ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಡಿತರ ಚೀಟಿಗಳನ್ನು ರದ್ದು ಮಾಡುವ ಪ್ರಕ್ರಿಯೆ ಆರಂಭವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ 8ಲಕ್ಷ BPL ರೇಷನ್ ಕಾರ್ಡ್ ಗಳು ರದ್ದು ಆಗಿವೆ! ಪಡಿತರ ಚೀಟಿಗಳು ರದ್ದು ಆಗುತ್ತಿರುವುದಕ್ಕೆ ಕಾರಣವೇನು? ಎಂಬುವುದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಮತ್ತು ನೀವು white board ಕಾರ್ ಹೊಂದಿರುವವರಾದರೆ, ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ. ಮತ್ತು ನೀವು ಆ ರೇಷನ್ ಕಾರ್ಡ್ ರದ್ದಾಗಿರುವ(Ration card cancellation) ಲಿಸ್ಟ್ ನ ಲ್ಲಿ ಇದ್ದೀರಾ ಇಲ್ಲವೋ ಎಂದು ಪರಿಶೀಲಿಸಬೇಕೆಂದರೆ ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪಡಿತರ ಚೀಟಿಯ ರದ್ದು ಪ್ರಾರಂಭ :
ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ ಈ ರೀತಿಯ ನಮ್ಮ ಈ ಸರ್ಕಾರದ ಯೋಜನೆಯನ್ನು ಪಡೆದುಕೊಳ್ಳುವದರಲ್ಲಿ ನಿರತರಾಗಿರುವ ನಮ್ಮ ಜನ ಸಾಮಾನ್ಯರಿಗೆ ಒಂದು ಶಾಕಿಂಗ್ ಸುದ್ದಿ!!!
ಅದೇನೆಂದರೆ, ತುಂಬಾ ಜನರ ರೇಷನ್ ಕಾರ್ಡ್ ರದ್ದಾಗಿವೆ ಹಾಗೂ ಇನ್ನೂ ರದ್ದಾಗುವ ಸಾದ್ಯತೆ ಇವೆ. ಇದರ ಜೊತೆಗೆ ದಂಡ ಕೂಡ ಬೀಳುವ ಸಾಧ್ಯತೆ ಇದೆ. ಯಾಕೆ ಹೀಗೆ ಈ ರೀತಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ? ಯಾವೆಲ್ಲ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಈ ಲೇಖನದಲ್ಲಿ ನಿಮಗೆ ತಿಳಿಸಿ ಕೊಡುತ್ತೇವೆ.
ಹೌದು, ಐಷಾರಾಮಿ ಕಾರು ಇದ್ದವರು, ಸರಕಾರಿ ಕೆಲಸ ಮಾಡುವವರು, 3 ಎಕರೆಗಿಂತ ಜಾಸ್ತಿ ಕೃಷಿ ಜಮೀನು
ಇದ್ದವರು, ಹೆಚ್ಚಿಗೆ ಟ್ಯಾಕ್ಸ್ ಕಟ್ಟುವವರು ಹೀಗೆ ಅನೇಕ ಸೌಲಭ್ಯ ಇದ್ದವರು ಕೂಡಾ ನಕಲಿ BPL ಕಾರ್ಡ್ ಅನ್ನು ಹೊಂದಿದ್ದಾರೆ. ಆಹಾರ ಇಲಾಖೆಯು ಇಂತಹ ನಕಲಿ BPL ಕಾರ್ಡನ್ನು ಹೊಂದಿದವರ ಪತ್ತೆ ಹಚ್ಚಿ ಅವರ ration card ರದ್ದುಗೊಳಿಸುತ್ತಿದ್ದಾರೆ, ಮತ್ತು ದಂಡ ಕೂಡ ವಿಧಿಸಲಾಗುತ್ತಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಸುಮಾರು 4.6 ಲಕ್ಷ ನಕಲಿ ಕಾರ್ಡ್ ಇರುವವರಿಗೆ ದಂಡ ವಿಧಿಸಿದೆ. ಮತ್ತು ಸಾರಿಗೆ ಇಲಾಖೆಯ ಸಹಾಯದಿಂದ 12,583 ಜನರ BPL ಕಾರ್ಡ್ ಇದ್ದವರ ಐಷಾರಾಮಿ ಕಾರ್ ಮತ್ತು white board ಕಾರ್ ಗಳನ್ನು ಹೊಂದಿದ್ದಾರೆ ಎಂದು ಪತ್ತೆ ಹಚ್ಚಿದೆ.
ಇದರ ಜೊತೆಗೆ ಒಟ್ಟಿನಲ್ಲಿ white board ಸ್ವಂತ ಕಾರ್ ಹೊಂದಿರುವವರ ರೇಷನ್ ಕಾರ್ಡ್ ಸ್ಥಗಿತ ಗೊಳಿಸಬೇಕೆಂದು ಮತ್ತು ಇಂತಹ ದುರ್ಬಳಕೆಯನ್ನು ಬಲಿಸಿಕೊಂಡು ಅಕ್ಕಿ ಪಡೆಯುತ್ತಿರವರನ್ನು ಹುಡುಕಿ ಉಚಿತ ಅಕ್ಕಿ ಪಡೆದುಕೊಳ್ಳುತಿರುವದರಿಂದ ಅವರನ್ನು ತಗೆಯಲು ನಿರ್ಧಾರ ಮಾಡಿದೆ. ಇದಕ್ಕಾಗಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಿ ಇದರ ಬಗ್ಗೆ ಕ್ರಮ ಕೈಗೊಳ್ಳುವುದರ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ K.H.Muniyappa (ಕೆ. ಎಚ್ ಮುನಿಯಪ್ಪ) ಅವರುಬ ಹೇಳಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ನಮ್ಮ Ration card ಸ್ಥಿತಿಯನ್ನು ಚೆಕ್ ಮಾಡಲು ಕೆಳಗಿನ ಸಲಹೆಗಳನ್ನು ಅನುಸರಿಸಿ:
ಹಂತ 1: ಮೊದಲಿಗೆ,ಕರ್ನಾಟಕ ಸರ್ಕಾರದ “ಮಾಹಿತಿ ಕಣಜ” website ಗೆ ಹೋಗಿ.
https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010
ಹಂತ 2: My Ration card details ವಿವರಗಳ ಪುಟ ತೆರೆದುಕೊಳ್ಳುತ್ತದೆ.
ಹಂತ 3: ನಂತರ ನಿಮ್ಮ ಜಿಲ್ಲೆ ಮತ್ತು ನಿಮ್ಮ ration card ಅಲ್ಲಿ ಇರುವ 12 ಸಂಖ್ಯೆಯ ನಂಬರ್ ಅನ್ನು ನಮೂದಿಸಿ. ನಂತರ ಸಲ್ಲಿಸು/submit ಇದಲ್ಲಿ ಕ್ಲಿಕ್ ಮಾಡಿ. ಅದು ಆದ ಬಳಿಕ my Ration shop details/ನನ್ನ ಪಡಿತರ ಅಂಗಡಿ ವಿವರದ ಪುಟ ತೆರೆಯುತ್ತದೆ. ನಂತರ card status/ಕಾರ್ಡ್ ಸ್ಥಿತಿ ಸಕ್ರಿಯ/active ಎಂದು ತೋರಿಸಿದರೆ ನಮ್ಮ Ration card ಚಾಲ್ತಿ ಇದೆ ಎಂದು ತಿಳಿಯಬಹುದಾಗಿದೆ.
ನಮ್ಮ ರಾಜ್ಯ ಸರ್ಕಾರವು ನಮ್ಮ ration card ಅಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದು ಪಡೆ ಮಾಡುವದಕ್ಕೆ ಅನುಮೋದನೆ ನೀಡಿದೆ. ಮುಂದಿನ ಆದೇಶ ನೀಡುವವರೆಗೂ ಯಾವುದೇ ಹೊಸ Ration card ಮಂಜೂರು ಮಾಡದಂತೆ ನಿರ್ಧಾರ ಮಾಡಿದೆ.
ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ