ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ & ಅನ್ನ ಭಾಗ್ಯದ ಯೋಜನೆಯ ಹಣ ಬಂದಿರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇನ್ನು ನಮ್ಮ ಖಾತೆಗೆ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಇದೊಂದು ಮಹತ್ವದ ಸುದ್ದಿಯಾಗಿತ್ತು ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಆಗಸ್ಟ್ ತಿಂಗಳ ಅನ್ನ ಭಾಗ್ಯ ಯೋಜನೆ(Annabhagya scheme)ಯ ಹಣ ಬಂದಿದೆ :
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಅನ್ನಭಾಗ್ಯ ಯೋಜನೆ’ಯ ಜುಲೈ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ಇದೀಗ ಆಗಸ್ಟ್ ತಿಂಗಳ ಹಣ ಕೂಡ ಬಿಡುಗಡೆ ಮಾಡಲಾಗಿದೆ. ನಿಮ್ಮ ಖಾತೆಗೂ ಕೂಡ ಹಣ ಜಮಾ ಆಗಿದೆಯೇ ಎಂಬುದನ್ನು ಡಿಬಿಟಿ ಸ್ಟೇಟಸ್ ಚೆಕ್ ಮಾಡುವುದರ ಮೂಲಕ ಅಥವಾ ನಿಮ್ಮ ಖಾತೆಯನ್ನು ಚೆಕ್ ಮಾಡುವುದರ ಮೂಲಕ ನೋಡಿಕೊಳ್ಳಬಹುದಾಗಿದೆ.
ಇನ್ನು ನಮ್ಮ ಖಾತೆಗೆ ಹಣ ಬಂದೇ ಇಲ್ಲ ಎನ್ನುತ್ತಿರುವವರಿಗೆ ಗುಡ್ ನ್ಯೂಸ್
ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, 63 ಲಕ್ಷ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ಬಂದಿದೆ, ಹೌದು ನಿನ್ನೆಯಿಂದ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದೆ, ಕಳೆದ ತಿಂಗಳು ಅನ್ನೊ ಭಾಗ್ಯದ ಹಣ ಬಂದು ಈ ತಿಂಗಳು ಗೃಹಲಕ್ಷ್ಮಿ ಹಣ ಬಂದಿಲ್ಲ ಎನ್ನುವ ಹಲವರಿಗೆ ನಿನ್ನೆ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ಒದಗಿದೆ. ಈ ಕೆಳಗಿನ ಫೋಟೋವನ್ನು ನೀವು ಗಮನಿಸಬಹುದು.
ನಿನ್ನೆ 14ನೇ ತಾರೀಕಿಗೆ ಹಣ ಬಂದಿರುವ ಬ್ಯಾಂಕಿನ sms ನೀವು ಗಮನಿಸಬಹುದು. ಹೀಗೆ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಆಗುತ್ತಿದೆ. ನಿಮಗೂ ಹಣ ಬಂದಿಲ್ಲವಾದರೆ ದಯವಿಟ್ಟು ಒಂದು ಅಥವಾ ಎರಡು ದಿನದಲ್ಲಿ ಜಮಾ ಆಗುವ ಸಾಧ್ಯತೆ ಇದೆ. ಒಂದು ವೇಳೆ ನಿಮಗೆ ಅಕ್ಕಿ ಹಣ ಮತ್ತು ಗೃಹಲಕ್ಷ್ಮಿ ಎರಡು ಹಣ ಬಂದಿಲ್ವಾ ಆದರೆ ದಯವಿಟ್ಟು ಕೆಳಗಿನ ವಿಡಿಯೋ ನೋಡಿ ಪರಿಹಾರವನ್ನು ಕಂಡುಕೊಳ್ಳಿ.
ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕಾಗಿ 2023-24ನೇ ಸಾಲಿಗೆ 17,500 ಕೋಟಿ ರೂ ನಿಗದಿ ಪಡಿಸಲಾಗಿದೆ. ಅದರ ಮೊದಲ ಕಂತಾಗಿ 4,375 ಕೋಟಿ ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಇಲಾಖೆಯ ಪ್ರಸ್ತಾವನೆಯಂತೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಷರತ್ತು ವಿಧಿಸಿ, ಮೊದಲ ಕಂತಿನ ಅನುದಾನವಾಗಿ ಅಂದರೆ ಆಗಸ್ಟ್, ಸೆಪ್ಟೆಂಬರ್ ಗೆ ರೂ.4,600 ಕೋಟಿ ಅನುದಾವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಗೃಹಲಕ್ಷ್ಮಿಯರಿಗೆ ಆಗಸ್ಟ್, ಸೆಪ್ಟೆಂಬರ್ ತಿಂಗಳ 2000 ರೂ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ.
2ನೇ ಕಂತಿನ ಹಣ ಯಾವಾಗ ಬರುತ್ತೆ?
ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಮತ್ತು ಹಣ ವರ್ಗಾವಣೆ ಮಾಡುವುದಕ್ಕೆ ಒಂದೇ ವೆಬ್ಸೈಟ್ ಇರುವುದರಿಂದ ಆಗಸ್ಟ್ ತಿಂಗಳ ಪ್ರಕ್ರಿಯೆಯಲ್ಲಿ ತಡವಾಗಿದೆ ಆದರೆ ಈ ಸೆಪ್ಟೆಂಬರ್ ತಿಂಗಳಿನಿಂದ ಹೀಗೆ ಆಗುವುದಿಲ್ಲ ಪ್ರತಿ ತಿಂಗಳು 15ನೇ ತಾರೀಖಿನ ಒಳಗಾಗಿ ಎಲ್ಲಾ ಮನೆ ಒಡತಿಯರ ಖಾತೆಗೆ ರೂ.2000 ಜಮಾ ಮಾಡಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದೇ ತಿಂಗಳ 15 ಅಥವಾ 16 ನೇ ತಾರೀಖಿನ ಒಳಗಾಗಿ ಮೊದಲ ಕಂತಿನ ಜೊತೆಗೆ ಎರಡನೇ ಕಂತಿನ ಹಣವನ್ನು ಸೇರಿಸಿ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಆಗಸ್ಟ್ ತಿಂಗಳ ಹಣ ಬರದೆ ಇದ್ದವರು ಈ ಸೆಪ್ಟೆಂಬರ್ ತಿಂಗಳಿನಲ್ಲಿ ಒಂದೇ ಬಾರಿಗೆ ರೂ.4,000 ಪಡೆಯುತ್ತಾರೆ.
DBT ಸ್ಟೇಟಸ್ ನಲ್ಲಿ ಹೀಗೆ ಇದ್ದರೆ ಹಣ ಬರುವುದಿಲ್ಲ :
ನಿಮ್ಮ ಖಾತೆಗೆ ಹಣ ಬಂದಿದೆಯೇ ಅಥವಾ ಬಂದಿಲ್ಲದಿದ್ದರೆ ಹೇಗೆ ಚೆಕ್ ಮಾಡುವುದು ಎಂಬುದನ್ನು ನೋಡುವ ವಿಧಾನವನ್ನು ಕೆಳಗೆ ನೀಡಲಾಗಿದೆ. ಅದಕ್ಕೂ ಮುಂಚೆ DBT ಸ್ಟೇಟಸ್ ನಲ್ಲಿ ಹೇಗೆ ಇದ್ದರೆ ಹಣ ಜಮಾ ಆಗುವುದಿಲ್ಲ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಒಂದು ವೇಳೆ ನೀನು ಡಿ ಬಿಬಿಟಿ ಸ್ಟೇಟಸ್ ಚೆಕ್ ಮಾಡಿದಾಗ, Aadhaar authentication check failed ಇಂದು ಬಂದರೆ ನಿಮ್ಮ ಖಾತೆಗೆ ಹಣ ಜಮಾ ಆಗುವುದಿಲ್ಲ ಎಂದರ್ಥ. ನೀವು ಆಧಾರ್ ಕಾರ್ಡನ್ನು ಬ್ಯಾಂಕ್ ಅಕೌಂಟ್ ಗೆ ಲಿಂಕ್ ಮಾಡದಿದ್ದರೆ ಈ ಮೆಸೇಜ್ ಬರುತ್ತದೆ. ಹಾಗಾಗಿ ನೀವು ಬ್ಯಾಂಕಿಗೆ ತೇರಳಿ, ಬ್ಯಾಂಕಿನ NPCI ಲಿಂಕ್ ಅನ್ನು ಆಧಾರ್ ಕಾರ್ಡಿನೊಂದಿಗೆ ಮಾಡಿಸಿದರೆ ಮುಂದಿನ ತಿಂಗಳ ಹಣ ಹಾಗೂ ಇನ್ನಿತರ ಯೋಜನೆಗಳ ಉಪಯೋಗವನ್ನು ನೀವು ಪಡೆದುಕೊಳ್ಳಬಹುದಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದುನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Sir