಗ್ರಾಮ್ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್‌ನಂತಹ ವಿವಿಧ ಕೇಂದ್ರಗಳ ಮೂಲಕ ಪಿಸಿ ಮತ್ತು ಮೊಬೈಲ್ ಸಾಧನಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ನೆರವೇರಿಸಬಹುದು. ಇದಲ್ಲದೆ, ಕಂದಾಯ ಇಲಾಖೆಯ ಸಿಬ್ಬಂದಿಯನ್ನು ಉಪಯೋಗಿಸಿ ಪ್ರತಿ ಮನೆಯಿಂದ ಮೊದಲಿಗಾಗಿ ಅರ್ಜಿಗಳನ್ನು ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ.
ಮಹಿಳಾ ಅರ್ಜಿದಾರರು ಅತ್ಯಂತ ಸುಲಭವಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಗಾಗಿ ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಹೋಗಬೇಕಾಗಿಲ್ಲ. ಅರ್ಜಿಗಳನ್ನು ಪಡೆಯಲು ಸಿಬ್ಬಂದಿಯವರು ತಮ್ಮ ಮನೆಯ ಬಾಗಿಲಿಗೆ ಭೇಟಿ ನೀಡುತ್ತಾರೆ.
ರೇಷನ್ ಕಾರ್ಡ್ ಇಲ್ಲದೆ ಇರುವವರು ಹೇಗೆ ಅರ್ಜಿ ಸಲ್ಲಿಸಬಹುದು?
ಈಗಾಗಲೇ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆ ದಿನಾಂಕ ಇರುವುದಿಲ್ಲ. ಹಾಗಾಗಿ ಇನ್ನೇನು ಕೆಲವು ದಿನಗಳಲ್ಲಿ ಮತ್ತೆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಿಸಬಹುದು. ಕೆಲವು ಮೂಲಗಳ ಪ್ರಕಾರ ಜುಲೈ 1ರಿಂದ ಅವಕಾಶವಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗುತ್ತಿದ್ದಂತೆ ನೀವು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಪಡೆದುಕೊಂಡು ತಕ್ಷಣವೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಹೌದು ಎಪಿಎಲ್ ಕಾರ್ಡಿಗೆ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು ಇದೊಂದು ಆಧಾರ್ ಕಾರ್ಡ್ ನೊಂದಿಗೆ ಗುರುತಿನ ಚೀಟಿಯಾಗಿದೆ. ಹಾಗಾಗಿ ರೇಷನ್ ಕಾರ್ಡ್ ಇಲ್ಲದೇ ಇರುವವರು ಚಿಂತೆ ಮಾಡಬೇಕಾಗಿಲ್ಲ. ಸ್ವಲ್ಪ ದಿನ ಕಾಯ್ದು ಹೊಸ ರೇಷನ್ ಕಾರ್ಡ್ ಪಡೆದುಕೊಂಡು ಗೃಹ ಲಕ್ಷ್ಮೀ ಯೋಜನೆಗೆ ಸಲ್ಲಿಸಿ ರೂ.2000 ಹಣವನ್ನು ಪಡೆದುಕೊಳ್ಳಬಹುದು
Offline ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ನಿಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ನಮೂನೆ ಸಿಗುತ್ತದೆ. ಈ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಕೆಳಗೆ ಕೊಡಲಾದ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಬೇಕು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು.
ದಾಖಲಾತಿಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಫೋಟೋ
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಬ್ರೇಕಿಂಗ್ ನ್ಯೂಸ್: ಗೃಹ ಲಕ್ಷ್ಮಿ ಯೋಜನೆ ಆನ್ಲೈನ್ ವೆಬ್ಸೈಟ್ ಡೈರೆಕ್ಟ್ ಲಿಂಕ್
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ
- ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
- GST ಪಾವತಿ ಮಾಡುವ ಕುಟುಂಬಗಳು
- APL, BPL ಕಾರ್ಡ್ ಹೊಂದಿರದ ಕುಟುಂಬಗಳು
- ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
- ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ
ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ
ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
Shakti Smart card : ಮಹಿಳೆಯರಿಗೆ ಉಚಿತ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್? ಅರ್ಜಿ ಸಲ್ಲಿಸುವುದು ಹೇಗೆ?
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ