ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಹೊಸ ರೂಲ್ಸ್ ಜಾರಿ ಮಾಡಿರುವ ಬಗ್ಗೆ ಮಾಹಿತಿ ಕೊಡಲಾಗುತ್ತದೆ. ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ ಈ ರೀತಿಯ ಸರ್ಕಾರದ ಯೋಜನೆಯನ್ನು ಪಡೆದುಕೊಳ್ಳುವದರಲ್ಲಿ ನಿರತರಾಗಿರುವ ನಮ್ಮ ಜನ ಸಾಮಾನ್ಯರಿಗೆ ಒಂದು ಶಾಕಿಂಗ್ ಸುದ್ದಿ!!! ಅದೇನೆಂದರೆ, ತುಂಬಾ ಜನರ ರೇಷನ್ ಕಾರ್ಡ್ ರದ್ದಾಗಿವೆ ಹಾಗೂ ಇನ್ನೂ ರದ್ದಾಗುವ ಸಾದ್ಯತೆ ಇವೆ. ಇದರ ಜೊತೆಗೆ ದಂಡ ಕೂಡ ಬೀಳುವ ಸಾಧ್ಯತೆ ಇದೆ. ಯಾಕೆ ಹೀಗೆ ಈ ರೀತಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ? ಯಾವೆಲ್ಲ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಈ ಲೇಖನದಲ್ಲಿ ನಿಮಗೆ ತಿಳಿಸಿ ಕೊಡುತ್ತೇವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಶಾಕ್ ಸರ್ಕಾರ ಕೊಟ್ಟ
ಹೆಚ್ಚಿನ ಜಮೀನು ಮತ್ತು ಐಷಾರಾಮಿ ಕಾರುಗಳನ್ನ ಹೊಂದಿದ ಅನೇಕ ಜನರು ಬಡತನ ರೇಖೆಗಿಂತ ಕೆಳಗಿಲ್ಲದಿದ್ದರು ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿದ್ದಾರೆ. ಇಂಥವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಮುಂದಾಗಿದೆ. ಹೌದು, ಕರ್ನಾಟಕದಲ್ಲಿ ಮನೆ ಮನೆಗೆ ಹೋಗಿ ಸರ್ವೆ ನಡೆಸುವ ಮೂಲಕ ಆರ್ಥಿಕವಾಗಿ ಸಬಲರಾಗಿದ್ದರು ಬಿಪಿಎಲ್ ಕಾರ್ಡ್ ಸೇವೆಗಳನ್ನು ಪಡೆಯುತ್ತಿರುವವರನ್ನು ಗುರುತಿಸುವ ಕಾರ್ಯಚರಣೆ ಮಾಡಲು ಮುಂದಾಗಿದ್ದಾರೆ. ಸರ್ಕಾರದ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ಗಳನ್ನು ಬಂದ್ ಮಾಡಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 4.36 ಕೋಟಿ ಜನರಿಗೆ ಅನುಕೂಲವಾಗಿದೆ. ಆದರೆ, ಬಿಪಿಎಲ್ ಗೆ ಅರ್ಹರಲ್ಲದ ಫಲಾನುಭವಿಗಳು ಉಚಿತ ಆಹಾರ ಧಾನ್ಯ ಪಡೆಯುತ್ತಿದ್ದಾರೆ ಎಂಬ ದೂರಿನ ಅನ್ವಯ ಬಿಪಿಎಲ್ ಕಾರ್ಡಿಗೆ ಅರ್ಹರಲ್ಲದ ಫಲಾನುಭವಿಗಳ ಸೂಕ್ತ ದಾಖಲೆಗಳನ್ನು ಪಡೆದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬರೋಬರಿ 35 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದೆ
ಕಳೆದ ವರ್ಷ 2022 ರಲ್ಲಿ ರಾಜ್ಯದಲ್ಲಿ ಬರೋಬ್ಬರಿ 4 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದು ಮಾಡಿ ಸುಮಾರು 13 ಕೋಟಿ ರೂಪಾಯಿ ಬಂಡವನ್ನು ವಸೂಲಿ ಮಾಡಿದ್ದಾರೆ. ಅದೇ ಪ್ರಕಾರ ಈ ವರ್ಷವೂ ಸಹಿತ ಚುರುಕಿನ ಕಾರ್ಯಾಚರಣೆ ಮೂಲಕ ಬಿಪಿಎಲ್ ಕಾರ್ಡಿಗೆ ಅರ್ಹರಲ್ಲದ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವ ಮೂಲಕ ಅರ್ಹ ಫಲಾನುಭಗಳಿಗೆ ಹೆಚ್ಚಿನ ಸೌಲಭ್ಯಗಳ ಲಾಭ ಆಗುವಂತೆ ನೋಡಿಕೊಳ್ಳುವ ಭರವಸೆಯನ್ನು ಇಲಾಖೆ ಹೊಂದಿದೆ.
ಹೊಸ BPL ರೇಷನ್ ಕಾರ್ಡ್ ಪಡೆಯಲು ಈ 6 ರೂಲ್ಸ್ ಪಾಲಿಸುವುದು ಕಡ್ಡಾಯ!
- 1.2 ಲಕ್ಷ ಅಥವಾ ಅದಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವವರಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ.
- ಬಿಪಿಎಲ್ ಕಾರ್ಡ್ ಪಡೆಯುವ ರೈತರ ಹತ್ತಿರ 3 ಹೆಕ್ಟರ್ ಗಿಂತ ಹೆಚ್ಚು ಭೂಮಿ ಇರಬಾರದು.
- ವೈಯಕ್ತಿಕವಾಗಿ ವೈಟ್ ಬೋರ್ಡ್ ಸ್ವಂತ ಕಾರ್ ಇರುವವರಿಗೆ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ.
- ಸಿಟಿಯಲ್ಲಿ ವಾಸ ಮಾಡುವವರು 1000 ಅಡಿಗಿಂತ ದೊಡ್ಡ ಮನೆ ಹೊಂದಿದ್ದರೆ ರೇಷನ್ ಕಾರ್ಡ್ ಸಿಗುವುದಿಲ್ಲ.
- ಸರ್ಕಾರಿ ಕೆಲಸ ಮಾಡುತ್ತಿರುವವರಿಗೆ ರೇಷನ್ ಕಾರ್ಡ್ ಸೌಲಭ್ಯ ಸಿಗುವುದಿಲ್ಲ.
- ತೆರಿಗೆ ಪಾವತಿ ಮಾಡುತ್ತಿರುವವರಿಗೆ ಬಿಪಿಎಲ್ ರೇಷನ್ ಕಾರ್ಡ್ ಸಿಗುವುದಿಲ್ಲ.
ಈ ತಿಂಗಳು ರದ್ದು ಮಾಡಲಾದ ರೇಷನ್ ಕಾರ್ಡ್ ಗಳ ಪಟ್ಟಿ ಕೆಳಗಿದೆ ನಿಮ್ಮ ಕಾರ್ಡ್ ಸ್ಥಿತಿ ಚೆಕ್ ಮಾಡಿಕೊಳ್ಳಿ
ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ನೋಡುವ ವಿಧಾನ :
ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices
ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.
ನಂತರ ಈ ಪಡಿತರ ಚೀಟಿ ಎಂಬ ಆಯ್ಕೆಯಲ್ಲಿ ರದ್ದು ಮಾಡಲಾದ/ತಡೆಹಿಡಿಯಲಾದ ಪಡಿತರ ಚೀಟಿಯ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ
ಹಂತ 4: ನಂತರ ನೀವು ರದ್ದಾದ ಪಡಿತರ ಚೀಟಿಯ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.
ಈ ಮೇಲಿನ ಹಂತಗಳನ್ನು ಅನುಸರಿಸಿಕೊಂಡು, ನೀವು ಮನೆಯಲ್ಲಿಯೇ ಕುಳಿತುಕೊಂಡು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬಹುದಾಗಿದೆ. ರದ್ದಾಗಿರುವುದಕ್ಕೆ ಕಾರಣವನ್ನು ನೀಡಿದ್ದರೆ ಅವುಗಳನ್ನು ಸರಿಪಡಿಸುವಂತಿದ್ದರೆ ಸರಿಪಡಿಸಿಕೊಂಡು ಪುನಃ ನೀವು ಅರ್ಜಿಗಳನ್ನು ಕೂಡ ಸಲ್ಲಿಸಬಹುದಾಗಿದೆ.
Ration card ಸ್ಥಿತಿಯನ್ನು ಚೆಕ್ ಮಾಡಲು ಕೆಳಗಿನ ಸಲಹೆಗಳನ್ನು ಅನುಸರಿಸಿ:
ಹಂತ 1: ಮೊದಲಿಗೆ,ಕರ್ನಾಟಕ ಸರ್ಕಾರದ “ಮಾಹಿತಿ ಕಣಜ” website ಗೆ ಹೋಗಿ.
https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010
ಹಂತ 2: My Ration card details ವಿವರಗಳ ಪುಟ ತೆರೆದುಕೊಳ್ಳುತ್ತದೆ.
ಹಂತ 3: ನಂತರ ನಿಮ್ಮ ಜಿಲ್ಲೆ ಮತ್ತು ನಿಮ್ಮ ration card ಅಲ್ಲಿ ಇರುವ 12 ಸಂಖ್ಯೆಯ ನಂಬರ್ ಅನ್ನು ನಮೂದಿಸಿ. ನಂತರ ಸಲ್ಲಿಸು/submit ಇದಲ್ಲಿ ಕ್ಲಿಕ್ ಮಾಡಿ. ಅದು ಆದ ಬಳಿಕ my Ration shop details/ನನ್ನ ಪಡಿತರ ಅಂಗಡಿ ವಿವರದ ಪುಟ ತೆರೆಯುತ್ತದೆ. ನಂತರ card status/ಕಾರ್ಡ್ ಸ್ಥಿತಿ ಸಕ್ರಿಯ/active ಎಂದು ತೋರಿಸಿದರೆ ನಮ್ಮ Ration card ಚಾಲ್ತಿ ಇದೆ ಎಂದು ತಿಳಿಯಬಹುದಾಗಿದೆ.
ನಮ್ಮ ರಾಜ್ಯ ಸರ್ಕಾರವು ನಮ್ಮ ration card ಅಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದು ಪಡೆ ಮಾಡುವದಕ್ಕೆ ಅನುಮೋದನೆ ನೀಡಿದೆ. ಮುಂದಿನ ಆದೇಶ ನೀಡುವವರೆಗೂ ಯಾವುದೇ ಹೊಸ Ration card ಮಂಜೂರು ಮಾಡದಂತೆ ನಿರ್ಧಾರ ಮಾಡಿದೆ.
ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Gajendra pm