ಕರ್ನಾಟಕ ರಾಜ್ಯ ಸರ್ಕಾರದ(state government ) ಸಮಾಜ ಕಲ್ಯಾಣ ಇಲಾಖೆಯು(social welfare office ) ವಿವಿಧ ಕೋರ್ಸ್ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ (first grade) ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ SC ಮತ್ತು ST ವಿದ್ಯಾರ್ಥಿಗಳು ಮಾತ್ರ ಈ ಪ್ರೋತ್ಸಾಹಧನ(prize money)ಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಏನಿದು ಅಂತ ತಿಳಿದುಕೊಳ್ಳ ಬೇಕೆ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಪ್ರೋತ್ಸಾಹ ಧನಕ್ಕೆ ಈಗಲೇ ಅರ್ಜಿ ಸಲ್ಲಿಸಿ :
ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2023 ಕೊನೆಯ ದಿನವಾಗಿದೆ. ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಪ್ರಸಕ್ತ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ(pass) SC ಮತ್ತು ST ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ(social welfare ) ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ಪೂರ್ಣಗೊಳಿಸಿದ, ಅಂದರೆ ಮೆಟ್ರಿಕ್ ನಂತರದ ವಿದ್ಯಾಭ್ಯಾಸವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆನ್ಲೈನಲ್ಲಿ ಸಲ್ಲಿಸಿ :
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ https://sw.kar.nic.in/
ಆನ್ಲೈನ್ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ. ಆನ್ಲೈನ್ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖಾ ವೆಬ್ಸೈಟ್ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.
ಯಾವ ಕೋರ್ಸ್ ಮಾಡುತ್ತಿರುವವರಿಗೆ ಎಷ್ಟು ಪ್ರೋತ್ಸಾಹ ಧನ ದೊರೆಯುತ್ತದೆ :
ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ ವಿದ್ಯಾರ್ಥಿಗಳಿಗೆ -ವಾರ್ಷಿಕ : ರೂ. 20,000.
ಪದವಿ ವಿದ್ಯಾರ್ಥಿಗಳಿಗೆ : ವಾರ್ಷಿಕ ರೂ. 25,000.
ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ : ವಾರ್ಷಿಕ ರೂ. 30,000.
ಅಗ್ರಿಕಲ್ಚರ್, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ – ವಾರ್ಷಿಕ ರೂ. 35,000.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು.
ಅಂಕಪಟ್ಟಿ ಪ್ರತಿ.
ಜಾತಿ ಪ್ರಮಾಣ ಪತ್ರ.
ಆದಾಯ ಪ್ರಮಾಣ ಪತ್ರ.
ಆಧಾರ್ ಕಾರ್ಡ್ ಪ್ರತಿ.
ಬ್ಯಾಂಕ್ ಪಾಸ್ ಬುಕ್ ಪ್ರತಿ.
ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
ಅರ್ಜಿಯನ್ನು ಸಲ್ಲಿಸುವ ವಿಧಾನ:
ಹಂತ 1: ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ https://sw.kar.nic.in/
ಹಂತ 2: ವಿದ್ಯಾರ್ಥಿವೇತನ ಲಿಂಕ್ ಹೊಂದಿರುವ ಮುಖಪುಟ ತೆರೆಯುತ್ತದೆ.
ಹಂತ 3: ಈಗ ಇಲ್ಲಿ ಆನ್ ಲೈನ್ ಅಪ್ಲಿಕೇಶನ್ ಲಿಂಕ್ ಕ್ಲಿಕ್ ಮಾಡಿ.
ಹಂತ 4: ಅರ್ಜಿ ನಮೂನೆಯಲ್ಲಿ ಕೇಳಲಾದ ವಿವರಗಳನ್ನು ನಮೂದಿಸಿ.
ಹಂತ 5: ಹೇಳಲಾದ ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್ ಲೋಡ್ ಮಾಡಿ.
ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ