ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ e-kyc ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಡಲಾಗುತ್ತದೆ, ನೀವೇನಾದ್ರೂ ಗೃಹಲಕ್ಷ್ಮಿಯ ಉಚಿತ ರೂ. 2000 ಗೆ ಅರ್ಜಿ ಸಲ್ಲಿಸಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಲು ಏನು ಮಾಡಬೇಕೆನ್ನುವುದರ ಬಗ್ಗೆ ತಿಳಿದುಕೊಳ್ಳೋಣ, ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ 2000/- ಹಣ ಇಂದಿನಿಂದಲೇ ಖಾತೆಗೆ :
ಇದೇ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಏಕಕಾಲಕ್ಕೆ ರಾಜ್ಯದ ಯಜಮಾನಿಯರಿಗೆ 2 ಸಾವಿರ ರೂ ಜಮಾ ಆಗಲಿದೆ. ಈ ಬೃಹತ್ ಸಮಾರಂಭಕ್ಕೆ ಲಕ್ಷ್ಯಕೂ ಹೆಚ್ಚಿನ ಮಹಿಳೆಯರು ಆಗಮನ ನೀಡುವ ಸಾಧ್ಯತೆ ಇದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆ ಜೋರಾಗಿದೆ. 80×60 ವೇದಿಕೆ, 114 ಅಡಿ ಎಲ್ಇಡಿ ಟಿವಿ, 1 ಲಕ್ಷ ಜನ ಕೂರಲು ಆಸನ, ಮೈದಾನದ ತುಂಬೆಲ್ಲ ರೈನ್ ಪ್ರೂಫ್ ಜರ್ಮನ್ ಟೆಂಟ್, ಪ್ರತಿ ಬ್ಲಾಕ್ಗೆ ಎಲ್ಇಡಿ ಪರದೆ, ಶೌಚಗೃಹ, ಕುಡಿಯುವ ನೀರು ಹೀಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತಂದು ಸಮಾರಂಭದಲ್ಲಿ ತಮ್ಮ ಗ್ಯಾರಂಟಿ ಯೋಜನೆಯ ಯಶಸ್ಸಿನ ಪ್ರದರ್ಶನವನ್ನು ಮೆರಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಬ್ಯಾಂಕ್ ಖಾತೆಗೆ ಹಣ ಬರಲು e-kyc ಕಡ್ಡಾಯ
ಬ್ಯಾಂಕ್ ಅಕೌಂಟ್ ಗು ಸಹ ekyc ಇದೆ, ಗೃಹಲಕ್ಷ್ಮಿ ಯೋಜನೆಯ ekyc ಎಂದರೆ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಫೋನ್ ನಂಬರ್ ಗೆ OTP ಬರುವುದು, ನೀವು ಅರ್ಜಿ ಸಲ್ಲಿಸುವಾಗ ನಿಮ್ಮ ಬ್ಯಾಂಕ್ ಖಾತೆ ವಿವರಣೆ ಕೊಟ್ಟಿಲ್ಲವಾದರೆ ನಿಮ್ಮ ಆಧಾರ್ ಕಾರ್ಡ್ ಮ್ಯಾಪಿಂಗ್ ಆದ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುತ್ತದೆ ಉದಾಹರಣೆಗೆ ನೀವು ಈಗಾಗಲೇ ಅನ್ನ ಭಾಗ್ಯದ ಅಕ್ಕಿ ಹಣ ಪಡೆದುಕೊಂಡಿದ್ದರೆ ಅದೇ ಅಕೌಂಟ್ ಗೆ ಹಣ ಜಮಾ ಆಗುತ್ತದೆ, ಒಂದು ವೇಳೆ ನಿಮ್ಮ ಅಕ್ಕಿ ಹಣ ಇನ್ನೂ ಜಮೆ ಆಗಿರದೆ ಇದ್ದರೆ ತಪ್ಪದೇ e-kyc & ಆಧಾರ್ ಮ್ಯಾಪಿಂಗ್ ಮಾಡಿಸಿಕೊಂಡು ಮಾಡಿಸಿಕೊಂಡು ಸರಿ ಮಾಡಿಕೊಳ್ಳಿ ಇಲ್ಲವಾದರೆ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬರದೇ ಇರಬಹುದು. ಮತ್ತು ನೀವೇನಾದರೂ ಸಲ್ಲಿಸುವಾಗ ನಿಮ್ಮ ಬ್ಯಾಂಕ್ ಅಕೌಂಟ್ ಡೀಟೇಲ್ಸ್ ಅನ್ನು ಕೊಟ್ಟಿದ್ದರೆ ಆ ಬ್ಯಾಂಕ್ ಖಾತೆಯನ್ನು ನೀವು ಚಾಲ್ತಿಯಲ್ಲಿ ಇದಿಯೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಿ ಒಂದು ವೇಳೆ ಬ್ಯಾಂಕ್ ಖಾತೆ ಚಾಲ್ತಿ ಇಲ್ಲದಿದ್ದರೆ ಹಣ ನಿಮಗೆ ಬರದೇ ಇರಬಹುದು.
ಗೃಹಲಕ್ಷ್ಮಿಯ ಮನೆ ಯಜಮಾನಿಯರ ಪಟ್ಟಿ ಬಿಡುಗಡೆ.
ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲು ಅಗಸ್ಟ ತಿಂಗಳ ಮನೆ ಯಜಮಾನಿಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ. ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/Home/EServices
ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ
ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಖಾತೆಯನ್ನು ಚೆಕ್ ಮಾಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಹಣ ಬಂದ ತಕ್ಷಣ ಮೆಸೇಜ್ ಕೂಡ ಬರಲಿದೆ :
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಿದ ತಕ್ಷಣ, ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಇದ್ದ ಮೊಬೈಲ್ ನಂಬರಿಗೆ ಹಣ ಜಮಾ ಆಗಿರುವುದರ ಬಗ್ಗೆ ಮೆಸೇಜ್ ಕೂಡ ಬರುತ್ತದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿಯೇ ಮೈಸೂರು ಜಿಲ್ಲೆಯ ಜನರಿಗೆ ಅನ್ನಭಾಗ್ಯ ಯೋಜನೆಯ ಹಣ ದೊರೆತಿದೆ. ಜಿಲ್ಲೆಯಲ್ಲಿ 50432 ಅಂತ್ಯೋದಯ ಅನ್ನ ಯೋಜನೆ ಕಾರ್ಡ್ದಾರ ಕುಟುಂಬದ ಒಟ್ಟು 2,17,199 ಫಲಾನುಭವಿಗಳು, 6,61,290 ಬಿಪಿಎಲ್ ಕಾರ್ಡ್ಗಳ 20,83,627 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ವಿತರಿಸ ಬೇಕಿದೆ. ಅದರಂತೆ ಎಂದಿನಂತೆ ತಲಾ ಐದು ಕೆಜಿ ಅಕ್ಕಿ ವಿತರಿಸಲಾಗಿದೆ. ಇನ್ನುಳಿದ ಐದು ಕೆಜಿ ಅಕ್ಕಿಗೆ ಬದಲಾಗಿ 170 ರೂ.ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಎಲ್ಲಾ ಹಂತಗಳಲ್ಲಿಯೂ ಪ್ರತಿ ಜಿಲ್ಲೆಗೆ ಅನ್ನ ಭಾಗ್ಯದ ಹಣವನ್ನು ಜಮಾ ಮಾಡಲಾಗುತ್ತದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ