Gruhalakshmi : ‘ರೇಷನ್ ಕಾರ್ಡ್’ ಇಲ್ಲದವರು ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Image 2023 08 14 at 9.39.33 AM 1

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ರೇಷನ್ ಕಾರ್ಡ್(Ration card) ಇಲ್ಲದವರು ಏನು ಮಾಡಬೇಕು?, ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ರೇಷನ್ ಕಾರ್ಡ್ ಇಲ್ಲವೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಆಗುವುದಿಲ್ಲ. ಹೀಗಾಗಿ ರೇಷನ್ ಕಾರ್ಡ್ ಇಲ್ಲದ ಅನೇಕ ಜನರಿಗೆ ಇದೊಂದು ಬೇಸರದ ಸಂಗತಿಯಾಗಿ ಉಳಿದಿದೆ. ಇದಕ್ಕಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿ ಅಂದರೆ ರೇಷನ್ ಕಾರ್ಡ್ ಇಲ್ಲದವರು ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಒಂದನ್ನು ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರೇಷನ್ ಕಾರ್ಡ್ ಇಲ್ಲದವರಿಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಅವಕಾಶ?:

ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಕುರಿತು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರೇಷನ್ ಕಾರ್ಡ್ ಇಲ್ಲದಿದ್ದರೆ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಆಗುತ್ತಿಲ್ಲ ಎಂದು ಬೇಜಾರಗೊಳ್ಳುವ ಅವಶ್ಯಕತೆ ಇಲ್ಲ ಏಕೆಂದರೆ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ. ಇದು ಒಂದು ನಿರಂತರ ಪ್ರಕ್ರಿಯೆಯಾಗಿದ್ದು, ನಿಮ್ಮ ರೇಷನ್ ಕಾರ್ಡಿನ ಸಮಸ್ಯೆಗಳು ಬಗೆಹರಿದ ನಂತರ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್ ಇಲ್ಲದವರು ಹೊಸದಾಗಿ ರೇಷನ್ ಕಾರ್ಡನ್ನು ಮಾಡಿಸಿಕೊಂಡು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

whatss

ಈಗಾಗಲೇ ಸರ್ಕಾರವು ಪಡಿತರ ಚೀಟಿಯ(Ration card) ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ನಿಮ್ಮ ರೇಷನ್ ಕಾರ್ಡಿನಲ್ಲಿ ಹೆಸರು ವಿಳಾಸ ಅಥವಾ ಇನ್ನಿತರ ಯಾವುದೇ ಸಮಸ್ಯೆಗಳು ಇದ್ದರೆ ಅವುಗಳನ್ನು ಕೂಡಲೇ ತಿದ್ದುಪಡಿ ಮಾಡಿಸಿಕೊಳ್ಳಬಹುದು. ಅಷ್ಟೇ ಅಲ್ಲದೆ ಮನೆಯಲ್ಲಿ ಯಾರಾದರೂ ಹೆಸರು ಬಿಟ್ಟಿದ್ದರೆ ಅವುಗಳನ್ನು ಕೂಡ ಸೇರ್ಪಡೆ ಮಾಡಿಸಬಹುದು ಅಥವಾ ಮರಣ ಹೊಂದಿದವರ ಹೆಸರನ್ನು ಕೂಡ ತೆಗೆಸಿ ಹಾಕಲು ಅವಕಾಶವಿದೆ. ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಬೇಕೆಂದು ಕೋರಿ ಅರ್ಜಿಯನ್ನು ಸಲ್ಲಿಸಿದವರಿಗೆ, ಸರ್ಕಾರವು ಆದಷ್ಟು ಬೇಗ ರೇಷನ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಲಿದೆ ಎಂದು ತಿಳಿಸಿದ್ದಾರೆ.

ಹಾಗಾಗಿ ಯಾರ್ಯಾರ ಬಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ರೇಷನ್ ಕಾರ್ಡ್ ಇಲ್ಲ, ಅಥವಾ ಯಾರ ರೇಷನ್ ಕಾರ್ಡಲ್ಲಿ ತಪ್ಪುಗಳಿದ್ದು ಅವುಗಳನ್ನು ಸರಿಪಡಿಸಿಲ್ಲ ಅವರೆಲ್ಲರೂ ಕೂಡ ಆದಷ್ಟು ಬೇಗ ತಿದ್ದುಪಡಿಯನ್ನು ಮಾಡಿಸಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಹಾಕಿ 2000 ರೂಗಳ ಫಲಾನುಭವಿಗಳಾಗಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಮುಖ್ಯವಾಗಿ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

2 thoughts on “Gruhalakshmi : ‘ರೇಷನ್ ಕಾರ್ಡ್’ ಇಲ್ಲದವರು ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

Leave a Reply

Your email address will not be published. Required fields are marked *

error: Content is protected !!