Gruhalakshmi – ಈ ಹೊಸ ಮೊಬೈಲ್ ನಂಬರಿನಿಂದ ಮೆಸೇಜ್ ಮಾಡಿದ್ರೆ ಮಾತ್ರ ನಿಮ್ಮ ‘ಗೃಹಲಕ್ಷ್ಮಿ’ ಗೆ ಅರ್ಜಿ ಓಕೆ ಆಗೋದು, ಇಲ್ಲಿದೆ ಕಂಪ್ಲೀಟ್ ಮಾಹಿತಿ

Picsart 23 07 22 07 34 28 091

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi Scheme)ಯ ಅರ್ಜಿ ಸಲ್ಲಿಕೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು  ತಿಳಿಸಿಕೊಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮೊದಲ ಪ್ರಕ್ರಿಯೆ ಎಸ್ಎಮ್ಎಸ್(SMS) ಮಾಡುವುದರ ಮೂಲಕ ಶುರುವಾಗುತ್ತದೆ ಎಂದು ಈಗಾಗಲೇ ಹಲವರಿಗೆ ತಿಳಿದಿದೆ. ಆದರೆ ನೀವೇನಾದರೂ ಹೇಗೆ ಮೆಸೇಜ್ ಮಾಡುವುದು?, ಏನನ್ನು ಮೆಸೇಜ್ ಮಾಡಬೇಕು ಎಂಬ ಗೊಂದಲದಲ್ಲಿದ್ದರೆ ನಿಮಗೆ ಈ ಲೇಖನ ಸಂಪೂರ್ಣವಾಗಿ ಸಹಾಯಮಾಡುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಮೆಸೇಜ್ ಮಾಡುವ ಪ್ರತಿ ಹಂತವನ್ನು ಹಾಗೂ ಯಾವ ದಾಖಲೆಗಳು ಬೇಕಾಗುತ್ತದೆ ಮತ್ತು ಎಲ್ಲಿ ಅರ್ಜಿಗಳನ್ನು ಸಲ್ಲಿಸಲಾಗುತ್ತದೆ ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಯಜಮಾನಿಯರು ಮೆಸೇಜ್ ಮಾಡುವುದೊಂದೇ ಬಾಕಿ :

ಅರ್ಜಿಯನ್ನು ಸಲ್ಲಿಸುವ ವಿಷಯದಲ್ಲಿ ಸ್ವಲ್ಪ ಬದಲಾವಣೆ ಕೂಡ ಆಗಿದೆ. ಅದೇನೆಂದರೆ ಮೊದಲು ತಿಳಿಸಿದಂತೆ ಗೃಹಲಕ್ಷ್ಮಿಯರು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಸೇರಿದಂತೆ ಸರ್ಕಾರಿ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸ್ವೀಕರಿಸಲಾಗುತ್ತೆ. ಪತಿ ತೆರಿಗೆದಾರರಾಗಿದ್ದರೆ ಅಂಥವರ ಅಕೌಂಟ್‌ಗೆ ಹಣ ಬರುವುದಿಲ್ಲ. ಇನ್ನು ಆಧಾರ್‌ಗೆ ಲಿಂಕ್‌ ಆಗಿರೋ ಅಕೌಂಟ್‌ ಬಿಟ್ಟು, ನಿಮ್ಮದೆ ಬೇರೆ ಅಕೌಂಟ್‌ಗೆ ಹಣ ಬೇಕಾದ್ರೆ ಪಾಸ್‌ಬುಕ್‌ನ ಜೆರಾಕ್ಸ್‌ ಪ್ರತಿ ತೆಗೆದುಕೊಂಡು ಹೋಗಬೇಕು. ಹಾಗಾಗಿ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ, ತಪ್ಪದೇ ಓದಿ.

whatss

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲನೆಯದಾಗಿ ರೇಷನ್ ಕಾರ್ಡಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಮೊಬೈಲ್ ನಂಬರಿಂದ ನೀವು ಮೆಸೇಜನ್ನು ಮಾಡಬೇಕು.

ಹಂತ 2: ನಿಮ್ಮ ಮೆಸೇಜ್ ಆಪನ್ನು ಓಪನ್ ಮಾಡಿ, ನಂತರ ಸ್ಟಾರ್ಟ್ ಕನ್ವರ್ಸೇಷನ್(start conversation) ಅಥವಾ ಪ್ಲಸ್ ಮಾರ್ಕ್ ಮೇಲೆ ಕ್ಲಿಕ್ ಮಾಡಿ.

To ಎಂಬ ಬಾಕ್ಸಿನಲ್ಲಿ ಸರ್ಕಾರದ ಮೊಬೈಲ್ ಸಂಖ್ಯೆಯಾದ 8147500500 ಅಥವಾ 8277000500 ಅನ್ನು ಹಾಕಿ. ನಂತರ ಟೆಕ್ಸ್ಟ್ ಮೆಸೇಜ್(text message) ನಲ್ಲಿ ನಿಮ್ಮ ಪಡಿತರ ಚೀಟಿಯ(Ration card) 12 ಡಿಜಿಟ್ ಗಳ ಸಂಖ್ಯೆಯನ್ನು ನೊಂದಣಿ ಮಾಡಿ ಮತ್ತು ಮೆಸೇಜನ್ನು ಸೆಂಡ್ ಮಾಡಿ.

WhatsApp Image 2023 07 20 at 8.58.28 AM

ಹಂತ 4: ಎಸ್ಎಂಎಸ್ ಮಾಡಿದ ಕೆಲವೇ ನಿಮಿಷಗಳಲ್ಲಿ ನಿಮಗೆ ಸರ್ಕಾರದಿಂದ ಒಂದು ಮೆಸೇಜ್ ಬರುತ್ತದೆ ಅದರಲ್ಲಿ, ಯಾವ ಸ್ಥಳದಲ್ಲಿ ಯಾವ ದಿನಾಂಕಕ್ಕೆ ಎಷ್ಟು ಗಂಟೆಗೆ ತೆರಳಿ ಅರ್ಜಿಯನ್ನು ಸಲ್ಲಿಸಬೇಕು ಎಂಬುವ ಮಾಹಿತಿ ಇರುತ್ತದೆ.

WhatsApp Image 2023 07 20 at 8.35.34 AM

ಹಂತ 6: ನಂತರ ತಮಗೆ ತಿಳಿಸಲಾದ ಸರ್ಕಾರಿ ಕೇಂದ್ರಗಳಲ್ಲಿ ಅರ್ಜಿಯನ್ನು ಹಾಕಲಾಗುತ್ತದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

 

app download

 

ಯಾವ ದಾಖಲೆಗಳನ್ನು ಸರ್ಕಾರಿ ಕೇಂದ್ರಗಳಿಗೆ ತೆಗೆದುಕೊಂಡು ಹೋಗಿ ಅರ್ಜಿಯನ್ನು ಸಲ್ಲಿಸಬೇಕು :

ಮನೆ ಯಜಮಾನಿಯಾ ಆಧಾರ್ ಕಾರ್ಡ್
ಪಡಿತರ ಚೀಟಿ
ಮೊಬೈಲ್
ಬ್ಯಾಂಕ್ ಪಾಸ್ ಬುಕ್

ಎಲ್ಲಿ ಅರ್ಜಿಗಳನ್ನು ಸಲ್ಲಿಸಲಾಗುತ್ತದೆ :

ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ನೊಂದಣಿಯನ್ನು ಮಾಡಿಕೊಡಲಾಗುತ್ತದೆ. ನೀವು ಅರ್ಜಿಗಳನ್ನು ಸಲ್ಲಿಸಲು ಯಾವುದೇ ರೀತಿಯ ಹಣವನ್ನು ಪಾವತಿಸುವ ಅಗತ್ಯವಿರುವುದಿಲ್ಲ. ಅಧಿಕೃತ ಪ್ರಜಾ ಪ್ರತಿನಿಧಿ ಸ್ವಯಂಸೇವಕರು ಕೂಡ ನಿಮ್ಮ ಮನೆ ಬಾಗಿಲಿಗೆ ಬಂದು ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಿಕೊಡುತ್ತಾರೆ.

Picsart 23 07 16 14 24 41 584 transformed 1

ಗೃಹಲಕ್ಷ್ಮಿ ಯೋಜನೆ ನೊಂದಣಿ ವೇಳಾಪಟ್ಟಿಯನ್ನು ನೋಡುವ ವಿಧಾನ :

ಹಂತ 1: ಮೊದಲಿಗೆ ಗೃಹಲಕ್ಷ್ಮಿ ಯೋಜನೆಯ ಸೇವಾ ಸಿಂಧುವಿನ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ. 

https://sevasindhugs1.karnataka.gov.in/gl-stat-sns/

rr1

ಹಂತ 2: ನಂತರ ನಿಮ್ಮ ಪಡಿತರ ಚೀಟಿ(Ration card)ಯ 12 ಸಂಖ್ಯೆಗಳನ್ನು ನಮೂದಿಸಬೇಕು. ಕ್ಲಿಯರ್ ಮಾಡಲು ಹಳದಿ ಕಲರ್ ಲೈನ್ ಅನ್ನು ಹಸಿರು ಲೈನಿನ್ ಮದ್ಯ ಭಾಗಕ್ಕೆ ತಂದು ನಿಲ್ಲಿಸಬೇಕು ನಂತರ Captcha ಕ್ಲಿಯರ್ ಆಗುತ್ತೆ.  ನಂತರ fetch RC details ಮೇಲೆ ಕ್ಲಿಕ್ ಮಾಡಿ

rr2

ಹಂತ 4: ನಂತರ ಪುಟದಲ್ಲಿ, ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯನ್ನು ಮಾಡಿಕೊಳ್ಳಲು ಸ್ಥಳ, ದಿನಾಂಕ ಹಾಗೂ ಸಮಯವನ್ನು ನೀಡಲಾಗಿರುತ್ತದೆ.

rr3

ಈ ಸ್ಥಳ, ದಿನಾಂಕ ಹಾಗೂ ಸಮಯವನ್ನು ನೋಡಿಕೊಂಡು, ನೀವು ಬೇಕಾದ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ತಿಳಿಸಲಾದ ಸರ್ಕಾರಿ ಕೇಂದ್ರಕ್ಕೆ ತೆರಲಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೆ ಆಗಸ್ಟ್ ತಿಂಗಳಿನಲ್ಲಿ ನಿಮ್ಮ ಬ್ಯಾಂಕ್ ಅಕೌಂಟ್ ಗೆ ಕೂಡ ಹಣವು ಜಮಾ ಆಗಲಿದೆ.  ಹೀಗೆ ನೀವು ಮೇಲಿನ ಹಂತಗಳನ್ನು ಪರಿಶೀಲಿಸಿಕೊಂಡು ಗೃಹಲಕ್ಷ್ಮಿ ಯೋಜನೆ ನೋಂದಣಿಯ ವೇಳಾಪಟ್ಟಿಯ ವಿವರವನ್ನು ತಿಳಿದುಕೊಳ್ಳಬಹುದಾಗಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

 

app download

ಇದು ಒಂದು ಮುಖ್ಯವಾದ ಮಾಹಿತಿಯಾಗಿದ್ದು ಇದನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದೆ. ಆದ್ದರಿಂದ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಅನ್ನ ಭಾಗ್ಯದ ಹಣ ಬ್ಯಾಂಕ್ ಖಾತೆಗೆ ಬಂತಾ ಚೆಕ್ ಮಾಡಿ..! ಇಲ್ಲಿದೆ ಡೈರೆಕ್ಟ್ ಲಿಂಕ್ | Anna bhagya Payment DBT status

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!