ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ DBT(Direct Benefit transfer) ಸ್ಟೇಟಸ್ ಚೆಕ್ ಮಾಡುವ ವಿಧಾನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿನ್ನೆ ಸುದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಯಾವ ಕಾರಣಕ್ಕಾಗಿ ಇನ್ನೂ ಹಣ ಜಮಾ ಆಗಿಲ್ಲ?, ಮತ್ತು ಯಾವಾಗ ಹಣ ಬರುತ್ತದೆ?, ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಆಗಸ್ಟ್ ನಿಂದ ಮಹಿಳೆಯರ ಕೈಯಲ್ಲಿ 2000 ರೂ :
ಗೃಹಲಕ್ಷ್ಮಿ ಯೋಜನೆ(gruhalakshmi scheme) ನಾಳೆ ಜಾರಿಗೆ ಬಂದ ನಂತರ, ಏಕಕಾಲಕ್ಕೆ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರಿಗೂ ಕೂಡ ಖಾತೆಗೆ ಎರಡು ಸಾವಿರ ರೂಗಳ ಹಣ ಜಮಾ ಆಗಲಿದೆ. ಈ ಯೋಜನೆಯ ಮೂಲಕ 1 ಕೋಟಿ 33 ಲಕ್ಷ ಕುಟುಂಬದ ಯಜಮಾನಿಗೆ 2000 ರೂ. ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಐದೂ ಗ್ಯಾರಂಟಿ ಜಾರಿಯಾದ ಬಳಿಕ ಒಂದು ಕುಟುಂಬಕ್ಕೆ 4 ರಿಂದ 5 ಸಾವಿರ ರೂ. ದೊರೆಯುತ್ತದೆ.
ಗೃಹಲಕ್ಷ್ಮಿ ಯೋಜನೆಯ 2000/- ಹಣ ಫಲಾನುಭವಿಗಳ ಖಾತೆಗೆ :
ಈಗಾಗಲೇ ಇಲಾಖೆಯ ವತಿಯಿಂದ ಹಣ ಬಿಡುಗಡೆಯಾಗಿದೆ, ಇಲಾಖೆಯಿಂದ ಬಿಡುಗಡೆಯಾದ ಹಣವು ಬ್ಯಾಂಕುಗಳಿಗೆ ವರ್ಗಾವಣೆಯಾಗುತ್ತದೆ, ನಂತರ ಬ್ಯಾಂಕ್ ಸಿಬ್ಬಂದಿಗಳು ಆಯಾ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡುತ್ತಾರೆ. ಬ್ಯಾಂಕಿನಲ್ಲಿ ಒಂದು ದಿನಕ್ಕೆ ಇಂತಿಷ್ಟು ಹಣವನ್ನು ಜಮಾ ಮಾಡಬೇಕು ಎಂಬ ನಿಯಮವಿರುತ್ತದೆ ಹಾಗಾಗಿ ಎಲ್ಲಾ ಫಲಾನುಭವಿಗಳಿಗೆ ಒಂದೇ ದಿನದಲ್ಲಿ ಹಣವನ್ನು ಖಾತೆಗೆ ವರ್ಗಾವಣೆ ಮಾಡಲು ಆಗುವುದಿಲ್ಲ. ಆದ್ದರಿಂದ ಹಂತ ಹಂತವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಇನ್ನೇನು ಎರಡು ಅಥವಾ ಮೂರು ದಿನಗಳಲ್ಲಿ ಅಂದರೆ ಶನಿವಾರದ ಒಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಜಮಾವಾಗುತ್ತದೆ ಎಂದು ಸುದ್ದಿಗೋಷ್ಠಿಯ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. 59 ಲಕ್ಷ ಫಲಾನುಭವಿಗಳಿಗೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ.
ಏಳರಿಂದ ಎಂಟು ಲಕ್ಷ ಫಲಾನುಭವಿಗಳ ಖಾತೆಗೆ ಹಣವನ್ನು ಏಕೆ ಹಾಕಲು ಆಗುತ್ತಿಲ್ಲ?:
ಈಗಾಗಲೇ 59 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡಲಾಗಿದ್ದು, ಏಳರಿಂದ ಎಂಟು ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಯ ಅಕೌಂಟ್ ಎರರ್ ತೋರಿಸುತ್ತದೆ. ಈ 8 ಲಕ್ಷ ಫಲಾನುಭವಿಗಳಿಗೆ ಹಣ ಏಕೆ ವರ್ಗಾವಣೆ ಆಗುತ್ತಿಲ್ಲ ಎಂದರೆ, ಅವರು ಹಲವಾರು ವರ್ಷಗಳಿಂದ ಆ ಖಾತೆಯನ್ನು ಬಳಕೆ ಮಾಡದಿರುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ನೀಡಿದ ಖಾತೆಯಲ್ಲಿ ಯಾವುದೇ ರೀತಿಯ ವಹಿವಾಟುಗಳು ಇಲ್ಲದೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂತವರ ಖಾತೆಯ ಫಲಾನುಭವಿಗಳ ಹೆಸರುಗಳನ್ನು ಪಟ್ಟಿ ಮಾಡಿ ಆಯಾ ಗ್ರಾಮದ ಆಶಾ ಕಾರ್ಯಕರ್ತರಿಗೆ ಪಟ್ಟಿಯನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ಆ ಜನರಿಗೆ ವಿಷಯವನ್ನು ಮುಟ್ಟಿಸಿ, ಖಾತೆಯನ್ನು ಸರಿ ಮಾಡಿಸಿಕೊಳ್ಳುವಂತೆ ಸೂಚಿಸುತ್ತಾರೆ. ನಂತರ ಆ ಏಳರಿಂದ ಎಂಟು ಫಲಾನುಭವಿಗಳಿಗೆ ಗೃಹಲಕ್ಷ್ಮಿಯ ಹಣ ಜಮಾ ಆಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮಿ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ
ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು
ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಆಶಾ – ಅಂಗನವಾಡಿ ಕಾರ್ಯಕರ್ತೆಯರಿಗೂ ‘ಗೃಹಲಕ್ಷ್ಮಿ’ ಹಣ ಬರಲಿದೆ :
ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಜಾರದೆಯ ಸಂದರ್ಭದಲ್ಲಿ ಜೊತೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇನ್ನೊಂದು ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅದೇನೆಂದರೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ರೂ. ಹಣವು ಆಶಾ- ಅಂಗನವಾಡಿ ಕಾರ್ಯಕರ್ತೆಯರಿಗೂ ಕೂಡ ದೊರೆಯಲಿದೆ. ಈ ಹೇಳಿಕೆಯನ್ನು ಚಾಮರಾಜನಗರದಲ್ಲಿ ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಈ ಹೇಳಿಕೆಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಣ ಬರುವುದಿಲ್ಲ ಎಂಬ ಅನೇಕ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಅಲ್ಲದೆ ಯೋಜನೆಗೆ ನೋಂದಣಿ ಮಾಡಲು ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಎಲ್ಲಾ ಮಹಿಳೆಯರಿಗೂ ಎರಡು ಸಾವಿರ ರೂಗಳನ್ನು ನೀಡುತ್ತಿರುವ ಈ ಗೃಹಲಕ್ಷ್ಮಿ ಯೋಜನೆಯ ಕುರಿತಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ