ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಂದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಬೆಳಗ್ಗೆ 11 ಗಂಟೆಯಿಂದ ಸಮಾರಂಭ ನಡೆಯುತ್ತಿದೆ. ಗೃಹಲಕ್ಷ್ಮಿ ಯೋಜನೆ ಚಾಲನೆ ನೀಡಿದ ಸಮಯದಿಂದನೇ ಅನೇಕ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದೆ. ನಿಮಗೂ ಕೂಡ ಹಣ ಜಮಾ ಆಗಿದ್ದಿಯೇ?, ಹಣ ಜಮಾ ಆಗುವುದಾದರೆ ನಿಮಗೆ ಏನೆಂದು ಎಸ್ಎಮ್ಎಸ್(SMS) ಬರುತ್ತದೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಯೋಜನೆ(gruhalakshmi scheme)ಗೆ ಚಾಲನೆ ನೀಡಿ ಆಯ್ತು :
ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯನವರು ಚಾಲನೆ ನೀಡಿದರು. ಅದೇ ರೀತಿಯಾಗಿ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಸಚಿವರು ಮಹತ್ವಾಕಾಂಕ್ಷೆಯ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನಂತರ ಅವರು ಮಾತನಾಡಿದರು. ಈ ವೇಳೆ ಕಳೆದ 100 ದಿನಗಳಲ್ಲಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ.
ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಇವತ್ತು ನಾವು ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಲಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ. ನಾವು ಹೇಳಿದಂತೆ ರಾಜ್ಯದ ಹೆಣ್ಣು ಮಕ್ಕಳು ಉಚಿತವಾಗಿ ಶಕ್ತಿ ಯೋಜನೆ ಜಾರಿಯಾಗಿದೆ. ಮಹಿಳೆಯರೀಗ ಉಚಿತವಾಗಿ ಸಂಚರಿಸುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಗೃ ಹ ಜ್ಯೋತಿಯಡಿ 200 ಯುನಿಟ್ ವಿದ್ಯುತ್ ನೀಡಲಾಗುತ್ತಿದೆ. ನಮ್ಮ ಐದು ಗ್ಯಾರಂಟಿಗಳ ಪೈಕಿ 4 ಗ್ಯಾರಂಟಿಗಳು ಮಹಿಳೆಯರಿಗಾಗಿ ಮಾಡಿರುವ ಯೋಜನೆಗಳು ಎಂದು ರಾಹುಲ್ ಗಾಂಧಿ ಮೈಸೂರಿನಲ್ಲಿ ಗುಹಾಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಿದ ನಂತರ ಮಾತನಾಡಿದರು.
ನಿಮ್ಮ ಫೋನಿಗೆ ಗೃಹಲಕ್ಷ್ಮಿ ಹಣದ SMS ಹೀಗೆ ಬರುತ್ತದೆ :
ಡಿಜಿಟಲ್ ಬಟನ್ ಅನ್ನು ಒತ್ತುವುದರ ಮೂಲಕ ಇಂದು ಚಾಲನೆಯನ್ನು ನೀಡಲಾಗಿದೆ ಇದೇ ಸಮಯದಲ್ಲಿ ಎಲ್ಲಾ ಮಹಿಳೆಯರ ಖಾತೆಗೆ ಹಣವು ಜಮಾ ಆಗುತ್ತಿದೆ. ಹಣ ಜಮಾ ಆದ ತಕ್ಷಣ ನಿಮಗೊಂದು ಎಸ್ಎಂಎಸ್ ಬರುತ್ತದೆ. ಅ SMS ನಲ್ಲಿ ನಿಮಗೆ ಅಭಿನಂದನೆಗಳನ್ನು ತಿಳಿಸಲಾಗುತ್ತದೆ. ಮುಂದುವರೆದು, ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ನಂಬರನ್ನು ಅನುಮೋದಿಸಲಾಗಿದೆ ಎಂದು ಮೆಸೇಜ್ ಬರುತ್ತದೆ. ಆಗಸ್ಟ್ ತಿಂಗಳ 2018 ಮಾಡಲಾಗುತ್ತದೆ. ಇಂದು ಸರ್ಕಾರದ ವತಿಯಿಂದ ಕಳುಹಿಸಲಾದ ಮೆಸೇಜ್ ನಲ್ಲಿ ಬರೆದಿರಲಾಗುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯೇ ಎಂದು ಹೇಗೆ ಚೆಕ್ ಮಾಡುವುದು?:
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ನೀವು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಅನ್ನು ನೀಡಿರುತ್ತೀರಿ, ಆದ್ದರಿಂದ ನಿಮ್ಮ ಫೋನಿಗೆ ಎಸ್ಎಂಎಸ್ ಬರುತ್ತದೆ. ಅದನ್ನು ನೀವು ಚೆಕ್ ಮಾಡಿ ನೋಡಿ. ಒಂದು ವೇಳೆ ಎಸ್ಎಂಎಸ್ ಬರದಿದ್ದಲ್ಲಿ, ಆನ್ಲೈನ್ ಬ್ಯಾಂಕಿಂಗ್ ಮೂಲಕ ನೀವು ಚೆಕ್ ಮಾಡಬಹುದು. ಗೃಹಲಕ್ಷ್ಮಿ ಯೋಜನೆಯ ನೋಂದಣಿ ಸ್ಥಿತಿ ಪರಿಶೀಲನೆ ಮಾಡುವ ಮೂಲಕ ಇಂದು ನಿಮ್ಮ ಬ್ಯಾಂಕ್ ಖಾತೆಗೆ 2 ಸಾವಿರ ರೂಪಾಯಿ ಜಮಾ ಆಗುವುದೇ ಎಂದು ಖಚಿತಪಡಿಸಿಕೊಳ್ಳಬಹುದು. ಎಲ್ಲಾದರೂ ಅರ್ಜಿ ಸಲ್ಲಿಕೆ ತಪ್ಪಾಗಿದ್ದಲ್ಲಿ ಅಥವಾ ಇನ್ನೂ ಪ್ರಕ್ರಿಯೆ ಆಗದೆ ಇದ್ದರೆ ಇಂದು ನಿಮ್ಮ ಖಾತೆಗೆ 2 ಸಾವಿರ ರೂಪಾಯಿ ಬರುವುದಿಲ್ಲ. ಇಂದು 50 ಲಕ್ಷ ಜನರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗುವ ಪ್ರಕ್ರಿಯೆ ಪ್ರಾರಂಭವಾಗಿದೆ.
ಗೃಹಲಕ್ಷ್ಮಿ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ
ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು
ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ
ಗೃಹಲಕ್ಷ್ಮಿ ಯೋಜನೆಯ ಹಣದ ಜಮೆ ಬಗ್ಗೆ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
9743087713