ಎಲ್ಲರಿಗೂ ನಮಸ್ಕಾರ, ಈ ಲೇಖನದಲ್ಲಿ ಗೃಹಜೋತಿ ಯೋಜನೆಗೆ ನಿಮ್ಮ ಮೊಬೈಲ್ ಫೋನ್ ಮೂಲಕ ಕೇವಲ ಐದು ನಿಮಿಷದಲ್ಲಿ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು ಎನ್ನುವುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ,
ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸುವಾಗ ನೀವು ಸೇವಾ ಸಿಂಧು ಪೋರ್ಟಲ್ ನ ಬದಲಾಗಿ ವಿಶೇಷವಾಗಿ ಖಾತರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ನಿಯೋಜಿಸಲಾದ ಹೊಸ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಹೊಸ ವೆಬ್ ಸೈಟ್ ನಲ್ಲಿ ನೀವು ಪಂಚ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಕೇವಲ ಗೃಹ ಜ್ಯೋತಿ ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳಿಗೆ ಇದೇ ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ನಮ್ಮ ವಿಡಿಯೋ ನೋಡುವ ಮೂಲಕ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಆನ್ಲೈನ್ ಮೂಲಕ ನೊಂದಣಿ ಮಾಡಿಕೊಂಡಿದ್ದಾರೆ. ನಮ್ಮ ಎಲ್ಲಾ ವೀಕ್ಷಕರಿಗೂ ತುಂಬಾ ಧನ್ಯವಾದಗಳು ನಿಮ್ಮ ಪ್ರೀತಿ ವಿಶ್ವಾಸ ನಮ್ಮ ಮೇಲೆ ಹೀಗೆ ಇರಲಿ. ನಮ್ಮ Android ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳೋ ಮೂಲಕ ನಿಖರವಾದ ಮತ್ತು ಸ್ಪಷ್ಟ ಸುದ್ದಿಗಳನ್ನು ನೀವು ಪ್ರತಿದಿನ ಓದಬಹುದು.
ನೀವು ನಿಮ್ಮ ಮೊಬೈಲ್ ಫೋನ್ ಮೂಲಕನೇ ಮನೆಯಿಂದಾನೆ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಬೇಕಾದ ದಾಖಲಾತಿಗಳು ಕೇವಲ ನಿಮ್ಮ ಆಧಾರ್ ಕಾರ್ಡ್, ವಿದ್ಯುತ್ ಬಿಲ್ ನಲ್ಲಿರುವ ಕಸ್ಟಮರ್ ಐಡಿ ನಂಬರ್ ಮತ್ತು ನಿಮ್ಮ ಮೊಬೈಲ್ ಸಂಖ್ಯೆ ಮಾತ್ರ. ಇವುಗಳನ್ನು ಹೊರತುಪಡಿಸಿ ನೀವು ಯಾವುದೇ ದಾಖಲಾತಿಗಳನ್ನು ಅಪ್ಲೋಡ್ ಮಾಡುವ ಅಗತ್ಯ ಇಲ್ಲ ಹಾಗೂ ಈ ಸಲ್ಲಿಸಲು ಯಾವುದೇ ಕೊನೆ ದಿನಾಂಕ ನಿಗದಿ ಮಾಡಿಲ್ಲ ಹಾಗಾಗಿ ಯಾರೂ ಚಿಂತೆ ಮಾಡದೆ ಯಾವಾಗ ಬೇಕಾದರೂ ಅರ್ಜಿಯನ್ನು ಮೊಬೈಲ್ ಫೋನ್ ಮೂಲಕ ಉಚಿತವಾಗಿ ಸಲ್ಲಿಸಬಹುದು. ಇಡೀ ದಿನ ಸರ್ವರ್ ಡೌನ್ ಇರುವ ಕಾರಣ ರಾತ್ರಿ 11:30ಯಿಂದ ಬೆಳಗ್ಗೆ 7:00 ಒಳಗಾಗಿ ಅರ್ಜಿಯನ್ನ ಸಲ್ಲಿಸಲು ಸೂಕ್ತ ಸಮಯ ಎಂದು ನಮ್ಮ ಅಭಿಪ್ರಾಯ. ಹಾಗೂ ಗ್ರಾಮ್ ಒನ್, ಕರ್ನಾಟಕ ಒನ್, ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಹಿತ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನೇರವಾದ ಲಿಂಕ್ ಮತ್ತು ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸುವ ಲೈವ್ ವಿಡಿಯೋ ಕೆಳಗಿದೆ ದಯವಿಟ್ಟು ನೋಡಿ ಅರ್ಜಿ ಸಲ್ಲಿಸಿ
ಗೃಹಜ್ಯೋತಿ ಯೋಜನೆ ಆನ್ಲೈನ್ ಅರ್ಜಿ:
ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಿರುವ https://sevasindhugs.karnataka.gov.in/ ವಿಳಾಸದಲ್ಲಿ ಲಾಗಿನ್ ಆಗಿ ನೋಂದಾಯಿಸಬೇಕು.
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs.karnataka.gov.in/
ಎರಡನೇ ದಿನವಾದ ನಿನ್ನೆ1,61,958 ಜನರು ನೋಂದಣಿ ಮಾಡಿಕೊಂಡಿದ್ದಾರೆ ಯೋಜನೆ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಂಧನ ಇಲಾಖೆ ತಿಳಿಸಿದೆ.
ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ಎಸ್ಕಾಂ ಹೆಸರು, ಖಾತೆ ಸಂಖ್ಯೆ, ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ, ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ, ಎಸ್ಕಾಂ ಹೆಸರು1, ಬಳಕೆದಾರರ ವಿಧ (ಇಲ್ಲಿ ಎರಡು ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು) ಎಂದಿದೆ, ಆಧಾರ್ ಸಂಖ್ಯೆ, ಅರ್ಜಿದಾರರ ಹೆಸರು, ಸಂವಹನಕ್ಕಾಗಿ ದೂರವಾಣಿ ಸಂಖ್ಯೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ.
ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.
ಹಂತ 3: ಎಲ್ಲಾ ಸರಿಯಾದ ಮಾಹಿತಿಯನ್ನ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರ ಕೆಳಗಡೆ ಈ ರೀತಿಯಾಗಿ ನಿಮಗೆ ಸ್ವೀಕೃತಿ ಪತ್ರ ದೊರೆಯುತ್ತದೆ
ನಿಮಗೆ ಮೊಬೈಲ್ ನಲ್ಲಿ ಅಪ್ಲಿಕೇಶನ್ ಹಾಕುವಾಗ ಏನಾದ್ರು ಸಮಸ್ಯೆ ಆದರೆ ಹತ್ತಿರದ ಗ್ರಾಮ ಒನ್ ಕರ್ನಾಟಕ ಒನ್ ಬೆಂಗಳೂರು ಒನ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು
ಸೂಚನೆ: ಇಂದು ಬಹಳ ಜನ ಗೃಹಜೋತಿ ಯೋಜನೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ ಹಾಗಾಗಿ ತಾಂತ್ರಿಕ ಕಾರಣಗಳಿಂದ ವೆಬ್ಸೈಟ್ ತೆರೆಯದಿದ್ದರೆ ಸ್ವಲ್ಪ ಸಮಯದ ನಂತರ ಮತ್ತೆ ಪ್ರಯತ್ನಿಸಿ, ಅರ್ಜಿ ಸಲ್ಲಿಸಿ
https://youtu.be/pHcGtQN8MD4
ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ