ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ ಹಣ ಸಿಗುವುದರ ಬಗ್ಗೆ ಮತ್ತು ಸರ್ಕಾರದ ಹೊಸ ಎರಡು ಕಂಡೀಶನ್ ಗಳ ಬಗ್ಗೆ ಮಾಹಿತಿ ಕೊಡಲಾಗುತ್ತದೆ. ಅನ್ನ ಭಾಗ್ಯದ 5kg ಅಕ್ಕಿಯ ಬದಲಾಗಿ ₹170 ರೂಪಾಯಿಯನ್ನು ಇದೇ ಜುಲೈ ತಿಂಗಳಿನಿಂದ ಗ್ರಾಹಕರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಾರೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅನ್ನ ಭಾಗ್ಯ ಯೋಜನೆಯ ಅಕ್ಕಿ ಪಡೆಯಲು ಈಗಾಗಲೇ ಹಲವಾರು ಕಂಡೀಶನ್ ಗಳನ್ನು ರಾಜ್ಯ ಸರ್ಕಾರ ಹೇರಿದೆ ಇದರ ಜೊತೆ ಮತ್ತೆರಡು ಹೊಸ ಷರತ್ತುಗಳನ್ನು ವಿಧಿಸಲಾಗಿದೆ ಇದರಿಂದ ರಾಜ್ಯದ ಲಕ್ಷಾಂತರ ಜನರ ಅನ್ನ ಭಾಗ್ಯ ಯೋಜನೆ ಯಿಂದ ವಂಚಿತರಾಗಲಿದ್ದಾರೆ.
ಉಚಿತ ಅಕ್ಕಿ ಜೊತೆ ಹಣ ಪಡೆಯಲು ಮತ್ತೆರಡು ಹೊಸ ಷರತ್ತುಗಳು
ಈಗಾಗಲೇ ಬಿಪಿಎಲ್ ಕಾರ್ಡ್ದಾರರು ಮತ್ತು ಅಂತ್ಯೋದಯ ಕಾರ್ಡ್ ಉಳ್ಳವರಿಗೆ ಮಾತ್ರ ಅನ್ನಭಾಗ್ಯ ಯೋಜನೆಯ 10 ಕೆ.ಜಿ. ಅಕ್ಕಿಯನ್ನು ವಿತರಣೆ ಮಾಡುವುದಾಗಿ ಸರ್ಕಾರ ತಿಳಿಸಿದೆ. ಆದರೆ, ಜುಲೈ 1 ರಿಂದ ಆರಂಭವಾಗಬೇಕಿದ್ದ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಹಿನ್ನಡೆ ಉಂಟಾಗಿದೆ. ಇನ್ನು ಅಕ್ಕಿ ಲಭ್ಯವಾಗದ ಹಿನ್ನೆಲೆಯಲ್ಲಿ 5 ಕೆ.ಜಿ ಅಕ್ಕಿಯನ್ನು ಹಾಗೂ ಉಳಿದ 5 ಕೆ.ಜಿ. ಅಕ್ಕಿಯ ಬದಲಾಗಿ 170 ರೂ. ಹಣವನ್ನು ಪಾವತಿಸುವುದಾಗಿ ಸರ್ಕಾರ ಹೇಳಿದೆ. ಆದರೆ, ಈಗ ಹಣ ಪಾವತಿಗೆ ಪುನಃ ನೂರೆಂಟು ಷರತ್ತುಗಳನ್ನು ವಿಧಿಸಲು ಮುಂದಾಗಿದೆ.
ಅಂತೋದಯಾ ಕಾರ್ಡ್ ಇದ್ದವರಿಗೆ ಶಾಕ್ : ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಷರತ್ತು ವಿಧಿಸಿದೆ. ಅಂತ್ಯೋದಯ ಕಾರ್ಡ್ ಹೊಂದಿದ ಕುಟುಂಬದಲ್ಲಿ 3 ಅಥವಾ 3ಕ್ಕಿಂತ ಕಡಿಮೆ ಜನರಿದ್ದರೆ ಅಕ್ಕಿಯ ಬದಲಾಗಿ ಹಣ ಸಿಗುವುದಿಲ್ಲ. ಅಂತ್ಯೋದಯ ಕಾರ್ಡ್ಗೆ ಈಗ 35ಕೆಜಿ ಅಕ್ಕಿ ನೀಡಲಾಗ್ತಿದೆ. ಆದರೆ, ಮೂವರಿಗೆ 35 ಕೆಜಿ ಅಕ್ಕಿ ಸಾಕು ಅನ್ನೋದು ಸರ್ಕಾರದ ಲೆಕ್ಕವಾಗಿದೆ. ಅಂತ್ಯೋದಯ ಕಾರ್ಡ್ನಲ್ಲಿ 4 ಜನರಿದ್ರೆ 35 ಕೆಜಿ ಅಕ್ಕಿ ಜತೆ 170 ರೂ. ಹಣ ಲಭ್ಯವಾಗುತ್ತದೆ. ಆದರೆ, ಬಿಪಿಎಲ್ ಕಾರ್ಡ್ದಾರರಿಗೆ ಈ ನಿಯಮ ಅನ್ವಯಿಸಲ್ಲ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಅಂತೋದಯ ಕಾರ್ಡ ಹೊಂದಿದವರಿಗೆ ಈಗ 35 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಆದ್ದರಿಂದ ಮೂವರು ಅಥವಾ ಅದಕ್ಕಿಂತ ಕಡಿಮೆ ಜನರಿದ್ದರೆ ಅಕ್ಕಿಯ ಬದಲಾಗಿ ಹಣ ಕೊಡುವುದಿಲ್ಲ. ಜೊತೆಗೆ, ಅಂತ್ಯೋದಯ ಕಾರ್ಡ್ನಲ್ಲಿ 4 ಜನರಿದ್ರೆ 35 ಕೆಜಿ ಅಕ್ಕಿ ಜೊತೆಗೆ 170 ರೂ. ಹಣ ಕೊಡಲಾಗುತ್ತದೆ. 5 ಜನರಿದ್ದರೆ 35 ಕೆಜಿ ಅಕ್ಕಿ ಜೊತೆಗೆ 510 ರೂ., 6 ಜನರಿದ್ದರೆ 850 ರೂ. ಹಣವನ್ನು ಪಡಿತರ ಚೀಟಿಯ ಕುಟುಂಬದ ಯಜಮಾನರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಆದರೆ, ಬಿಪಿಎಲ್ ಕಾರ್ಡ್ದಾರರಿಗೆ ತಲಾ 5 ಕೆ.ಜಿ. ಅಕ್ಕಿಯ ಜೊತೆಗೆ ತಲಾ ಸದಸ್ಯರಿಗೂ 170 ರೂ. ಹಣವನ್ನು ಹಂಚಿಕೆ ಮಾಡಲಾಗುತ್ತದೆ.
ಬಿಪಿಎಲ್ ಕಾರ್ಡ್ ಹೊಂದಿದ್ದರೆ ಗಮನಿಸಿ: ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಹಕರು ಕಳೆದ ಮೂರು ತಿಂಗಳಿನಿಂದ ನೀವು ನ್ಯಾಯಬೆಲೆ ಅಂಗಡಿಯಿಂದ ಅಕ್ಕಿಯನ್ನು ಪಡೆದುಕೊಳ್ಳದಿದ್ದರೂ ಅಂತಃ ಕುಟುಂಬಗಳಿಗೆ ಅಕ್ಕಿಯ ಬದಲಾಗಿ ಹಣವನ್ನು ವಿತರಣೆ ಮಾಡುವುದಿಲ್ಲ.
ಜುಲೈ 10 ರಂದು ಹಣ ಹಂಚಿಕೆಗೆ ಚಾಲನೆ:
ಅನ್ನಭಾಗ್ಯದ ಉಳಿದ ಐದು ಕೆಜಿ ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜುಲೈ 10ರ ಸಂಜೆ 5 ಗಂಟೆಗೆ ಹಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಜುಲೈ 10ರಿಂದ ಮುಂದಿನ 15 ದಿನಗಳಲ್ಲಿ ಎಲ್ಲರಿಗೂ ಹಣ ಹಾಕುತ್ತೇವೆ. ಒಟ್ಟು 4 ಕೋಟಿ 41 ಲಕ್ಷ ಜನರಿಗೆ 800 ಕೋಟಿ ಹಣ ತಲುಪಲಿದೆ.
ಪ್ರತಿಯೊಬ್ಬರಿಗೆ ಐದು ಕೆಜಿ ಅಕ್ಕಿ & ಇನ್ನುಳಿದ 5kg ಗೆ ಹಣ
ಯೋಜನೆಯಡಿ, ಒಬ್ಬರು ಸದಸ್ಯರಿರುವ ಕುಟುಂಬಕ್ಕೆ 5 ಕೆಜಿ ಅಕ್ಕಿ, ಇಬ್ಬರು ಸದಸ್ಯರಿರುವ ಕುಟುಂಬಕ್ಕೆ 10 ಕೆಜಿ, ಐದಕ್ಕಿಂತ ಹೆಚ್ಚು ಜನರಿರುವ ಕುಟುಂಬಕ್ಕೆ 25 ಕೆಜಿ ಅಕ್ಕಿ ನಿಗದಿಪಡಿಸಲಾಗಿದೆ. ಒಂದು ಕೆಜಿ ಅಕ್ಕಿಗೆ 34 ರೂ.ಗಳಿಂತೆ ಈ ಕುಟುಂಬಗಳಿಗೆ ಕ್ರಮವಾಗಿ 170 ರೂ., 340 ರೂ. ಹಾಗೂ 850 ರೂ.ಗಳನ್ನು ನೀಡಲಾಗುತ್ತದೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,AAY ಹಾಗೂ BPL ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ
ಹಂತ 1: ಮೊದಲಿಗೆ ಅರ್ಜಿದಾರರು ಒಟ್ಟಾರೆ ಪೋರ್ಟಲ್ಗೆ ಹೋಗಬೇಕು. ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿದ ನಂತರ, ಮುಖಪುಟವು ನಿಮ್ಮ ಮುಂದೆ ತೆರೆಯುತ್ತದೆ. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ಅಥವಾ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಸಹಿತ ನೀವು ಕ್ಲಿಕ್ ಮಾಡಬಹುದು
https://mahitikanaja.karnataka.gov.in/FCS/MyAreaData?ServiceId=1043&Type=TABLE&DepartmentId=1010
ಹಂತ 2: ನಂತರ ನಿಮ್ಮ ಜಿಲ್ಲೆ, ತಾಲೂಕು,ಗ್ರಾಮಪಂಚಾಯತಿ,ಗ್ರಾಮ ಹಾಗೂ ಕಾರ್ಡ್ ಪ್ರಕಾರ(AAY/BPL) Select ಮಾಡಿ “ಸಲ್ಲಿಸಿ” ಮೇಲೆ ಕ್ಲಿಕ್ ಮಾಡಿ. ನಿಮ್ಮ ಕುಟುಂಬ ಮತ್ತು ನಿಮ್ಮ ಹೆಸರನ್ನು ನೀವು ನೋಡಬಹುದು.
ಆಧಾರ್ ಕಾರ್ಡ್ ನೊಂದಿಗೆ ಡಿಬಿಟಿ ಲಿಂಕ್ ಮಾಡಿ :
ಡಿಬಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದರ್ಥ. ಇದರಿಂದಾಗಿ ಮಹಿಳೆಯರ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಯೋಜನೆಯ ₹2,000 ಮತ್ತು ಅನ್ನಭಾಗ್ಯದ ₹170 ರೂಪಾಯಿ ಜಮಾ ಆಗುತ್ತದೆ. ಹಾಗಾಗಿ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡ್ ಡಿಬಿಟಿ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳಿ.
ನಿಮ್ಮ ಆಧಾರ್ ಕಾರ್ಡ್ ಹಾಗೂ ಡಿಬಿಟಿ ಲಿಂಕ್ ಆಗಿದೆ ಎಂಬುದನ್ನು ಹೇಗೆ ನೋಡುವುದು?:
ಹಂತ 1: ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. https://resident.uidai.gov.in/bank-mapper
ಹಂತ 2: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚರ್ ಅನ್ನು ಎಂಟರ್ ಮಾಡಿ.
ಹಂತ 3: ನಂತರ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರ ಅದು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ.
ಹಂತ 5: ಒಂದು ವೇಳೆ ಲಿಂಕ್ ಆಗದೆ ಇದ್ದಲ್ಲಿ ನೀವು ಹತ್ತಿರದ ಶಾಖೆಗೆ ತೆರಲಿ ಲಿಂಕ್ ಮಾಡಿಸಬೇಕು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ