Ration Card Correction – ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 1 ರಿಂದ ಹತ್ತು ದಿನ ಅವಕಾಶ, ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನಾಂಕ ವಿಸ್ತರಣೆ

WhatsApp Image 2023 08 24 at 05.55.34

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್(Ration card) ತಿದ್ದುಪಡಿಗೆ ದಿನಾಂಕವನ್ನು ವಿಸ್ತರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿಯುತ್ತಿದೆ ಎಂದು ಗೊಂದಲ ಹಾಗೂ ಗಡಿಬಿಡಿಯಲ್ಲಿದ್ದ ಜನರಿಗೆ ಒಂದು ಸಿಹಿ ಸುದ್ದಿ ಎನ್ನಬಹುದು. ಸರ್ಕಾರವು ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಸಲು ದಿನಾಂಕವನ್ನು ವಿಸ್ತರಣೆ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನಾಂಕ ವಿಸ್ತರಣೆ :

ಪಡಿತರ ಚೀಟಿದಾರರು ಪಡಿತರ ಚೀಟಿಯಲ್ಲಿನ ವಿವರಗಳಲ್ಲಿ ಯಾವುದೇ ತಪ್ಪು ಕಂಡುಬಂದಲ್ಲಿ ವಿವರಗಳನ್ನು ಸರಿಪಡಿಸಿಕೊಳ್ಳಲೇಬೇಕು. ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ ಬೆಳಂಬೆಳಗ್ಗೆಯೇ ಠಿಕಾಣಿ ಹೂಡುತ್ತಿದ್ದಾರೆ. ಹಾಗಾಗಿ ಪಡಿತರ ಚೀಟಿಯ ತಿದ್ದುಪಡಿಗೆ ಸರ್ಕಾರವು ಅವಕಾಶವನ್ನು ಒದಗಿಸಿಕೊಟ್ಟಿದೆ. ನಿಮ್ಮ ಪಡಿತರ ಚೀಟಿಯಲ್ಲಿ ಏನಾದರೂ ತಪ್ಪುಗಳಿದ್ದು ಗೃಹಲಕ್ಷ್ಮಿ ಅಥವಾ ಇನ್ನಿತರ ಗ್ಯಾರಂಟಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಲು ತಡವಾಗುತ್ತಿದ್ದರೆ, ಈಗ ಪಡಿತರ ಚೀಟಿಯ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾದ ಅವಕಾಶ ಒದಗಿ ಬಂದಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಪಡಿತರ ಕಾರ್ಡುಗಳಲ್ಲಿ ಕುಟುಂಬದ ಮುಖ್ಯಸ್ಥರ ತಿದ್ದುಪಡಿ ಹಾಗೂ ಸದಸ್ಯರ ಸೇರ್ಪಡೆ ಕ್ರಮಕ್ಕೆ ಆಹಾರ ತಂತ್ರಾಂಶದಲ್ಲಿ ಇಂದು ಆಗಸ್ಟ್ 24ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. 

ಮುಂದಿನ ತಿಂಗಳು ಮತ್ತೊಮ್ಮೆ ಅವಕಾಶ

ಈ ಮೊದಲು ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಆಗಸ್ಟ್ 21 ಕೊನೆಯ ದಿನವಾಗಿತ್ತು. ಆದರೆ, ಸೋಮವಾರ ಸರ್ವರ್ ದೋಷದಿಂದಾಗಿ ಹಲವರು ತೊಂದರೆ ಅನುಭವಿಸಿದ ಕಾರಣ, ಸಾರ್ವಜನಿಕರು ಇನ್ನಷ್ಟು ಕಾಲಾವಕಾಶ ನೀಡುವಂತೆ ಬೇಡಿಕೆಯಿಟ್ಟಿದ್ದರು. ಇದನ್ನು ಪರಿಗಣಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆಗಸ್ಟ್ 23ರವರೆಗೂ ಕಾಲಾವಕಾಶ ನೀಡಲಾಗಿತ್ತು. ಇದೀಗ, ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸ್ವೀಕರಿಸಲಾಗುವುದು ಎಂದು ಹೇಳಲಾಗಿದೆ.

ಪಡಿತರ ಚೀಟಿಯ ತಿದ್ದುಪಡಿಯನ್ನು ಎಲ್ಲಿ ಮಾಡಲಾಗುತ್ತದೆ :

ಆನ್‌ಲೈನ್‌ ಅಥವಾ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಸೇವೆ ಪಡೆಯಬಹುದು. ಆನ್ಲೈನ್ ನಲ್ಲಿ ಕೂಡ ನೀವು ತಿದ್ದುಪಡಿಯನ್ನು ಮಾಡಿಕೊಳ್ಳಬಹುದು ಅದಕ್ಕಾಗಿ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ : https://ahara.kar.nic.in ಆದರೆ ಆನ್ಲೈನ್ನಲ್ಲಿ ನೀವು ಅರ್ಜಿಯನ್ನು ಸಲ್ಲಿಸುವಾಗ ಬಯೋಮೆಟ್ರಿಕ್ ಕೇಳಲಾಗುತ್ತದೆ ಆದ್ದರಿಂದ ನೀವು ಗ್ರಾಮ ಪಂಚಾಯಿತಿ ಕಚೇರಿ ಅಥವಾ ಬಯೋಮೆಟ್ರಿಕ್ ಕೇಂದ್ರಕ್ಕೆ ಭೇಟಿ ನೀಡುವುದು ಸೂಕ್ತವಾಗಿದೆ.

whatss

ಮೇಲೆ ತಿಳಿಸಲಾದ ಕೇಂದ್ರಗಳಿಗೆ ತೆರಳಿ ನಿಮ್ಮ ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಿಸಿಕೊಂಡ ನಂತರ ನಿಮಗೆ ಒಂದು ಸ್ವೀಕೃತಿಯನ್ನು ನೀಡುತ್ತಾರೆ, ಅದನ್ನು ನೀವು ತೆಗೆದುಕೊಂಡು ಆಹಾರ ಇಲಾಖೆಯ ಕಚೇರಿಗೆ ನೀಡಬೇಕು. ಆಹಾರ ಇಲಾಖೆಯಲ್ಲಿ ಕೆಲವೊಮ್ಮೆ ದಾಖಲೆಯನ್ನು ಕೇಳುವ ಅವಕಾಶ ಇರುತ್ತದೆ. ಹಾಗಾಗಿ ನೀವು ಆಹಾರ ಇಲಾಖೆಗೆ ತೆರಳುವಾಗ ಆಧಾರ್ ಕಾರ್ಡಿನ ಪ್ರತಿ ಹಾಗೂ ಪಡಿತರ ಚೀಟಿಯ ಪ್ರತಿಯನ್ನು ಕೊಂಡೊಯ್ಯುವುದು ಒಳ್ಳೆಯದು.

ಪಡಿತರ ಚೀಟಿಯ ತಿದ್ದುಪಡಿಗೆ  ದಿನಾಂಕವನ್ನು ವಿಸ್ತರಣೆ ಮಾಡಿರುವ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!