ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬರುವ ದಿನಾಂಕದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಗಸ್ಟ್ 30ಕ್ಕೆ ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ಚಾಲನೆ ನೀಡಲಾಗುತ್ತದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿಗಿಂತ ಹೆಚ್ಚು ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇದರ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯ ಚಾಲನೆಯ ದಿನಾಂಕ ಮತ್ತೆ ಮುಂದೂಡಿಕೆ :
ನಿಮಗೆಲ್ಲರಿಗೂ ತಿಳಿದಿರುವಂತೆ ಈಗಾಗಲೇ ಆಗಸ್ಟ್ 27ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವುದಾಗಿ ಸರ್ಕಾರವು ನಿರ್ಧಾರವನ್ನು ಮಾಡಿತ್ತು, ಆದರೆ ಆ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ವಿಶೇಷ ಎಂದರೆ ದಿನಾಂಕದ ಜೊತೆಗೆ ಸಮಾರಂಭದ ಸ್ಥಳವನ್ನು ಕೂಡ ಬದಲಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಖಾತೆಗೆ ಹಾಕಲು, ಇದೇ ತಿಂಗಳ ಅಂತ್ಯದಲ್ಲಿ ಅಂದರೆ ಆಗಸ್ಟ್ 30 ರಂದು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯಲ್ಲಿ ಹಮ್ಮಿಕೊಳ್ಳಬೇಕಾಗಿದ್ದ ಸಮಾರಂಭವನ್ನು ಈಗ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ತವರು ಊರಿನಲ್ಲಿ ಹಮ್ಮಿಕೊಳ್ಳಲಾಗುತ್ತದೆ ಎಂದು ಸುದ್ದಿಗಳು ತಿಳಿದು ಬಂದಿದೆ. ಈ ಗೃಹಲಕ್ಷ್ಮಿ ಯೋಜನೆಯ ಚಾಲನೆಯ ಸಮಾರಂಭವು ನೆರವೇರಿದ ನಂತರ ಎಲ್ಲಾ ಮಹಿಳೆಯರ ಖಾತೆಗೆ 2000 ರೂಗಳು ಜಮಾ ಆಗುತ್ತದೆ ಎಂದು ಕರ್ನಾಟಕ ಸರ್ಕಾರವು( Karnataka Government ) ಮಾಹಿತಿಯನ್ನು ನೀಡಿದೆ.
ಗೃಹಲಕ್ಷ್ಮಿ ಯೋಜನೆಯ(gruhalakshmi scheme) ಅರ್ಜಿ ಹಾಕಲು ಮಹಿಳೆಯರಿಗೆ ಗುಡ್ ನ್ಯೂಸ್ :
ಅದೇಷ್ಟೋ ಮಹಿಳೆಯರಿಗೆ ತಮ್ಮ ರೇಷನ್ ಕಾರ್ಡಿನಲ್ಲಿ ಕೆಲವು ದೋಷಗಳಿರುವ ಕಾರಣದಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಆಗುತ್ತಿಲ್ಲ. ಆದರೆ ಸರ್ಕಾರವು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಾಗಲೆಂದು ರೇಷನ್ ಕಾರ್ಡ್ ತಿದ್ದುಪಡಿಯನ್ನು ಇದೇ ಆಗಸ್ಟ್ 18 ರಂದು ಪ್ರಾರಂಭ ಮಾಡಿದೆ. ಹಾಗಾಗಿ ಮಹಿಳೆಯರು ತಮ್ಮ ರೇಷನ್ ಕಾರ್ಡಿನಲ್ಲಿ ಮನೆಯ ಯಜಮಾನಿಯಾಗಬೇಕೆಂದಿದ್ದರೆ ಕೂಡಲೇ ಅದನ್ನು ತಿದ್ದುಪಡಿ ಮಾಡಿಸಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ 2000 ಹಣದ ಫಲಾನುಭವಿಗಳಾಗಬಹುದಾಗಿದೆ. ನಿಮ್ಮ ರೇಷನ್ ಕಾರ್ಡಿನಲ್ಲಿ ಪುರುಷರೇನಾದರೂ ಮನೆಯ ಯಜಮಾನರಾಗಿದ್ದರೆ ಅದನ್ನು ಬದಲಾಯಿಸಿ ಮಹಿಳೆಯರನ್ನು ಮನೆ ಯಜಮಾನಿಯರನ್ನಾಗಿ ಮಾಡಿಸುವ ಅವಕಾಶ ಈಗ ಬಂದಿದೆ. ಅಷ್ಟೇ ಅಲ್ಲದೆ ಮನೆಯ ಯಜಮಾನಿಯು ಅತ್ತೆ ಆಗಿದ್ದು, ಅವರು ಮರಣವನ್ನು ಹೊಂದಿದರೆ ಅವರನ್ನು ಕೂಡ ರೇಷನ್ ಕಾರ್ಡಿನಿಂದ ತೆಗೆಸಿ ಸೊಸೆಯನ್ನು ಮನೆಯ ಯಜಮಾನಿಯನ್ನಾಗಿ ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಈ ಖಾತೆಗೆ ಗೃಹಲಕ್ಷ್ಮಿ ಯೋಜನೆಯ( Gruha Lakshmi Scheme ) ಹಣ ಬರುತ್ತದೆ :
ಹಲವಾರು ಜನರಿಗೆ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹಣವು ಬಂದಿದೆ. ಬಿಪಿಎಲ್ ಕಾರ್ಡ್ ಹೊಂದಿದ ಮನೆಯ ಯಜಮಾನಿಯಾ ಖಾತೆಗೆ ಯೋಜನೆಯ ಹಣ ಬಂದಿರುತ್ತದೆ ಆದ್ದರಿಂದ ಅದೇ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಕೂಡ ಬರುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಪ್ರಕಟಣೆಯ ಪ್ರಕಾರ ರೇಷನ್ ಕಾರ್ಡಿನಲ್ಲಿ ಇರುವ ಮನೆಯ ಯಜಮಾನಿಯ ಖಾತೆಗೆ ಹಣ ಜಮಾ ಆಗುತ್ತದೆ. ನಿಮ್ಮ ಆಧಾರ್ ಕಾರ್ಡಿಗೆ ಮ್ಯಾಪಿಂಗ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಒಂದು ವೇಳೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ಬೇರೆ ಖಾತೆಯ ಅಕೌಂಟ್ ನಂಬರ್ ಅನ್ನು ಕೊಟ್ಟಿದ್ದರೆ ಆ ಬ್ಯಾಂಕ್ ಖಾತೆಗೆ ಹಣ ಜಮಾವಾಗಲಿದೆ. ನಿಮಗೇನಾದರೂ ಇನ್ನೂ ಇದರ ಬಗ್ಗೆ ಸಂಶಯವಿದ್ದಲ್ಲಿ, ಯಾವ ಖಾತೆಗೆ ಹಣ ಜಮಾ ಆಗುತ್ತದೆ ಎಂಬುವುದನ್ನು ನೀವೇ ಮೊಬೈಲಿನಲ್ಲಿ ನೋಡಿಕೊಳ್ಳಬಹುದು. ಅದಕ್ಕಾಗಿ ಕೆಳಗಿನ ಹಂತಗಳನ್ನು ಅನುಸರಿಸಿ.
ಗೃಹಲಕ್ಷ್ಮಿ ಯೋಜನೆಯ ಚಾಲನೆಯ ಬಗ್ಗೆ ಹಾಗೂ ಈ ಯೋಜನೆಯ ಕುರಿತಾದ ಮುಖ್ಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಮುಖ್ಯವಾಗಿ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ