ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalashmi Scheme)ಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗಿದೆ ಎಂದು ಇಷ್ಟು ದಿನಗಳ ವರೆಗೂ ನಡೆಸುತ್ತಿದ್ದ ಊಹಾಪೋಹಗಳಿಗೆ ಇಂದು ತೆರೆ ಬಿದ್ದಿದೆ. ಹೌದು, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಇದೇ ತಿಂಗಳು ಅಂದರೆ ಜುಲೈ 19 ರಿಂದ ಸಲ್ಲಿಸಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅವರು ತಿಳಿಸಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನೀವು ಈ ಲೇಖನವನ್ನು ಪೂರ್ಣವಾಗಿ ಓದುವುದರಿಂದ ತಿಳಿದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಿಂದ ಅರ್ಜಿಯನ್ನು ಸಲ್ಲಿಸಬಹುದು :
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭ ಮಾಡಲು ಇನ್ನೂ ಕಾಲ ಕೂಡಿ ಬರುತ್ತಿಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದರು, ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಜು.17 ರಂದು (ಸೋಮವಾರ) ಗೃಹಲಕ್ಷ್ಮಿ ಯೋಜನೆ ಆ್ಯಪ್ಗೆ ಚಾಲನೆ ನೀಡಲಾಗುವುದು. ಜು.19 ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಯೋಜನೆ ಉದ್ಘಾಟಿಸಲು ಕೇಂದ್ರ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ , ನಾಯಕರು ಒಪ್ಪಿಗೆ ಕೊಟ್ಟರೆ ಆಗಸ್ಟ್ 17 ರಂದೇ ಖಾತೆಗೆ ಹಣ ವರ್ಗಾವಣೆಯಾಗಲಿದೆ, ಇಲ್ಲದಿದ್ದರೇ ಆಗಸ್ಟ್ 19ಕ್ಕೆ ಹಣ ಜಮಾವಣೆಯಾಗಲಿದೆ ಎಂದು ಹೇಳಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ.ಹಣ ಸಿಗಲಿದೆ. ಅರ್ಜಿಗಳನ್ನು ಸಲ್ಲಿಸಲು ಯಾವುದೇ ರೀತಿಯ ಹಣವನ್ನು ಮನೆಯ ಯಜಮಾನಿಯರು ನೀಡಬೇಕಾಗಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ !
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಆಪ್ ತಯಾರಾಗಿದೆ ಈಗಾಗಲೇ ಅದನ್ನು ಟೆಸ್ಟ್ ಕೂಡ ಮಾಡಲಾಗಿದೆ ನಾಗರಿಕರು ಕೇವಲ ಎರಡರಿಂದ ಮೂರು ನಿಮಿಷದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು. ಆಪ್ ಮೂಲಕ ಫಲಾನುಭವಿಗಳು ಉಚಿತ ಅರ್ಜಿ ಸಲ್ಲಿಸಬಹುದು ಮತ್ತು ಮಧುವರ್ತಿಗಳ ಹಾವಳಿ ತಪ್ಪಿಸಲು ಆಪ್ ತಯಾರಿಸಿದ್ದೇವೆ ಎಂದು ಹೇಳಿದರು.
ಆಗಸ್ಟ್ 16 ರ ನಂತರದಿಂದ ಫಲನಾಭವಿಗಳ ಹಣ ಹಾಕುತ್ತೇವೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜು.19 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ತಲುಪುತ್ತದೆ.
ರೇಷನ್ ಕಾರ್ಡ್ ಇಲ್ಲದೆ ಇರುವವರು ಹೇಗೆ ಅರ್ಜಿ ಸಲ್ಲಿಸಬಹುದು?
ಈಗಾಗಲೇ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆ ದಿನಾಂಕ ಇರುವುದಿಲ್ಲ. ಹಾಗಾಗಿ ಇನ್ನೇನು ಕೆಲವು ದಿನಗಳಲ್ಲಿ ಮತ್ತೆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಿಸಬಹುದು. ಕೆಲವು ಮೂಲಗಳ ಪ್ರಕಾರ ಜುಲೈ 1ರಿಂದ ಅವಕಾಶವಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗುತ್ತಿದ್ದಂತೆ ನೀವು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಪಡೆದುಕೊಂಡು ತಕ್ಷಣವೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಹೌದು ಎಪಿಎಲ್ ಕಾರ್ಡಿಗೆ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು ಇದೊಂದು ಆಧಾರ್ ಕಾರ್ಡ್ ನೊಂದಿಗೆ ಗುರುತಿನ ಚೀಟಿಯಾಗಿದೆ. ಹಾಗಾಗಿ ರೇಷನ್ ಕಾರ್ಡ್ ಇಲ್ಲದೇ ಇರುವವರು ಚಿಂತೆ ಮಾಡಬೇಕಾಗಿಲ್ಲ. ಸ್ವಲ್ಪ ದಿನ ಕಾಯ್ದು ಹೊಸ ರೇಷನ್ ಕಾರ್ಡ್ ಪಡೆದುಕೊಂಡು ಗೃಹ ಲಕ್ಷ್ಮೀ ಯೋಜನೆಗೆ ಸಲ್ಲಿಸಿ ರೂ.2000 ಹಣವನ್ನು ಪಡೆದುಕೊಳ್ಳಬಹುದು
Offline ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ನಿಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ನಮೂನೆ ಸಿಗುತ್ತದೆ. ಈ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಕೆಳಗೆ ಕೊಡಲಾದ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಬೇಕು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು.
ದಾಖಲಾತಿಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಫೋಟೋ
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ
- ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
- GST ಪಾವತಿ ಮಾಡುವ ಕುಟುಂಬಗಳು
- APL, BPL ಕಾರ್ಡ್ ಹೊಂದಿರದ ಕುಟುಂಬಗಳು
- ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
- ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ
ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ
ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ